Breaking; ರಾಜ್ಯಸಭೆ ಚುನಾವಣೆ, ಕಾಂಗ್ರೆಸ್‌ನಿಂದ ವೀಕ್ಷಕರ ನೇಮಕ
ನವದೆಹಲಿ, ಜೂನ್ 05; ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ವೀಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಜೂನ್ 10ರಂದು ವಿವಿಧ ರಾಜ್ಯಗಳಿಂದ ಒಟ್ಟು 57 ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ.
ಭಾನುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ವೀಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಹಾರಾಷ್ಟ್ರ ರಾಜ್ಯದ ಉಸ್ತುವಾರಿಯಾಗಿದ್ದಾರೆ.
ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನಕ್ಕೆ ಪವನ್ ಕುಮಾರ್ ಬನ್ಸಾಲ್ ಮತ್ತು ಟಿ. ಎಸ್. ಸಿಂಗ್ ಡಿಯೋ ವೀಕ್ಷಕರಾಗಿ ನೇಮಕವಾಗಿದ್ದಾರೆ. ಹರ್ಯಾಣ ರಾಜ್ಯಕ್ಕೆ ಭೂಪೇಶ್ ಬಗೇಲ್ ಮತ್ತು ರಾಜೀವ್ ಶುಕ್ಷ ವೀಕ್ಷಕರು.

57 ಸ್ಥಾನಗಳಿಗೆ ಚುನಾವಣೆ; ಜೂನ್ 10ರಂದು ದೇಶದ 15 ರಾಜ್ಯಗಳ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಿದೆ.
ಕರ್ನಾಟಕದಿಂದ 4 ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಜ್ಯಸಭೆ ಚುನಾವಣೆ ಮಹತ್ವ ಪಡೆದುಕೊಂಡಿದೆ.
ಉತ್ತರ ಪ್ರದೇಶ 11, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯದಲ್ಲಿ 6, ಬಿಹಾರ 5, ಕರ್ನಾಟಕ 4, ರಾಜಸ್ಥಾನ 4, ಆಂಧ್ರ ಪ್ರದೇಶದಲ್ಲಿನ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಮಧ್ಯ ಪ್ರದೇಶ ಮತ್ತು ಒಡಿಶಾದಿಂದ 2, ಪಂಜಾಬ್, ಉತ್ತರಾಖಂಡ, ಹರ್ಯಾಣ, ಛತ್ತೀಸ್‌ಗಢ ಹಾಗೂ ತೆಲಂಗಾಣದಿಂದ 2 ಸ್ಥಾನಕ್ಕೆ ಚುನಾವಣೆ ಇದೆ.
ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಜಯರಾಂ ರಮೇಶ್ ಹಾಗೂ ಮನ್ಸೂರ್ ಅಲಿ ಖಾನ್ ಕಣದಲ್ಲಿದ್ದಾರೆ.












Click it and Unblock the Notifications