ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ: ಆಹ್ವಾನ ಸ್ವೀಕರಿಸಿದ ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ಅದ್ದೂರಿ ಕಾರ್ಯಕ್ರಮ ಜನವರಿ 22ರಂದು ನಡೆಯಲಿದೆ. ಅದರ ಆಹ್ವಾನವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಬುಧವಾರ (ಅಕ್ಟೋಬರ್ 25) ನೀಡಲಾಗಿದ್ದು ಅವರು ಅದನ್ನು ಸ್ವೀಕರಿಸಿದ್ದಾರೆ. ಹೀಗಾಗಿ ರಾಮಮಂದಿರದಲ್ಲಿ ಹಬ್ಬದ ಕಳೆ ಕಟ್ಟಿದೆ.
ಈ ಬಗ್ಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ಮೋದಿಯವರು ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಆಹ್ವಾನ ಸ್ವೀಕರಿಸಿದ್ದು ಭಕ್ತರಲ್ಲಿ ಸಂತಸ ತಂದಿದೆ ಎಂದಿದ್ದಾರೆ. ಸನಾತನ ಆಸ್ಥೆಯ ಆಧಾರದ ಮೇಲೆ ಶ್ರೀರಾಮನ ಪ್ರೀತಿಯ ನಗರವಾದ ಅಯೋಧ್ಯಾಧಾಮದಲ್ಲಿ ಶ್ರೀರಾಮ ಜನ್ಮಭೂಮಿ ಮಂದಿರವನ್ನು ನಿರ್ಮಿಸಲಾಗಿದೆ. ಸದ್ಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದ್ದು ಇದಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅತಿಥಿಗಳನ್ನು ಆಹ್ವಾನಿಸಲಾಗುತ್ತಿದೆ. ಇದರ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಲು ಮೋದಿ ಅವರು ಆಹ್ವಾನ ಸ್ವೀಕರಿಸಿದ್ದು, ಅತಿಥಿಯಾಗಿ ಭಾಗವಹಿಸಲಿದ್ದಾರೆ.
'ಈ ಕಾರ್ಯಕ್ರಮದಲ್ಲಿ ಮೋದಿ ಅವರು ಭಾಗವಹಿಸುತ್ತಿರುವುದು ಸಂತೋಷ ತಂದಿದೆ. ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದಾರೆ. ಇದು ಲಕ್ಷಾಂತರ ರಾಮ ಭಕ್ತರ ಭಾವನೆಗಳನ್ನು ಪ್ರತಿಬಿಂಬಿಸುತ್ತದೆ. ಜೈ-ಜೈ ಸೀತಾ ರಾಮ್!' ಎಂದು ಸಿಎಂ ಯೋಗಿ ಅವರು X ನಲ್ಲಿ ಬರೆದಿದ್ದಾರೆ.
जासु बिरहॅं सोचहु दिन राती
— Yogi Adityanath (@myogiadityanath) October 25, 2023
रटहु निरंतर गुन गन पॉंती।।
रघुकुल तिलक सुजन सुखदाता।
आयउ कुसल देव मुनि त्राता।।
सनातन आस्था के अवलंब प्रभु श्री राम की प्राणप्रिय नगरी श्री अयोध्या धाम में श्रीरामजन्मभूमि मंदिर निर्माण के फलस्वरूप श्री राम लला की प्राण-प्रतिष्ठा का उल्लास, आह्लाद,… https://t.co/F9vB3rxLpM
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧಿಕಾರಿಗಳು ಬುಧವಾರ ಪ್ರಧಾನಿ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದರು. ಅದನ್ನು ಮೋದಿ ಅವರು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರು X ನಲ್ಲಿ ಚಿತ್ರವನ್ನು ಹಂಚಿಕೊಂಡು "ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪುಣ್ಯ ಮಾಡಿದ್ದೇನೆ. ನನ್ನ ಜೀವನದಲ್ಲಿ ನಾನು ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ" ಎಂದು ಬರೆದಿದ್ದಾರೆ.
ಸಿಎಂ ಯೋಗಿ, ಮೋಹನ್ ಭಾಗವತ್ ಭಾಗಿ
ಇದೇ ವೇಳೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರೈ ಮಾತನಾಡಿ, ಈ ಐತಿಹಾಸಿಕ ಸಂದರ್ಭಕ್ಕೆ ದೇಶದ 4000 ಸಂತರು, ಮಹಾತ್ಮರು ಹಾಗೂ ಸಮಾಜದ 2500 ಗಣ್ಯರು ಸಾಕ್ಷಿಯಾಗಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರ್ಸಂಘಚಾಲಕ ಡಾ.ಮೋಹನ್ ಭಾಗವತ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮಮಂದಿರ ಪ್ರಾಣಪ್ರತಿಷ್ಠಾಪನೆಗಯಲ್ಲಿ ಪ್ರಧಾನಿಯವರೊಂದಿಗೆ ಉಪಸ್ಥಿತರಿರುತ್ತಾರೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ನಂತರ ಉಡುಪಿ ಪೇಜಾವರ ಮಠದ ಪೂಜ್ಯ ಸ್ವಾಮಿ ವಿಶ್ವಪ್ರಸನ್ನ ತೀರ್ಥ ಮಹಾರಾಜ್, ಪೂಜ್ಯ ಸ್ವಾಮಿ ಗೋವಿಂದ ದೇವಗಿರಿ ಮಹಾರಾಜ್, ದೇವಾಲಯ ನಿರ್ಮಾಣ ಸಮಿತಿ ಅಧ್ಯಕ್ಷ ಶ್ರೀ ನೃಪೇಂದ್ರ ಮಿಶ್ರಾ ಅವರನ್ನು ನಾವು ಔಪಚಾರಿಕವಾಗಿ ಆಹ್ವಾನಿಸಿದ್ದೇವೆ ಎಂದು ಚಂಪತ್ ರೈ ಹೇಳಿದರು. ಅಯೋಧ್ಯೆಗೆ ಭೇಟಿ ನೀಡಿ ಎಂದು ಪತ್ರವನ್ನು ಅವರಿಗೆ ಸಲ್ಲಿಸಲಾಯಿತು ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ ಎಂದರು.












Click it and Unblock the Notifications