ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮನೆಯಲ್ಲೇ ಕುಳಿತು ರಾಮ ಮಂದಿರ ಶಂಕುಸ್ಥಾಪನೆ ನೋಡಿ

|
Google Oneindia Kannada News

ನವದೆಹಲಿ, ಜುಲೈ 26 : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಶಂಕು ಸ್ಥಾಪನೆ ನಡೆಯಲಿದೆ. ಈ ಐತಿಹಾಸಿಕ ಕಾರ್ಯಕ್ರಮವನ್ನು ದೂರದರ್ಶನ ನೇರ ಪ್ರಸಾರ ಮಾಡಲಿದೆ.

ಆಗಸ್ಟ್ 5ರ ಬುಧವಾರ ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ 12.30ಕ್ಕೆ ರಾಮ ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಹಲವಾರು ಜ್ಯೋತಿಷಿಗಳನ್ನು ಸಂಪರ್ಕಿಸಿ ಮುಹೂರ್ತ ನಿಗದಿ ಮಾಡಲಾಗಿದೆ.

ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಜೊತೆ ಯೋಗಿ ಆದಿತ್ಯನಾಥ್ ಚರ್ಚೆರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಜೊತೆ ಯೋಗಿ ಆದಿತ್ಯನಾಥ್ ಚರ್ಚೆ

ಶಂಕು ಸ್ಥಾಪನೆ ದಿನದಂದು 40 ಕೆಜಿ ಬೆಳ್ಳಿಯ ಇಟ್ಟಿಗೆಯನ್ನು ಇಡಲಾಗುತ್ತದೆ. ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶಂಕು ಸ್ಥಾಪನೆ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿಯನ್ನು ನೋಡಿಕೊಳ್ಳಲಿದೆ.

ರಾಮ ಮಂದಿರ ಭೂಮಿ ಪೂಜೆಗೆ ತಡೆ ನೀಡುವಂತೆ ಕೋರ್ಟ್‌ಗೆ ಅರ್ಜಿ ರಾಮ ಮಂದಿರ ಭೂಮಿ ಪೂಜೆಗೆ ತಡೆ ನೀಡುವಂತೆ ಕೋರ್ಟ್‌ಗೆ ಅರ್ಜಿ

Ram Mandir Ground Breaking Ceremony Live On Doordarshan

ರಾಮ ಮಂದಿರ 161 ಅಡಿ ಎತ್ತರವಿರಲಿದೆ. 1988ರಲ್ಲಿ ತಯಾರಿಸಲಾಗಿದ್ದ ಮಾದರಿ 141 ಅಡಿ ಎತ್ತರವಿತ್ತು. ಈಗ ಎತ್ತರವನ್ನು ಹೆಚ್ಚಳ ಮಾಡಲಾಗಿದೆ. ಎರಡು ಮಂಟಪಗಳನ್ನು ಹೊಸ ವಿನ್ಯಾಸಕ್ಕೆ ಸೇರಿಸಲಾಗಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಂಕು ಸ್ಥಾಪನೆ; ಅತಿಥಿಗಳು ಯಾರು? ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಂಕು ಸ್ಥಾಪನೆ; ಅತಿಥಿಗಳು ಯಾರು?

ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 50 ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರಲ್ಲಿ ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಆರ್‌ಎಸ್‌ಎಸ್‌ನ ಪ್ರಮುಖ ನಾಯಕರು ಸೇರಿದ್ದಾರೆ.

ಆಹ್ವಾನಿತರು, ಗಣ್ಯರು ಸೇರಿದಂತೆ 200 ಜನರು ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾಮಾಜಿಕ ಅಂತರವನ್ನು ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಲಿದ್ದಾರೆ. ದೂರದರ್ಶನ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಿದ್ದು, ಜನರು ಮನೆಯಲ್ಲಿಯೇ ಕುಳಿತು ಶಂಕುಸ್ಥಾಪನೆ ವೀಕ್ಷಣೆ ಮಾಡಬಹುದಾಗಿದೆ.

English summary
Prime Minister Narendra Modi will attend the Ram Mandir ground breaking ceremony on August 5 at Uttar Pradesh, Ayodhya. This would be telecast live on Doordarshan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X