Tirupati Laddu to Ram Mandir: ಅಯೋಧ್ಯೆದಲ್ಲಿನ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ: ರಾಮಲಲ್ಲಾನಿಗೆ ಲಕ್ಷ ಲಡ್ಡು...
ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಆ ಮಧುರ ಕ್ಷಣಕ್ಕಾಗಿ ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇದಕ್ಕಾಗಿ ಭವ್ಯವಾದ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತಿದೆ. ಇದೇ ವೇಳೆ ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನದಿಂದ ಸಿಹಿ ಸುದ್ದಿಯನ್ನು ನೀಡಲಾಗಿದೆ.
ಹೌದು... ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಗೆ ಬರುವ ಭಕ್ತರಿಗೆ ಶ್ರೀವಾರಿ ಲಡ್ಡೂಗಳನ್ನು ಪ್ರಸಾದವಾಗಿ ನೀಡಲಾಗುವುದು ಎಂದು ಟಿಟಿಡಿ ಪ್ರಕಟಿಸಿದೆ. ಈ ಬಗ್ಗೆ ಶುಕ್ರವಾರ ಆಯೋಜಿಸಿದ್ದ ಡಯಲ್ ಯುವರ್ ಈವೋ ಕಾರ್ಯಕ್ರಮದಲ್ಲಿ ಟಿಟಿಡಿ ಈವೋ ಎ.ವಿ.ಧರ್ಮ ರೆಡ್ಡಿ ಬಹಿರಂಗಪಡಿಸಿದರು.

ವಿಶೇಷವಾಗಿ ಸಿದ್ಧಪಡಿಸಿದ ಲಕ್ಷ ಲಡ್ಡೂಗಳನ್ನು ಅಯೋಧ್ಯೆಗೆ ಕಳುಹಿಸಲಾಗುತ್ತಿದೆ. ಈ ಲಡ್ಡುಗಳು ಒಂದೊಂದು ತಲಾ 25 ಗ್ರಾಂ ಇದೆ. ತಿರುಮಲದಲ್ಲಿ ಸಾಮಾನ್ಯವಾಗಿ 75 ಗ್ರಾಂ ಲಡ್ಡೂಗಳನ್ನು ಭಕ್ತರಿಗೆ ಮಾರಾಟ ಮಾಡಲಾಗುತ್ತಿದ್ದರೆ, ಅಯೋಧ್ಯೆಗೆ ಶ್ರೀವಾರಿ ಪ್ರಸಾದವಾಗಿ 25 ಗ್ರಾಂನ 1 ಲಕ್ಷ ಲಡ್ಡೂಗಳನ್ನು ಕಳುಹಿಸಲಾಗುವುದು ಎಂದು ಧರ್ಮ ರೆಡ್ಡಿ ಘೋಷಿಸಿದರು.
ಇದೇ ವೇಳೆ ಅವರು, ಸನಾತನ ಹಿಂದೂ ಧರ್ಮ ಅಭಿಯಾನದ ಅಂಗವಾಗಿ ತಿರುಮಲದಲ್ಲಿ ಫೆ.3ರಿಂದ 5ರವರೆಗೆ ನಾಡಿನ ಪ್ರಮುಖ ಪೀಠಾಧಿಪತಿಗಳು, ಮಠಾಧೀಶರು, ದತ್ತಿ ಸಂಸ್ಥೆಗಳೊಂದಿಗೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಒಟ್ಟು 6.47 ಲಕ್ಷ ಭಕ್ತರು ಮೂಲಕ ಯಾವುದೇ ತೊಂದರೆಗಳಿಲ್ಲದೆ ವೈಕುಂಠ ದ್ವಾರ ದರ್ಶನ ಪಡೆದಿದ್ದು, ಆನ್‌ಲೈನ್‌ನಲ್ಲಿ 2.25 ಲಕ್ಷ ಟಿಕೆಟ್‌ಗಳನ್ನು ಕಾಯ್ದಿರಿಸಲಾಗಿತ್ತು ಎಂದು ಅವರು ಹೇಳಿದರು.

