Parliament Special Session 2023: ದೇಶದ 140 ಕೋಟಿ ಜನರಿಗೆ ಅಭಿನಂದನೆ ತಿಳಿಸಿ ಮೋದಿ ಟ್ವೀಟ್
ದೆಹಲಿ ಸೆಪ್ಟೆಂಬರ್ 22: ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದೆ. ಮಸೂದೆಯ ಪರವಾಗಿ 454 ಮತಗಳು ಚಲಾವಣೆಗೊಂಡರೆ, ಅಸಾದುದ್ದೀನ್ ಓವೈಸಿ ಮತ್ತು 2 ಸಂಸದರು ವಿರುದ್ಧವಾಗಿ ಮತ ಚಲಾಯಿಸಿದರು. ಈಗ ಈ ಮಸೂದೆ ಮೇಲ್ಮನೆ ಅಂದರೆ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅಂಗೀಕರಿಸಲಾಗಿದೆ. ನಮ್ಮ ದೇಶದ ಪ್ರಜಾಸತ್ತಾತ್ಮಕ ಪಯಣದಲ್ಲಿ ಒಂದು ಐತಿಹಾಸಿಕ ಕ್ಷಣ ಇದಾಗಿದೆ. 140 ಕೋಟಿ ಭಾರತೀಯರಿಗೆ ಅಭಿನಂದನೆಗಳು. ನಾರಿ ಶಕ್ತಿ ವಂದನ್ ಕಾಯ್ದೆಗೆ ಸಂಬಂಧಿಸಿದ ಮಸೂದೆಗೆ ಮತ ಚಲಾಯಿಸಿದ ಎಲ್ಲಾ ರಾಜ್ಯಸಭಾ ಸಂಸದರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ಅದರ ಸರ್ವಾನುಮತದ ಅಂಗೀಕಾರವು ತುಂಬಾ ಉತ್ತೇಜನಕಾರಿಯಾಗಿದೆ' ಎಂದು ಬರೆದಿದ್ದಾರೆ.

'ಈ ಮಸೂದೆಯ ಅಂಗೀಕಾರದೊಂದಿಗೆ ಮಹಿಳಾ ಶಕ್ತಿಯ ಪ್ರಾತಿನಿಧ್ಯವು ಮತ್ತಷ್ಟು ಬಲಗೊಳ್ಳುತ್ತದೆ. ಅವರ ಸಬಲೀಕರಣದ ಹೊಸ ಯುಗ ಪ್ರಾರಂಭವಾಗಲಿದೆ. ಇದು ಕೇವಲ ಕಾನೂನಲ್ಲ. ಅದರ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಅಮೂಲ್ಯ ಪಾತ್ರ ವಹಿಸುವ ದೇಶದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳು ತಮ್ಮ ಹಕ್ಕುಗಳನ್ನು ಪಡೆದುಕೊಂಡಿದ್ದಾರೆ. ಈ ಐತಿಹಾಸಿಕ ಹೆಜ್ಜೆಯಿಂದ ಕೋಟ್ಯಂತರ ಮಹಿಳೆಯರ ಧ್ವನಿ ಗಟ್ಟಿಯಾಗಲಿದ್ದು, ಅವರ ಶಕ್ತಿ, ಧೈರ್ಯ ಮತ್ತು ಸಾಮರ್ಥ್ಯಕ್ಕೆ ಹೊಸ ಗುರುತು ಸಿಗಲಿದೆ' ಎಂದು ಹೇಳಿದ್ದಾರೆ.
हमारे देश की लोकतांत्रिक यात्रा का एक ऐतिहासिक क्षण! 140 करोड़ भारतवासियों को बहुत-बहुत बधाई!
— Narendra Modi (@narendramodi) September 21, 2023
नारी शक्ति वंदन अधिनियम से जुड़े बिल को वोट देने के लिए राज्यसभा के सभी सांसदों का हृदय से आभार। सर्वसम्मति से इसका पास होना बहुत उत्साहित करने वाला है।
इस बिल के पारित होने से जहां…
ಕೇಂದ್ರ ಸಚಿವ ಅರ್ಜುನ್‌ರಾಮ್ ಮೇಘವಾಲ್ ಮಸೂದೆಯನ್ನು ಮಂಡಿಸಿದರು. ಈ ಮಸೂದೆಗೆ ಬಹುತೇಕ ಎಲ್ಲ ಪಕ್ಷಗಳ ಬೆಂಬಲ ಸಿಕ್ಕಿದೆ. 13 ವರ್ಷಗಳ ಹಿಂದೆ ಈ ಮಸೂದೆಯನ್ನು ಮಂಡಿಸಿದಾಗ ಇದಕ್ಕೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಅವುಗಳಲ್ಲಿ ಪಕ್ಷಗಳಲ್ಲಿ ಒಂದು ಎಸ್‌ಪಿ ಕೂಡ ಒಂದು. ಆದರೆ ಈ ಬಾರಿ ಅವರು ಮಸೂದೆಯನ್ನು ಬೆಂಬಲಿಸುತ್ತಿರುವುದು ಕಂಡುಬಂದಿದೆ.

1996ರ ಸೆಪ್ಟೆಂಬರ್‌ನಲ್ಲಿ ಮಸೂದೆಯನ್ನು ಲೋಕಸಭೆಯಲ್ಲಿ ಪರಿಚಯಿಸಲಾಗಿದ್ದು 1966ರ ಸೆಪ್ಟೆಂಬರ್ 12ರಂದು ಅಂಗೀಕರಿಸಲಾಯಿತು. ಆದರೆ ಆ ಸಮಯದಲ್ಲಿ ಸರ್ಕಾರಕ್ಕೆ ಬಹುಮತದ ಕೊರತೆಯಿದ್ದ ರಾಜ್ಯಸಭೆಯಲ್ಲಿ ಅದು ಸ್ಥಗಿತಗೊಂಡಿತು. 1997ರಲ್ಲಿ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗುವ ಮುನ್ನವೇ ಸರ್ಕಾರ ಪತನಗೊಂಡಿತು.
ನಂತರ, 1998,1999,2008 ಮತ್ತು 2010ರಲ್ಲಿ ಲೋಕಸಭೆಯಲ್ಲಿ ಮಸೂದೆಯನ್ನು ಪುನ: ಪರಿಚಯಿಸಲಾಯಿತು. ಆದರೆ ಹೆಚ್ಚಿನ ಪ್ರಮುಖ ರಾಷ್ಟ್ರೀಯ ಪಕ್ಷಗಳ ಬೆಂಬಲದ ಹೊರತಾಗಿಯೂ ಅಂಗೀಕಾರವಾಗಲಿಲ್ಲ. 2014ರಲ್ಲಿ 15ನೇ ಲೋಕಸಭೆಯ ವಿಸರ್ಜನೆಯ ನಂತರ ಮಸೂದೆ ರದ್ದಾಗಿತ್ತು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications