Rajasthan: ಮಹಿಳೆಯನ್ನು ಥಳಿಸಿ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಪತಿ!
ರಾಜಸ್ಥಾನ, ಸೆಪ್ಟೆಂಬರ್ 02: ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಆತನ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಅಮಾನವೀಯ ಕೃತ್ಯ ನಡೆಸಿದ ಘಟನೆ ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಯನ್ನ ವಿವಸ್ತ್ರಗೊಳಿ ಅಮಾನವೀಯವಾಗಿ ನಡೆಸಿದ ಕೃತ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸೋಮವಾರ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಎಡಿಜಿ (ಅಪರಾಧ) ಅವರನ್ನು ಸ್ಥಳಕ್ಕೆ ಕಳುಹಿಸಲು ಮತ್ತು ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶನಿವಾರ ಮಹಿಳೆಯ ಪತಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳು ಪೊಲೀಸರನ್ನು ನೋಡಿ ಪರಾರಿಯಾಗಲು ಪ್ರಯತ್ನಿಸುತ್ತಿದ್ದು, ಈ ವೇಳೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದ್ದು, ಈ ವೇಳೆ ಗಾಯಗೊಂಡವರನ್ನ ಪ್ರತಾಪಗಢದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿದು ಬಂದಿದೆ.
प्रतापगढ़ जिले में पीहर और ससुराल पक्ष के आपसी पारिवारिक विवाद में ससुराल पक्ष के लोगों द्वारा एक महिला को निर्वस्त्र करने का एक वीडियो सामने आया है।
— Ashok Gehlot (@ashokgehlot51) September 1, 2023
पुलिस महानिदेशक को एडीजी क्राइम को मौके पर भेजने एवं इस मामले में कड़ी से कड़ी कार्रवाई के निर्देश दिए हैं।
सभ्य समाज में इस…
ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಆತನ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಘಟನೆ ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ನಡೆದ ಘಟನೆ ಇದಾಗಿದೆ ಎಂದು ಹೇಳಲಾಗುತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.
ಇನ್ನೂ ಕಳೆದ ವರ್ಷ ವಿವಾಹವಾಗಿದ್ದ ಮಹಿಳೆ, ನೆರೆಹೊರೆಯ ಪುರುಷನೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಮತ್ತು ಅತ್ತೆ ಥಳಿಸಿದ್ದಾರೆ. ಅಷ್ಟೇ ಅಲ್ಲದೆ, ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ರಾಜ್ಯ ಸರ್ಕಾರವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಮಿಶ್ರಾ ಹೇಳಿದ್ದಾರೆ. ಅಲ್ಲದೇ ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪ್ರತಾಪಗಢ ಜಿಲ್ಲೆಯಲ್ಲಿ ಪತಿ ಮತ್ತು ಅತ್ತೆ-ಮಾವನ ನಡುವಿನ ಕೌಟುಂಬಿಕ ಕಲಹದಲ್ಲಿ ಮಹಿಳೆಯನ್ನು ಆಕೆಯ ಅತ್ತೆ-ಮಾವ ಬೆತ್ತಲೆಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಗರಿಕ ಸಮಾಜದಲ್ಲಿ ಇಂತಹ ಅಪರಾಧಿಗಳಿಗೆ ಸ್ಥಳವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.












Click it and Unblock the Notifications