• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯಸಭಾ ಚುನಾವಣೆ; ಬಿಜೆಪಿ ಬಹುಮತ ಪಡೆಯುವುದು ಕಷ್ಟ

|

ನವದೆಹಲಿ, ಮಾರ್ಚ್ 02 : ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ 12 ರಿಂದ 13 ಸ್ಥಾನಗಳಲ್ಲಿ ಜಯಗಳಿಸುವ ನಿರೀಕ್ಷೆ ಇದೆ. ಮಾರ್ಚ್ 26ರಂದು 55 ರಾಜ್ಯಸಭಾ ಸದಸ್ಯರ ಆಯ್ಕೆಗೆ ಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿದೆ.

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ 12 ರಿಂದ 13 ಸ್ಥಾನಗಳಲ್ಲಿ ಜಯಗಳಿಸಿದರೆ ಮೇಲ್ಮನೆಯ ಸದಸ್ಯ ಬಲ 94 ರಿಂದ 95ಕ್ಕೆ ಏರಿಕೆಯಾಗಲಿದೆ. ನವೆಂಬರ್‌ನಲ್ಲಿ ಮತ್ತೊಂದು ಸುತ್ತಿನ ಚುನಾವಣೆ ನಡೆಯಲಿದ್ದು, ಆಗ ಉತ್ತರ ಪ್ರದೇಶದಿಂದ ಬಿಜೆಪಿಗೆ ಲಾಭವಾಗಲಿದೆ.

ರಾಜ್ಯಸಭೆಯ 55 ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟ

ವಿವಿಧ ರಾಜ್ಯಗಳ ವಿಧಾನಸಭೆಯಿಂದ 55 ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮಾರ್ಚ್ 26ರಂದು ಚುನಾವಣೆ ನಡೆಯಲಿದೆ. ಅಂದು ಸಂಜೆಯೇ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್‌ 6ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಪ್ರವೇಶ, ಕಾಂಗ್ರೆಸ್ ಇಂಗಿತ

245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಸರಳ ಬಹುಮತ ಪಡೆಯಲು 123 ಸದಸ್ಯ ಬಲಬೇಕು. ಆದರೆ, ಪ್ರಸ್ತುತ 82 ಸದಸ್ಯ ಬಲ ಹೊಂದಿರುವ ಬಿಜೆಪಿ ಮಾರ್ಚ್ 26ರಂದು ನಡೆಯುವ ಚುನಾವಣೆಯಲ್ಲಿ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದೆ.

ರಾಜ್ಯಸಭೆಯಿಂದ 51 ಸಂಸದರು ನಿವೃತ್ತಿ, ಯಾರಿಗೆ ಲಾಭ?

ಯಾರಿಗೆ ಎಷ್ಟು ಸೀಟುಗಳು?

ಯಾರಿಗೆ ಎಷ್ಟು ಸೀಟುಗಳು?

ಮಾರ್ಚ್ 26ರಂದು ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ಡಿಎಂಕೆ, ಎಐಎಡಿಎಂಕೆ ತಲಾ 3 ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇದೆ. ಜೆಡಿಯು, ಬಿಜೆಡಿ ಮತ್ತು ಆರ್‌ಜೆಡಿ ತಲಾ 2 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಟಿಎಂಸಿ 5, ವೈಎಸ್‌ಆರ್‌ಸಿಪಿ 4, ಟಿಆರ್‌ಎಸ್ 1 ಸ್ಥಾನದಲ್ಲಿ ಜಯಗಳಿಸುವ ನಿರೀಕ್ಷೆ ಇದೆ.

ಬಿಜೆಪಿಗೆ ಹಿನ್ನಡೆ ನಿರೀಕ್ಷೆ

ಬಿಜೆಪಿಗೆ ಹಿನ್ನಡೆ ನಿರೀಕ್ಷೆ

2022ರಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಏಕೆಂದರೆ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ವಿಧಾನಸಭೆಯಿಂದ ಹೆಚ್ಚಿನ ಸ್ಥಾನಗಳಿವೆ. ಈ ಯಾವ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರದಲ್ಲಿ ಇಲ್ಲ.

55 ಸ್ಥಾನಗಳಿಗೆ ಚುನಾವಣೆ

55 ಸ್ಥಾನಗಳಿಗೆ ಚುನಾವಣೆ

ಮಾರ್ಚ್ 26ರಂದು 55 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಇವುಗಳಲ್ಲಿ ಮಹಾರಾಷ್ಟ್ರ 7, ಒಡಿಶಾ 4, ತಮಿಳುನಾಡು 6, ಪಶ್ಚಿಮ ಬಂಗಾಳದ 5, ಆಂಧ್ರಪ್ರದೇಶ 4, ತೆಲಂಗಾಣ 2, ಅಸ್ಸಾಂ 3, ಬಿಹಾರ 5, 4 ಗುಜರಾತ್, ಹರ್ಯಾಣದಲ್ಲಿ 2 ಕ್ಷೇತ್ರಗಳಿವೆ.

ಚುನಾವಣೆ ವೇಳಾಪಟ್ಟಿ

ಚುನಾವಣೆ ವೇಳಾಪಟ್ಟಿ

55 ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಈಗಾಗಲೇ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮಾರ್ಚ್ 6ರಂದು ಅಧಿಸೂಚನೆ ಪ್ರಕಟವಾಗಲಿದೆ. ಮಾರ್ಚ್ 13ರ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ. ಮಾರ್ಚ್ 26ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯಲಿದೆ. ಸಂಜೆ 5 ಗಂಟೆಯಿಂದ ಮತ ಎಣಿಕೆ ಆರಂಭವಾಗುತ್ತದೆ.

English summary
BJP expected to get 12 to 13 seats in Rajya Sabha poll on March 26, 2020. It look difficult for BJP to get majority in Rajya Sabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X