ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀವ್‌ ಗಾಂಧಿ ಫೌಂಡೇಶನ್‌ ಲೈಸನ್ಸ್ ರದ್ದುಗೊಳಿಸಿದ ಕೇಂದ್ರ ಸರ್ಕಾರ

|
Google Oneindia Kannada News

ನವದೆಹಲಿ, ಅಕ್ಟೋಬರ್‌ 23: ವಿದೇಶಿ ಕೊಡುಗೆಗಳಲ್ಲಿನ ಅಕ್ರಮಗಳ ಆರೋಪದ ಮೇಲೆ ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆಗಳಾದ ರಾಜೀವ್ ಗಾಂಧಿ ಫೌಂಡೇಶನ್ (ಆರ್‌ಜಿಎಫ್) ಮತ್ತು ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್ (ಆರ್‌ಜಿಸಿಟಿ) ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿಯನ್ನು ಕೇಂದ್ರವು ರದ್ದುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರ್‌ಜಿಎಫ್ ಮತ್ತು ಆರ್‌ಜಿಸಿಟಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜೀವ್ ಗಾಂಧಿ ಫೌಂಡೇಶನ್‌ನ ಮುಖ್ಯಸ್ಥರಾಗಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಸದಸ್ಯರು.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿ ನಟಿ ರಮ್ಯಾಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿ ನಟಿ ರಮ್ಯಾ

Rajiv Gandhi Foundation license canceled by Central government

ಸೋನಿಯಾ ಗಾಂಧಿ ಅವರು ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್ ಮುಖ್ಯಸ್ಥರಾಗಿದ್ದಾರೆ. ರಾಹುಲ್ ಗಾಂಧಿ ಮತ್ತು ಮಾಜಿ ರಾಜ್ಯಸಭಾ ಸಂಸದ ಡಾ ಅಶೋಕ್ ಎಸ್. ಗಂಗೂಲಿ ಇತರರ ಸದಸ್ಯರಾಗಿದ್ದಾರೆ. ಗಾಂಧಿ ಕುಟುಂಬ ನಡೆಸುತ್ತಿರುವ ಎನ್‌ಜಿಒಗಳಲ್ಲಿ ಆಪಾದಿತ ಅಕ್ರಮಗಳ ಕುರಿತು ತನಿಖೆ ನಡೆಸಲು ಗೃಹ ಸಚಿವಾಲಯವು 2020 ರಲ್ಲಿ ರಚಿಸಿದ ಅಂತರ-ಸಚಿವಾಲಯ ಸಮಿತಿಯು ನಡೆಸಿದ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

Rajiv Gandhi Foundation license canceled by Central government

1991ರಲ್ಲಿ ರಾಜೀವ್ ಗಾಂಧಿ ಫೌಂಡೇಶನ್ ಅನ್ನು ಸ್ಥಾಪಿಸಲಾಯಿತು. ರಾಜೀವ್ ಗಾಂಧಿ ಫೌಂಡೇಶನ್ 1991ರಿಂದ 2009 ರವರೆಗೆ ಆರೋಗ್ಯ, ವಿಜ್ಞಾನ ಮತ್ತು ತಂತ್ರಜ್ಞಾನ, ಮಹಿಳೆಯರು ಮತ್ತು ಮಕ್ಕಳು, ಅಂಗವೈಕಲ್ಯ ಬೆಂಬಲ, ಇತ್ಯಾದಿ ಸೇರಿದಂತೆ ಹಲವಾರು ನಿರ್ಣಾಯಕ ವಿಷಯಗಳ ಮೇಲೆ ಕೆಲಸ ಮಾಡಿದೆ. ಅದರ ವೆಬ್‌ಸೈಟ್ ಹೇಳುವಂತೆ ಇದು ಶಿಕ್ಷಣ ಕ್ಷೇತ್ರದಲ್ಲೂ ಕೆಲಸ ಮಾಡಿದೆ.

English summary
The Center has canceled the Foreign Contribution Control Act (FCRA) license of Rajiv Gandhi Foundation (RGF) and Rajiv Gandhi Charitable Trust (RGCT), an NGO linked to the Gandhi family, over allegations of irregularities in foreign contributions, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X