ವಿದ್ಯಾರ್ಥಿನಿಯರ ಜೊತೆಯಲ್ಲೇ ಡ್ಯಾಂನಲ್ಲಿ ಸ್ನಾನ ಮಾಡಿದ ಸರ್ಕಾರಿ ಶಾಲಾ ಪ್ರಿನ್ಸಿಪಾಲ್ ಸಸ್ಪೆಂಡ್
ರಾಜಸ್ಥಾನದಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಕ್ಕಳನ್ನಾ ರಕ್ಷಣೆ ಮಾಡಬೇಕಾದ ಶಾಲಾ ಪ್ರಾಂಶುಪಾಲರೊಬ್ಬರು ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಅಮಾನತುಗೊಂಡಿದ್ದಾನೆ.
ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ಲಾಲ್ ಚಂದ್ ಮೀನಾ ಎಂಬಾತನೇ ಈ ಕೃತ್ಯವೆಸಗಿದ ಆರೋಪಿ.

ಶಾಲಾ ವಿದ್ಯಾರ್ಥಿನಿಯರ ಜೊತೆ ಈತ ಡ್ಯಾಂ ಒಂದರಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆದ ಬೆನ್ನಲ್ಲೇ, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪರಿಸ್ಥಿತಿಯ ಗಂಭೀರತೆ ಅರಿತ ರಾಜಸ್ಥಾನದ ಶಿಕ್ಷಣ ನಿರ್ದೇಶನಾಲಯವು ತಕ್ಷಣವೇ ಈ ಕಠಿಣ ಕ್ರಮ ಕೈಗೊಂಡಿದೆ.
ಡ್ಯಾಂನಲ್ಲಿ ವಿದ್ಯಾರ್ಥಿನಿಯರ ಜೊತೆ ಸ್ನಾನ: ವಿಡಿಯೋ ವೈರಲ್
ಸಾಮಾನ್ಯವಾಗಿ ಶಾಲಾ ಮಕ್ಕಳನ್ನ ಪ್ರವಾಸಕ್ಕೆ ಕರೆದುಕೊಂಡು ಹೋದಾಗ ಶಿಕ್ಷಕರು ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಆದರೆ ಇಲ್ಲಿ ಪ್ರಾಂಶುಪಾಲ ಲಾಲ್ ಚಂದ್ ಮೀನಾ ತಾನೇ ಖುದ್ದಾಗಿ ಸಮವಸ್ತ್ರದಲ್ಲಿದ್ದ ವಿದ್ಯಾರ್ಥಿನಿಯರೊಂದಿಗೆ ನೀರಿಗಿಳಿದು ಅಸಭ್ಯವಾಗಿ ವರ್ತಿಸಿದ್ದಾನೆ. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಸ್ಥಳೀಯರೊಬ್ಬರು ಇದನ್ನ ಮೊಬೈಲ್‌ನಲ್ಲಿ ವಿಡಿಯೋ ಸೆರೆಹಿಡಿದಿದ್ದಾರೆ.
ಈ ವಿಡಿಯೋ ವಾಟ್ಸಾಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ರಾಜಸ್ಥಾನ ಪ್ರಾಂಶುಪಾಲ ಅಮಾನತು ಮಾಡಬೇಕು ಎಂಬ ಕೂಗು ಎಲ್ಲೆಡೆ ಕೇಳಿಬಂದಿತ್ತು.
ಶಿಕ್ಷಣ ಇಲಾಖೆಯಿಂದ ಕಠಿಣ ಕ್ರಮ: ಲಾಲ್ ಚಂದ್ ಮೀನಾ ಅಮಾನತು
ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆ, ಘಟನೆಯ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಸೂಚಿಸಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ವಿಡಿಯೋದಲ್ಲಿರುವ ವ್ಯಕ್ತಿ ಸರ್ಕಾರಿ ಶಾಲೆಯ ಪ್ರಾಂಶುಪಾಲ ಲಾಲ್ ಚಂದ್ ಮೀನಾ ಎಂಬುದು ದೃಢಪಟ್ಟಿದೆ.
ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯ ಶಿಕ್ಷಕನಾಗಿ ಈ ರೀತಿಯ ನಡವಳಿಕೆ ಶಿಕ್ಷಕ ವೃತ್ತಿಗೆ ಕಳಂಕ ತರುವಂತಹುದು ಎಂದು ಪರಿಗಣಿಸಿದ ಶಿಕ್ಷಣ ನಿರ್ದೇಶನಾಲಯ, ಕೂಡಲೇ ಆತನನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ. ಇಲಾಖಾ ಮಟ್ಟದಲ್ಲಿ ಈ ಬಗ್ಗೆ ಸಮಗ್ರ ತನಿಖೆಗೂ ಆದೇಶಿಸಲಾಗಿದೆ.
प्रिंसपल साहब पानी में छात्राओं के साथ नहा रहे थे, वीडियो वायरल हो गया. सस्पेंड कर दिए गए ( राजस्थान के अलवर का है मामला ) pic.twitter.com/gygW6MwdMU
— Kislay Gaurav (@kislaygaurav) August 23, 2026
ಪೋಷಕರ ಆಕ್ರೋಶ
ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಪೋಷಕರು ಸಂಪೂರ್ಣ ಭರವಸೆಯೊಂದಿಗೆ ಶಾಲೆಗೆ ಕಳುಹಿಸುತ್ತಾರೆ. ಶಾಲೆಯಲ್ಲಿ ಶಿಕ್ಷಕರೇ ಮಕ್ಕಳಿಗೆ ಪೋಷಕರು ಎಂಬ ನಂಬಿಕೆ ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ ಇಂತಹ ವಿಕೃತ ಮನಸ್ಥಿತಿಯ ಪ್ರಾಂಶುಪಾಲರಿಂದಾಗಿ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಲ್ಲಿ ಆತಂಕ ಮೂಡುವಂತಾಗಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಶಾಲೆಯ ಮಕ್ಕಳ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಆತನನ್ನು ಶಾಶ್ವತವಾಗಿ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಶಾಲಾ ಮಕ್ಕಳನ್ನ ಹೊರಗಡೆ ಕರೆದುಕೊಂಡು ಹೋದಾಗ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಇನ್ನಷ್ಟು ಕಟ್ಟುನಿಟ್ಟಿನ ನಿಯಮಗಳನ್ನ ಜಾರಿಗೆ ತರಬೇಕೆಂಬ ಒತ್ತಾಯವೂ ಕೇಳಿಬಂದಿದೆ.
ಗುರು-ಶಿಷ್ಯರ ಬಾಂಧವ್ಯ ಅತ್ಯಂತ ಪವಿತ್ರವಾದದ್ದು. ಸಮಾಜದಲ್ಲಿ ಗುರುವಿಗೆ ತಾಯಿಯ ಸಮಾನವಾದ, ದೇವರಿಗೆ ಸಮಾನವಾದ ಸ್ಥಾನಮಾನ ನೀಡಲಾಗುತ್ತದೆ. ಆದರೆ ಲಾಲ್ ಚಂದ್ ಮೀನಾನಂತಹ ಕೆಲವೇ ಕೆಲವು ಕಳಂಕಿತ ವ್ಯಕ್ತಿಗಳಿಂದಾಗಿ ಇಡೀ ಶಿಕ್ಷಕ ಸಮುದಾಯ ತಲೆತಗ್ಗಿಸುವಂತಾಗಿದೆ.


Click it and Unblock the Notifications
