ಲಖಿಂಪುರ ಹಿಂಸಾಚಾರ ಕೇಸ್: ಆಶಿಶ್ ಮಿಶ್ರಾ ಜಾಮೀನಿನ ಹಿಂದೆ ಬಿಜೆಪಿ ಕ್ಷುಲ್ಲಕ ರಾಜಕಾರಣ

ಲಕ್ನೋ, ಫೆಬ್ರವರಿ 11: "ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಹಾಗೂ ಪ್ರಮುಖ ಆರೋಪಿ ಅಶಿಶ್ ಮಿಶ್ರಾ ಜಾಮೀನು ನೀಡಿರುವುದನ್ನು ಬಿಜೆಪಿಯ ಕ್ಷುಲ್ಲಕ ರಾಜಕಾರಣ," ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಟೀಕಿಸಿದ್ದಾರೆ. ಆಶಿಶ್ ಮಿಶ್ರಾಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರೈತರು ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸಿದ ಆಂದೋಲನದ ವೇಳೆ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್, ಲಖಿಂಪುರ ಖೇರಿ ಘಟನೆಯ ನಂತರ ಸ್ಥಳೀಯ ಗ್ರಾಮಸ್ಥರು ಮತ್ತು ಸರ್ಕಾರಿ ಅಧಿಕಾರಿಗಳ ನಡುವೆ ಮಧ್ಯಸ್ಥಿಕೆ ವಹಿಸಿದ್ದರು.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಲಕ್ನೋ ಪೀಠವು ಗುರುವಾರ ಜಾಮೀನು ಮಂಜೂರು ಮಾಡಿದೆ. ಕೋರ್ಟ್ ಕ್ರಮಕ್ಕೆ ರೈತ ಸಂಘಟನೆಗಳಲ್ಲದೇ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

Rakesh Tikait Calls BJPs petty politics after Bail to Ajay Mishras son in Lakhimpur Kheri violence case

ಬಿಜೆಪಿ ಕ್ಷುಲ್ಲಕ ರಾಜಕಾರಣಕ್ಕೆ ಉದಾಹರಣೆ:

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಚಿವ ಅಜಯ್ ಮಿಶ್ರಾ ಟೇನಿ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಸಿಕ್ಕಿದೆ. ಇದು ಬಿಜೆಪಿಯ ಕ್ಷುಲ್ಲಕ ರಾಜಕಾರಣಕ್ಕೆ ಉದಾಹರಣೆಯಾಗಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಮಗೆ ನಂಬಿಕೆಯಿದೆ. ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ. ನಾವು ರೈತರನ್ನು ಮತ್ತು ಯುವಕರನ್ನು ಅಡ್ಡಿಪಡಿಸುತ್ತೇವೆ. ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಮತ್ತು ಅನ್ಯಾಯಗಳ ಬಗ್ಗೆ ದೇಶಕ್ಕೆ ತಿಳಿದಿದೆ," ಎಂದು ಟಿಕಾಯತ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ವ್ಯವಸ್ಥೆ ವಿರುದ್ಧ ಹರಿಹಾಯ್ದ ಜಯಂತ್ ಚೌಧರಿ:

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಹಾಗೂ ಪ್ರಮುಖ ಆರೋಪಿ ಅಶಿಶ್ ಮಿಶ್ರಾ ಜಾಮೀನು ನೀಡಿರುವುದರ ಬಗ್ಗೆ ರಾಷ್ಟ್ರೀಯ ಲೋಕ ದಳ ಮುಖ್ಯಸ್ಥ ಜಯಂತ್ ಚೌಧರಿ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ್ದಾರೆ. ನಾಲ್ಕು ರೈತರನ್ನು ಕೊಂದವರು ನಾಲ್ಕು ತಿಂಗಳಿನಲ್ಲಿ ಜಾಮೀನು ಪಡೆದುಕೊಳ್ಳುತ್ತಾರೆ ಎಂದರೆ ಇದೆಂಥಾ ವ್ಯವಸ್ಥೆ ಎಂದು ಪ್ರಶ್ನಿಸಿದ್ದಾರೆ.

ಕೊಲೆ ಆರೋಪ ಹೊತ್ತಿರುವ ವ್ಯಕ್ತಿಗಳಿಗೆ ಜಾಮೀನು ಸಿಗುವುದು ಅಷ್ಟು ಸುಲಭವೇ? ಅವರು ಸಚಿವ ಸ್ಥಾನದಿಂದ ಕೆಳಗಿಳಿಯುವಂತೆ ಕೇಂದ್ರವನ್ನು ಕೇಳದಿದ್ದಕ್ಕಾಗಿ ಅವರು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು. ದೇಶದ ರೈತರಿಗೆ ನ್ಯಾಯ ಸಿಗುವುದು ಯಾವಾಗ? ಡಿಸೆಂಬರ್ 2021ರಲ್ಲಿ ತಮ್ಮ ವರ್ಷವಿಡೀ ರೈತ ವಿರೋಧಿ ಕೃಷಿ ಕಾಯ್ದೆಗಳ ಪ್ರತಿಭಟನೆಯನ್ನು ಅಂತ್ಯಗೊಳಿಸಿದ ರೈತರಿಗೆ ನೀಡಿದ ಭರವಸೆಗಳನ್ನು ಸರ್ಕಾರ ಇನ್ನೂ ಈಡೇರಿಸಿಲ್ಲ ಎಂದು ಉಪಾಧ್ಯಾಯ ಕೇಳಿದರು.

ಬಿಜೆಪಿಗೆ ಶಾಪವಾಗುತ್ತಾ ಅಶಿಶ್ ಮಿಶ್ರಾ ಜಾಮೀನು?

ರೈತ ಸಂಘಟನೆಗಳು ಲಖಿಂಪುರಖೇರಿ ಪ್ರಕರಣದಲ್ಲಿ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ ಸಚಿವರ ಮೇಲೆ ಕ್ರಮ ಕೈಗೊಳ್ಳುವುದಿರಲಿ ಪ್ರಮುಖ ಆರೋಪಿಗೆ ಜಾಮೀನು ಸಿಕ್ಕಿರುವುದು ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ರೈತ ಮತಗಳು ದೊಡ್ಡ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ. ರೈತ ಮತಗಳು ಕೈತಪ್ಪುವ ಸಾಧ್ಯತೆಗಳು ಇವೆ. ಉತ್ತರಪ್ರದೇಶದಲ್ಲಿ ಚುನಾವಣೆ ಇಂದು ಆರಂಭವಾಗಿದ್ದು ಈ ವೇಳೆ ಲಖಿಂಪುರ ಪ್ರಮುಖ ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿರುವುದು ಬಿಜೆಪಿಯ ಮೇಲೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದನ್ನ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+