ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಷ್ಟ್ರಪತಿ ನಕಾರ

By Manjunatha
|
Google Oneindia Kannada News

ನವ ದೆಹಲಿ, ಜೂನ್ 16: ಮಾಜಿ ಪ್ರಧಾನಿ ರಾಜೀವ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಯನ್ನು ರಾಷ್ಟ್ರಪತಿಗಳು ತಳ್ಳಿಹಾಕಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದ ಪ್ರಕರಣದ ಅಪರಾಧಿಗಳಾಗಿ 7 ಜನ ಜೈಲು ವಾಸ ಅನುಭವಿಸುತ್ತಿದ್ದು ಅವರನ್ನು ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಸರ್ಕಾರ ಕೇಂದ್ರ ಹಾಗೂ ರಾಜ್ಯಪಾಲರಿಗೆ ಮನವಿ ಮಾಡಿತ್ತು.

ರಾಜೀವ್ ಹಂತಕನಿಗೆ 26 ವರ್ಷದ ಬಳಿಕ ಪೆರೋಲ್ರಾಜೀವ್ ಹಂತಕನಿಗೆ 26 ವರ್ಷದ ಬಳಿಕ ಪೆರೋಲ್

ದೀರ್ಘ ಕಾಲದ ಶಿಕ್ಷೆ ಅನುಭವಿಸುತ್ತಿರುವವರಿಗೆ ನಡತೆಯ ಆಧಾರದ ಮೇಲೆ, ಮಾನವೀಯತೆ ಆಧಾರದ ಮೇಲೆ ಶಿಕ್ಷೆ ಮೊಟಕುಗೊಳಿಸಿ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಸರ್ಕಾರ ಕೋರಿತ್ತು. ಆದರೆ ಇದನ್ನು ತಳ್ಳಿ ಹಾಕಿರುವ ರಾಷ್ಟ್ರಪತಿ ರಮಾನಾಥ ಕೋವಿಂದ್ ಅವರು ಕೇಂದ್ರ ಇದಕ್ಕೆ ಒಪ್ಪುವುದಿಲ್ಲ ಎಂದಿದ್ದಾರೆ.

Rajiv Gandhi assassins will not be released: President Ramnath Kovind

1991 ಮೇ 21ರಂದು ತಮಿಳುನಾಡಿನ ಪೆರಬಂದೂರ್‌ನಲ್ಲಿ ರಾಜೀವ್ ಗಾಂಧಿ ಹತ್ಯೆಯಾಗಿತ್ತು. ನಕ್ಸಲ್ ಗುಂಪಿನ ನಳಿನಿ, ಮುರುಗನ್, ಎಜೆ ಪೆರಾರಿವಾಲನ್, ರಾಬರ್ಟ್ ಫಿಯೋಸ್, ಜಯಕುಮಾರ್, ರವಿಚಂದ್ರನ್ ಅವರುಗಳು ಈ ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಿ ಜೈಲಿಗಟ್ಟಲಾಯಿತು.

English summary
The central government has told Tamil Nadu government that the Rajiv Gandhi assassins will not be released. Tamil nadu governor has requested central to release Rajeev Gandhi assassination convicts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X