ರಾಜು ಪಾಲ್ ಹತ್ಯೆ ಕೇಸ್: ಉಮೇಶ್ ಪಾಲ್ ಮೇಲೆ ಮೊದಲು ಗುಂಡು ಹಾರಿಸಿದ ವ್ಯಕ್ತಿ ಎನ್‌ಕೌಂಟರ್‌ಗೆ ಬಲಿ!
ಉಮೇಶ್ ಪಾಲ್ ಮೇಲೆ ಮೊದಲು ಗುಂಡು ಹಾರಿಸಿದ ವ್ಯಕ್ತಿಯನ್ನು ಎನ್‌ಕೌಂಟರ್‌ನಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ.
ಬಿಎಸ್‌ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಮೇಲೆ ಮೊದಲು ಗುಂಡು ಹಾರಿಸಿದ ವ್ಯಕ್ತಿಯನ್ನು ಎನ್‌ಕೌಂಟರ್‌ನಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ. ಉಮೇಶ್ ಪಾಲ್ ಮೇಲೆ ಮೊದಲ ಗುಂಡಿನ ದಾಳಿ ನಡೆಸಿದ ಅತೀಕ್ ಅಹ್ಮದ್ ಗ್ಯಾಂಗ್‌ನ ಶೂಟರ್ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟಿದ್ದಾನೆ.
ಆರೋಪಿ ವಿಜಯ್ ಕುಮಾರ್ ಅಲಿಯಾಸ್ ಉಸ್ಮಾನ್ ಚೌಧರಿ ಮತ್ತು ಪೊಲೀಸರ ನಡುವೆ ಭಾನುವಾರ ಸಂಜೆ ಕೌಂಧಿಯಾರ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ. ಮೂಲಗಳ ಪ್ರಕಾರ, ಎನ್‌ಕೌಂಟರ್‌ನಲ್ಲಿ ಗಂಭೀರ ಗಾಯಗೊಂಡ ಆರೋಪಿ ವಿಜಯ್ ಕುಮಾರ್‌ನನ್ನು ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ಕಳುಹಿಸಲಾಯಿತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ಉಮೇಶ್ ಪಾಲ್ ಹತ್ಯೆ ಪ್ರಕರಣದ ಪ್ರತಿ ಆರೋಪಿ ಬಗ್ಗೆ ಸುಳುವು ನೀಡಿದವರಿಗೆ 2.5 ಲಕ್ಷ ಬಹುಮಾನ ನೀಡುವುದಾಗಿ ಯುಪಿ ಪೊಲೀಸರು ಘೋಷಿಸಿದ ಒಂದು ದಿನದ ನಂತರ ಎನ್‌ಕೌಂಟರ್ ನಡೆದಿದೆ. ವಿಜಯ್ ಕುಮಾರ್ ಅಲಿಯಾಸ್ ಉಸ್ಮಾನ್ ಚೌಧರಿ, 2005 ರ ಬಿಎಸ್‌ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಒಂದು ವಾರದ ಹಿಂದೆ ಕೊಂದರು.
ಮಾಜಿ ಸಂಸದ ಅತೀಕ್ ಅಹ್ಮದ್ ಅವರ ಕಿರಿಯ ಸಹೋದರ ಖಾಲಿದ್ ಅಜೀಂ ಅವರನ್ನು ಸೋಲಿಸುವ ಮೂಲಕ ಅಲಹಾಬಾದ್ (ಪಶ್ಚಿಮ) ವಿಧಾನಸಭಾ ಸ್ಥಾನವನ್ನು ಚುನಾವಣೆಯಲ್ಲಿ ಗೆದ್ದು ತಿಂಗಳ ಬಳಿಕ ರಾಜು ಪಾಲ್ ಅವರನ್ನು ಹತ್ಯೆ ಮಾಡಲಾಯಿತು.

ಪ್ರಕರಣದಲ್ಲಿ ಇದುವರೆಗೆ 40 ಮಂದಿಯನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದಾರೆ. ರಾಜಕಾರಣಿ ಅತಿಕ್ ಅಹ್ಮದ್, ಆತನ ಸಹೋದರ ಮತ್ತು ಮಾಜಿ ಶಾಸಕ ಅಶ್ರಫ್ ರಾಜು ಪಾಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ. ಆರೋಪಿಗಳೆಲ್ಲ ಸದ್ಯ ಜೈಲಿನಲ್ಲಿದ್ದಾರೆ.
ಉಮೇಶ್ ಪಾಲ್ ಮತ್ತು ಅವರ ಇಬ್ಬರು ಪೊಲೀಸ್ ಅಂಗರಕ್ಷಕರಲ್ಲಿ ಒಬ್ಬರನ್ನು ಕಳೆದ ತಿಂಗಳು ಹತ್ಯೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಎಸ್‌ಯುವಿಯಿಂದ ಹೊರಬರುತ್ತಿದ್ದಾಗ ಈ ಘಟನೆ ನಡೆದಿದೆ. ಆಗ ಇದ್ದಕ್ಕಿದ್ದಂತೆ ಒಬ್ಬ ವ್ಯಕ್ತಿ ಹಿಂದಿನಿಂದ ಬಂದು ಅವನ ಮೇಲೆ ಗುಂಡು ಹಾರಿಸುತ್ತಾನೆ. ಗುಂಡಿನ ದಾಳಿ ಭೀಕರ ದೃಶ್ಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ.












Click it and Unblock the Notifications