ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಎಸ್ಇ ಪರೀಕ್ಷೆ ಭವಿಷ್ಯ ನಿರ್ಧಾರ, ರಾಜನಾಥ್ ನೇತೃತ್ವದಲ್ಲಿ ಸಭೆ

|
Google Oneindia Kannada News

ನವದೆಹಲಿ, ಮೇ 23: ಕೊರೊನಾವೈರಸ್ ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಮಂಡಳಿಯು ಏಪ್ರಿಲ್ 14 ರಂದು 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿತ್ತು ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿತ್ತು. 12ನೇ ತರಗತಿ ಪರೀಕ್ಷೆಗಳು ಮತ್ತು ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಚರ್ಚಿಸಲು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಇಂದು ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯ ಅಧ್ಯಕ್ಷತೆ ವಹಿಸಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಲಿದ್ದಾರೆ.

ಪರೀಕ್ಷೆಗಳನ್ನು ನಡೆಸುವ ಬಗ್ಗೆ ಎಲ್ಲಾ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಶಿಕ್ಷಣ ಸಚಿವರು ಪತ್ರ ಬರೆದಿದ್ದಾರೆ. 12ನೇ ತರಗತಿ ಪರೀಕ್ಷೆ ಮತ್ತು ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಪ್ರಸ್ತಾಪಗಳ ಬಗ್ಗೆ ಚರ್ಚಿಸಲು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಸಚಿವರು, ಶಿಕ್ಷಣ ಕಾರ್ಯದರ್ಶಿಗಳು ಮತ್ತು ರಾಜ್ಯ ಪರೀಕ್ಷಾ ಮಂಡಳಿಗಳ ಅಧ್ಯಕ್ಷರು ಮತ್ತು ಮಧ್ಯಸ್ಥಗಾರರೊಂದಿಗೆ ಉನ್ನತ ಮಟ್ಟದ ವರ್ಚ್ಯುಯಲ್‌ ಸಭೆ ಆಯೋಜಿಸಲಾಗಿದೆ.

ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ 2021 ಮುಂದೂಡಿಕೆಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ 2021 ಮುಂದೂಡಿಕೆ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಕೇಂದ್ರ ಮಹಿಳಾ ಮತ್ತು ಮಕ್ಕಳ ಸಚಿವೆ ಶ್ರೀಮತಿ ಸ್ಮೃತಿ ಜುಬಿನ್ ಇರಾನಿ ಮತ್ತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.

Rajnath Singh to chair CBSE Class 12 exams Meet

ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸುರಕ್ಷತೆ ಮತ್ತು ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳ ಆಯೋಜನೆಗೆ ಸಂಬಂಧಿಸಿದ ಆಯ್ಕೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಶಿಕ್ಷಣ ಸಚಿವಾಲಯ ಮತ್ತು ಸಿಬಿಎಎಸ್‌ಇ ಅನ್ವೇಷಿಸುತ್ತಿವೆ ಎಂದು ರಾಜ್ಯಗಳು/ಕೇಂದ್ರಾಡಳಿತ ರಾಜ್ಯಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯು ಉನ್ನತ ಕಲಿಕೆಯ ಸಂಸ್ಥೆಗಳಿಗೆ ಪರೀಕ್ಷೆಗಳ ದಿನಾಂಕಗಳನ್ನು ಅಂತಿಮಗೊಳಿಸುವ ಬಗ್ಗೆಯೂ ಚರ್ಚಿಸಲಾಗುತ್ತಿದೆ ಎಂದು

ಕೋವಿಡ್-19 ಸಾಂಕ್ರಾಮಿಕವು ಶಿಕ್ಷಣ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ, ವಿಶೇಷವಾಗಿ ಬೋರ್ಡ್ ಪರೀಕ್ಷೆಗಳು ಮತ್ತು ಪ್ರವೇಶ ಪರೀಕ್ಷೆಗಳ ಮೇಲೆ ಪರಿಣಾಮ ಬೀರಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಬಹುತೇಕ ಎಲ್ಲಾ ರಾಜ್ಯ ಶಿಕ್ಷಣ ಮಂಡಳಿಗಳು, ಸಿಬಿಎಸ್‌ಇ ಮತ್ತು ಐಸಿಎಸ್ಇ ತಮ್ಮ 2021ನೇ ವರ್ಷದ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿವೆ. ಅದೇ ರೀತಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪರೀಕ್ಷೆ ನಡೆಸುವ ಇತರ ಸಂಸ್ಥೆಗಳೂ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯಬೇಕಿದ್ದ ಪ್ರವೇಶ ಪರೀಕ್ಷೆಗಳನ್ನು ಮುಂದೂಡಿವೆ.

12ನೇ ತರಗತಿ ಪರೀಕ್ಷೆಗಳ ಆಯೋಜನೆಯು ದೇಶಾದ್ಯಂತ ರಾಜ್ಯ ಬೋರ್ಡ್‌ ಪರೀಕ್ಷೆಗಳು ಮತ್ತು ಇತರ ಪ್ರವೇಶ ಪರೀಕ್ಷೆಗಳ ಮೇಲೆ ಪರಿಣಾಮ ಬೀರುವುದರಿಂದ ಮತ್ತು ವಿದ್ಯಾರ್ಥಿಗಳಲ್ಲಿ ಅನಿಶ್ಚಿತತೆ ತಪ್ಪಿಸುವ ದೃಷ್ಟಿಯಿಂದ ದೇಶಾದ್ಯಂತ ಎಲ್ಲಾ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 12ನೇ ತರಗತಿ ಸಿಬಿಎಸ್ಇ ಪರೀಕ್ಷೆಗಳ ಬಗ್ಗೆ ವಿವಿಧ ರಾಜ್ಯ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳು ನೀಡುವ ಮಾಹಿತಿ ಆಧಾರದ ಮೇಲೆ ಅಂತಿಮ ತೀರ್ಮಾನ ಕೈಗೊಳ್ಳುವುದು ಅಪೇಕ್ಷಣೀಯವಾಗಿದೆ.

ಎಲ್ಲಾ ಸಂಬಂಧಪಟ್ಟ ಎಲ್ಲರಿಂದ - ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಹಾಗೂ ಇತರರಿಂದ ಟ್ವಿಟರ್ ಮೂಲಕ ಮಾಹಿತಿ ಕೋರಿದ್ದಾರೆ.

English summary
Defence Minister, Rajnath Singh will chair a crucial meeting to decide the fate of the pending Class 12 CBSE exam today(May 23).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X