Sonia Gandhi: ರಾಜ್ಯಸಭೆಗೆ ಅವಿರೋಧವಾಗಿ ಸೋನಿಯಾ ಗಾಂಧಿ ಆಯ್ಕೆ
ಜೈಪುರ, ಫೆಬ್ರವರಿ 20; ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರು. ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿದ ಬಳಿಕ 'ನನ್ನ ಹೃದಯ ಮತ್ತು ಆತ್ಮ ಯಾವಾಗಲೂ ನಿಮ್ಮೊಂದಿಗೆ' ಎಂದು ಸೋನಿಯಾ ರಾಯ್ ಬರೇಲಿ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದರು.
ಆರು ಬಾರಿ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ ಸೋನಿಯಾ ಗಾಂಧಿ (77) ಮೊದಲ ಬಾರಿಗೆ ರಾಜ್ಯಸಭೆ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. ಆರೋಗ್ಯದ ಕಾರಣದಿಂದ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದ ಸೋನಿಯಾ ಗಾಂಧಿ ರಾಜ್ಯಸಭೆ ಪ್ರವೇಶಿಸಿದ್ದಾರೆ.

ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸೋನಿಯಾ ಗಾಂಧಿ ಅಭ್ಯರ್ಥಿ ಎಂದು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಪುತ್ರ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ವಾದ್ರಾ ಜೊತೆ ಆಗಮಿಸಿ ಅವರು ನಾಮಪತ್ರವನ್ನು ಸಲ್ಲಿಕೆ ಮಾಡಿದ್ದರು.
ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದ ಹಾಲಿ ಸಂಸದೆ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆದ್ದರಿಂದ ಈ ಬಾರಿಯ ಲೋಕಸಭೆ ಚುನಾವಣೆಗೆ ರಾಯ್ ಬರೇಲಿ ಕ್ಷೇತ್ರದಿಂದ ಪ್ರಿಯಾಂಕ್ ವಾದ್ರಾ ಕಣಕ್ಕಿಳಿಯುವ ನಿರೀಕ್ಷೆ ಇದೆ.
ಸೋನಿಯಾ ಗಾಂಧಿ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವಾಗಲೇ ರಾಯ್ ಬರೇಲಿ ಕ್ಷೇತ್ರದಿಂದ ತಮ್ಮ ಕುಟುಂಬ ಸದಸ್ಯರೊಬ್ಬರು ಕಣಕ್ಕಿಳಿಯುವ ಕುರಿತು ಸುಳಿವು ನೀಡಿದ್ದಾರೆ. ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದ ಸಂಸದರು. ಆದ್ದರಿಂದ ಪ್ರಿಯಾಂಕ್ ವಾದ್ರಾ ಕಣಕ್ಕಿಳಿಯುವ ಸಾಧ್ಯತೆ ಇದೆ.
2004ರಿಂದ ರಾಯ ಬರೇಲಿ ಕ್ಷೇತ್ರವನ್ನು ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದಾರೆ. 2019ರ ಚುನಾವಣೆಯಲ್ಲಿ ಅವರು 534,918 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈಗ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಕಾರಣ ಅವರು ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿದೆ.
ರಾಯ ಬರೇಲಿ ಕ್ಷೇತ್ರದ ಜನರಿಗೆ ಭಾವನಾತ್ಮಕ ಪತ್ರವನ್ನು ಬರೆದಿದ್ದ ಸೋನಿಯಾ ಗಾಂಧಿ, "ನಾನು ಇಂದು ಏನಾಗಿದ್ದೆನೆಯೋ ಅದಕ್ಕೆ ಹೆಮ್ಮೆ ಇದೆ. ನಿಮ್ಮಿಂದಾಗಿ ನಾನು ಇಂದು ಇಲ್ಲಿ ನಿಂತಿದ್ದೇನೆ. ನಿಮ್ಮ ನಂಬಿಕೆ ಉಳಿಸಿಕೊಳ್ಳಲು ನನ್ನ ಕೈಲಾದಷ್ಟು ಪ್ರಯತ್ನ ನಡೆಸಿದ್ದೇನೆ ಎಂದು ಹೆಮ್ಮೆಯಿಂದ ಹೇಳುತ್ತೇನೆ. ಈಗಿನ ಆರೋಗ್ಯ ಮತ್ತು ವಯಸ್ಸಿನ ಸಮಸ್ಯೆಗಳ ಕಾರಣಕ್ಕೆ ನಾನು ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ" ಎಂದು ಹೇಳಿದ್ದರು.
"ನನ್ನ ಈ ನಿರ್ಧಾರದಿಂದ ನೇರವಾಗಿ ನಾನು ನಿಮ್ಮ ಸೇವೆ ಮಾಡಲು ಅವಕಾಶ ಸಿಗುವುದಿಲ್ಲ. ಆದರೆ ನನ್ನ ಹೃದಯ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ. ಎಂದಿನಂತೆ ನೀವು ಭವಿಷ್ಯದಲ್ಲಿ ನನ್ನ ಮತ್ತು ನನ್ನ ಕುಟುಂಬದ ಬೆಂಬಲಕ್ಕೆ ನಿಲ್ಲುತ್ತೀರಿ ಎಂಬ ವಿಶ್ವಾಸವಿದೆ" ಎಂದು ಸೋನಿಯಾ ಗಾಂಧಿ ಪತ್ರದಲ್ಲಿ ತಿಳಿಸಿದ್ದರು.
ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಅಮೇಥಿ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದು ಪ್ರಸಿದ್ಧಿ ಪಡೆದಿದ್ದವು. ಆದರೆ 2019ರಲ್ಲಿ ಅಮೇಥಿಯಲ್ಲಿ ರಾಹುಲ್ ಗಾಂಧಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡಿದ್ದರು. ಕೇರಳದ ವಯನಾಡು ಕ್ಷೇತ್ರದಲ್ಲಿ ಅವರು ಗೆಲುವು ಸಾಧಿಸಿದ್ದರು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications