ಕುಸ್ತಿಪಟುಗಳ ಮನವೊಲಿಸಿದ ಟಿಕಾಯತ್ ಸಹೋದರರು: ಕೇಂದ್ರ ಸರ್ಕಾರಕ್ಕೆ 5 ದಿನ ಗುಡುವು: ಅನಿಲ್ ಕುಂಬ್ಳೆ ಬೆಂಬಲ
ಬೆಂಗಳೂರು, ಮೇ 30: ಮಹಿಳಾ ಕುಸ್ತಿ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗುತ್ತಿರುವ ಬಿಜೆಪಿ ಸಂಸದನ್ನು ಬಂಧಿಸುವಂತೆ ಪ್ರತಿಭಟನೆ ತೀವ್ರಗೊಂಡಿದೆ. ಇಂದು ಗಂಗಾ ನದಿಯಲ್ಲಿ ಪದಕಗಳನ್ನು ಎಸೆಯುವ ನಿರ್ಧಾರವನ್ನು ರೈತ ಸಂಘದ ಮನವಿ ಮೇರೆಗೆ ಹಿಂಪಡೆದಿದ್ದಾರೆ. ಜೊತೆಗೆ ಪ್ರತಿಭಟನಾಕಾರರು ಸರ್ಕಾರಕ್ಕೆ ಐದು ದಿನಗಳ ಗಡುವು ನೀಡಿದ್ದಾರೆ.
ಕೇಂದ್ರ ಸರ್ಕಾರದ ನಿರ್ಲಕ್ಷ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಕುಸ್ತಿಪಟುಗಳು ತಮ್ಮ ನಿರ್ಧಾರದಂತೆ ಇಂದು ಸಂಜೆ ಹರಿದ್ವಾರದಲ್ಲಿರುವ ಗಂಗಾ ನದಿಗೆ ಪದಕ ಎಸೆಯಲು ತೆರಳಿದ್ದರು. ಈ ವೇಳೆ ಹೈಡ್ರಾಮಾವೇ ನಡೆಯಿತು. ರೈತ ಮುಖಂಡರಾದ ಭಾರತೀಯ ಕಿಸಾನ್ ಮೋರ್ಚಾ ರಾಕೇಶ್ ಟಿಕಾಯತ್ ಮತ್ತು ನರೇಶ್ ಟಿಕಾಯತ್ ಅವರು ಪ್ರತಿಭಟನಾ ನಿರತ ಕುಸ್ತಿಪಟುಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಕೇಶ್ ಟಿಕಾಯತ್ ಮತ್ತು ನರೇಶ್ ಟಿಕಾಯತ್ ಅವರ ಮಾತಿನಂತೆ ಪದಕ ಎಸೆಯುವ ನಿರ್ಧಾರದಿಂದ ಕುಸ್ತಿಪಟುಗಳಾದ ಭಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಹಿಂದೆ ಸರಿದಿದ್ದಾರೆ. ಲೈಂಗಿಕ ಕಿರುಕುಳ ನೀಡಿದ ಸಂಸದರನ್ನು ಕೂಡಲೇ ಬಂಧಿಸಿ ನ್ಯಾಯ ಕೊಡಿಸಬೇಕು. ಅದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಐದು ದಿನ ಕಾಲಾವಕಾಶ ನೀಡಿದ್ದಾರೆ.
ಕುಸ್ತಿಪಟುಗಳಿಗೆ ಅನಿಲ್ ಕುಂಬ್ಳೆ ಬಂಬಲ
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗುತ್ತಿರುವ ಬಿಜೆಪಿ ಸಂಸದನ್ನು ಬಂಧಿಸುವಂತೆ ಪ್ರತಿಭಟನೆ ತೀವ್ರಗೊಂಡಿದೆ. ಕ್ರೀಡಾಪಟುಗಳು ಪದಕಗಳನ್ನು ಗಂಗಾ ನದಿಯಲ್ಲಿ ಎಸೆಯಲು ತೀರ ಪ್ರದೇಶಕ್ಕೆ ಮಂಗಳವಾರ ಸಂಜೆ ಆಗಮಿಸಿದ್ದರು. ಈ ಮಧ್ಯೆ ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಕುಸ್ತಿಪಟುಗಳ ಪ್ರತಿಭಟನೆ ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ಹೌದು, ಕಳೆದ ಕೆಲವು ದಿನಗಳಿಂದ ಕುಸ್ತಿಪಟುಗಳ ಪ್ರತಿಭಟನೆಗೆ ಯಾವುದೇ ಯಾರೊಬ್ಬ ಕ್ರೀಡಾಪಟುಗಳು ಬೆಂಬಲಕ್ಕೆ ಬಂದಿಲ್ಲ ಎಂದು ಆಕ್ರೋಶ ಕೇಳಿ ಬಂದಿತ್ತು. ಇದರ ಬೆನ್ನಲ್ಲೆ ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಬೆಂಬಲ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇದೇ ಮೇ 28 ರಂದು ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ಮ್ಯಾನ್ ಹ್ಯಾಂಡ್ಲಿಂಗ್ ಆಗಿದ್ದರ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದರು. ಸರಿಯಾದ ಮಾತುಕತೆಯ ಮೂಲಕ ಏನನ್ನಾದರೂ ಪರಿಹರಿಸಬಹುದು. ಆದಷ್ಟು ಬೇಗ ಸರ್ಕಾರ ಈ ಬಗ್ಗೆ ಪರಿಹಾರ ಕಲ್ಪಿಸಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರತಿಭಟನೆ ತೀವ್ರ ಸ್ವರೂಪ
ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರು ಮೇಲೆ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಸಂಸದರನ್ನು ಬಂಧಿಸಿ ನ್ಯಾಯ ಕೊಡಿಸುವಂತೆ ಆಗ್ರಹ ಹೆಚ್ಚಾಗುತ್ತಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ.
ಇತ್ತೀಚೆಗೆ ನೂತನ ಸಂಸತ್ ಭವನ ಉದ್ಘಾಟನೆ ವೇಳೆ ಘೇರಾವ್ ಹಾಕಲು ಪ್ರತಿಭಟನಾ ನಿರತ ಕುಸ್ತಿಪಟುಗಳು ಮುಂದಾದಾಗ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಎಫ್‌ಆರ್ ದಾಖಲಿಸಿದ್ದಾರೆ. ಪೊಲೀಸರು ದರ್ಪ ಮೆರೆದಿದ್ದಾರೆ ಎನ್ನಲಾಗುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಮಾತ್ರ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ.
ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸಲ್ಲ ಎಂದು ಕುಸ್ತಿಪಟುಗಳು ಪಟ್ಟು ಹಿದಿದ್ದಾರೆ. ಇದಲ್ಲದೆ ದೆಹಲಿ ಭಾಗದ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.












Click it and Unblock the Notifications