ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀತಿ ಆಯೋಗದ ಉಪಾಧ್ಯಕ್ಷರಾಗಿ ರಾಜೀವ್ ಕುಮಾರ್ ಅಧಿಕಾರ ಸ್ವೀಕಾರ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 01 : ಖ್ಯಾತ ಅರ್ಥಶಾಸ್ತ್ರಜ್ಞ ರಾಜೀವ್ ಕುಮಾರ್ ಕೇಂದ್ರ ನೀತಿ ಆಯೋಗದ ಉಪಾಧ್ಯಕ್ಷರಾಗಿ ಇಂದು (ಸೆ.1) ಅಧಿಕಾರ ಸ್ವೀಕರಿಸಿದರು.

ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ರಾಜೀನಾಮೆನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ರಾಜೀನಾಮೆ

ಭಾರತೀಯ-ಅಮೇರಿಕನ್ ಅರ್ಥಶಾಸ್ತ್ರಜ್ಞ ಅರವಿಂದ್ ಪಾನಗರಿಯಾ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ರಾಜೀವ್ ಕುಮಾರ್ ಅವರು ನೇಮಕಗೊಂಡಿದ್ದಾರೆ.

Rajiv Kumar takes charge as Niti Aayog vice-chairman

ಸೆಂಟರ್ ಫಾರ್ ಪಾಲಿಸಿ ರಿಸರ್ಚ್ ನಲ್ಲಿ (ಸಿಪಿಆರ್) ಸೀನಿಯರ್ ಫೆಲೋ ಆಗಿರುವ ರಾಜೀವ್ ಕುಮಾರ್ ಅವರು ಲಖನೌ ವಿಶ್ವವಿದ್ಯಾನಿಲಯದಿಂದ ಪಿಎಚ್ ಡಿ ಪದವಿಯನ್ನು ಪಡೆದಿದ್ದಾರೆ.

ಈ ಹಿಂದೆ, ಅವರು ಇಂಡಸ್ಟ್ರಿ ಅಸೋಸಿಯೇಷನ್ ಎಫ್ ಐಸಿಸಿಐನ ಕಾರ್ಯದರ್ಶಿ ಆಗಿ ಕಾರ್ಯನಿರ್ವಹಿಸಿದ್ದಾರೆ. ಜತೆಗೆ 2006 ರಿಂದ 2008ರ ವರೆಗೆ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ಸದಸ್ಯರಾಗಿದ್ದರು.

ಕುಮಾರ್ ಅವರು ಇಂಡಿಯನ್ ಇಂಡಸ್ಟ್ರೀಸ್ (ಸಿಐಐ) ನ ಮುಖ್ಯ ಅರ್ಥಶಾಸ್ತ್ರಜ್ಞರಾಗಿ ಸೇವೆ ಸಲ್ಲಿಸಿದ್ದರು ಮತ್ತು ಭಾರತೀಯ ಅಭಿವೃದ್ಧಿ ಇಲಾಖೆ, ಏಷ್ಯನ್ ಡೆವಲಪ್ ಮೆಂಟ್ ಬ್ಯಾಂಕ್, ಹಣಕಾಸು ಸಚಿವಾಲಯದಲ್ಲಿ ಸೇವೆ ಸಲ್ಲಿಸಿದ್ದಾರೆ.

English summary
Noted economist Rajiv Kumar today took over as the vice-chairman of government think tank Niti Aayog. Kumar replaced Arvind Panagariya, an Indian-American economist who left the think tank yesterday to return to academia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X