ತಿರುಮಲದಲ್ಲಿ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪ್ಲಾಸ್ಟಿಕ್ ಕಪ್ ಬದಲಿಗೆ ಪೇಪರ್ ಕಪ್ ಬಳಸಲಾಗುತ್ತಿದೆ ಎಂದರು. ಟೀ ಸ್ಟಾಲ್‌ಗಳ ಮಾಲೀಕರೊಂದಿಗೆ ಚರ್ಚಿಸಿ ಮಣ್ಣಿನ ಲೋಟಗಳನ್ನು ಬಳಸುವಂತೆ ಜಾಗೃತಿ ಮೂಡಿಸಲಾಗುವುದು ಎಂದು ಇವೋ ತಿಳಿಸಿದ್ದಾರೆ.
ಇಡೀ ದೇಶಕ್ಕೆ ಮಹತ್ವದ ದಿನ
ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಜನವರಿ 22 ರಂದು ರಾಮ ಮಂದಿರದ ಗರ್ಭ ಗೃಹದಲ್ಲಿ ಪ್ರಧಾನಿ ಮೋದಿ ಅವರ ಸಾರಥ್ಯದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ಅಂದಿನಿಂದಲೇ ಭಕ್ತರ ದರ್ಶನಕ್ಕೆ ರಾಮ ಮಂದಿರ ತೆರೆಯಲಿದೆ. ಇದರ ಜೊತೆಯಲ್ಲೇ ಬರೋಬ್ಬರಿ 48 ದಿನಗಳ ಕಾಲ ಬ್ರಹ್ಮಕಲಶೋತ್ಸವ ಕೂಡಾ ನಡೆಯಲಿದೆ.

ಇದೇ ಹೊತ್ತಲ್ಲಿ ಭಾರತ ದೇಶ ಮಾತ್ರವಲ್ಲ, ವಿಶ್ವಾದ್ಯಂತ ಹಿಂದೂ ಧರ್ಮೀಯರು ಮನೆ ಮನೆಗಳಲ್ಲಿ ದೀಪ ಬೆಳಗಿ ರಾಮ ನಾಮ ಸ್ಮರಣೆ ಮಾಡಲಿದ್ದಾರೆ. ಇನ್ನು ಉದ್ಘಾಟನೆಗೆ ಸಜ್ಜಾಗಿರುವ ಅಯೋಧ್ಯಾ ಶ್ರೀರಾಮ ಮಂದಿರ ಹತ್ತು ಹಲವು ವಿಶೇಷತೆಗಳನ್ನು ಹೊಂದಿರುವ ಜೊತೆಯಲ್ಲೇ ಇಲ್ಲಿನ ಪೂಜೆ, ಪುನಸ್ಕಾರಗಳೂ ವಿಶಿಷ್ಟವಾಗಿ ನಡೆಯಲಿದೆ. ಆದರೆ, ರಾಮ ಮಂದಿರದಲ್ಲಿ ಭಕ್ತರಿಗೆ ಹರಕೆ ಸೇವೆಗಳೇ ಇರೋದಿಲ್ಲವಂತೆ.
ಭಾರತ ದೇಶ ಮಾತ್ರವಲ್ಲ, ವಿಶ್ವದೆಲ್ಲೆಡೆಯ ಹಿಂದೂಗಳಿಗೆ ಜನವರಿ 22 ಅತ್ಯಂತ ಮಹತ್ವದ ದಿನ. ಶತಮಾನಗಳ ಕಾಲ ಹಿಂದೂ ಸಮುದಾಯ ಕಾದು ಕುಳಿತಿದ್ದ ಮಹತ್ವದ ಕಾರ್ಯಕ್ರಮವೊಂದು ಆ ದಿನ ನಡೆಯಲಿದೆ. ಅಯೋಧ್ಯೆಯ ಶ್ರೀರಾಮ ಮಂದಿರ ಇನ್ನೇನು ಮುಕ್ತಾಯ ಹಂತದಲ್ಲಿದೆ. ಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ಮೂರ್ತಿ, ಅಂದರೆ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಗೆ ಜನವರಿ 22ರಂದು ಮುಹೂರ್ತ ನಿಗದಿ ಆಗಿದೆ. ಪ್ರಧಾನಿ ಮೋದಿ ಅವರು ರಾಮ ಮಂದಿರದಿಂದ 500 ಮೀಟರ್ ದೂರದಲ್ಲಿ ಇರುವ ತಾತ್ಕಾಲಿಕ ನೆಲೆಯಿಂದ ಬಾಲ ರಾಮನ ಮೂರ್ತಿಯನ್ನು ತಮ್ಮ ಕೈಗಳಲ್ಲಿ ಹೊತ್ತು ತಂದು ಕಾಲ್ನಡಿಗೆ ಮೂಲಕವೇ ಶ್ರೀರಾಮ ಮಂದಿರದ ಗರ್ಭ ಗೃಹ ತಲುಪಲಿದ್ದಾರೆ.












Click it and Unblock the Notifications