Bakrid: ಬಕ್ರೀದ್‌ಗೆ ಬಲಿ ಕೊಡುವ ಕುರಿ ಮೇಲೆ ರಾಮನ ಹೆಸರು- ಮಟನ್ ಅಂಗಡಿ ಮಾಲೀಕ ಬಂಧನ
ಬಕ್ರೀದ್‌ಗೆ ಬಲಿ ಕೊಡುವ ಕುರಿ ಮೇಲೆ ಶ್ರೀರಾಮನ ಹೆಸರು ಬರೆದ ವಿಚಿತ್ರ ಘಟನೆ ಮಹಾರಾಷ್ಟ್ರದ ನವಿ ಮುಂಬೈನ ಸಿಬಿಡಿ ಬೇಲಾಪುರ ಪ್ರದೇಶದಲ್ಲಿ ನಡೆದಿದೆ.
ಬಲಿ ಕೊಟ್ಟ ಕುರಿ ಮೇಲೆ ರಾಮನ ಹೆಸರು ಬರೆದಿದ್ದರಿಂದ ಹಿಂದೂಗಳ ಭಾವನೆಗೆ ದಕ್ಕೆ ತರುವಂತಹ ಘಟನೆ ನಡೆದಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಯ ಎದುರು ಹಿಂದೂ ಸಂಘಟನೆಯವರು ಪ್ರತಿಭಟನೆಗೆ ಮುಂದಾಗಿದ್ದರು. ವಿಷಯ ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಮಟನ್ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ.

ಬೇಲಾಪುರ ಪ್ರದೇಶದಲ್ಲಿ ರಾಮನ ಹೆಸರು ಬರೆದು ಕುರಿ ಮಾರುವ ಯತ್ನ ನಡೆದಿದೆ. ಈ ಮೇಕೆ ಬಲಿ ಕೊಡಲು ಯೋಜನೆ ರೂಪಿಸಲಾಗಿತ್ತು. ಆದರೆ ಅದಕ್ಕೂ ಮುನ್ನವೇ ಹಿಂದೂ ಸಂಘಟನೆಯವರಿಗೆ ಈ ಬಗ್ಗೆ ಮಾಹಿತಿ ಸಿಕ್ಕಿದ್ದು, ಬಳಿಕ ಠಾಣೆಯ ಹೊರಗೆ ಗಲಾಟೆ ಮಾಡಿದ್ದಾರೆ. ವಿಷಯ ಉಲ್ಬಣಗೊಳ್ಳುತ್ತಿರುವುದನ್ನು ನೋಡಿದ ನವಿ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿ, ಮಟನ್ ಅಂಗಡಿಯ ಮಾಲೀಕರನ್ನು ಬಂಧಿಸಿದ್ದಾರೆ.
Mumbai Police have filed a complaint against the owner of meat shop after a video showing a goat with the name 'RAM' written on its skin in yellow color went viral ahead of Bakrid.
— SK Chakraborty (@sanjoychakra) June 16, 2024
Goodluck Goat Meat Shop, Navi Mumbai.
Clear act of incitement.
Goat painted with word "Ram"… pic.twitter.com/eYdWZDnkUl
'ರಾಮ'ನ ಹೆಸರು ಬರೆದ ಕುರಿ ಬಲಿ!
ಪ್ರಾಥಮಿಕ ಮಾಹಿತಿಯ ಪ್ರಕಾರ, ನವಿ ಮುಂಬೈನ ಸಿಬಿಡಿ ಸೆಕ್ಟರ್ ಒಂದರ ಗುಡ್‌ಲಕ್ ಮಟನ್ ಶಾಪ್‌ನಲ್ಲಿ ರಾಮನ ಹೆಸರನ್ನು ಬರೆದ ಕುರಿಯನ್ನು ಮಾರಾಟಕ್ಕೆ ಇಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಅಂಗಡಿ ಮಾಲೀಕರನ್ನು ವಶಕ್ಕೆ ಪಡೆದಿದ್ದಾರೆ.
ಜೂನ್ 17 ರಂದು ಮುಸ್ಲಿಮರ ಹಬ್ಬ ಬಕ್ರೀದ್ ಆಚರಿಸಲಾಯಿತು. ಈ ದಿನ ಪ್ರಾಣಿಗಳನ್ನು ಬಲಿಕೊಡಲಾಗುತ್ತದೆ. ಪ್ರವಾದಿ ಇಬ್ರಾಹಿಂ ದೇವರ ವಿಧೇಯತೆಯನ್ನು ಸ್ಮರಿಸಲು ಬಕ್ರೀದ್ ಆಚರಿಸಲಾಗುತ್ತದೆ.

ಮೇಕೆಗಳನ್ನು ಮನೆಗೆ ತರುವುದನ್ನು ವಿರೋಧಿಸಿ ಪ್ರತಿಭಟನೆ!
ಕಳೆದ ವರ್ಷ 2023ರಲ್ಲಿ ಮುಂಬೈನ ಮೀರಾ ರೋಡ್ ಪ್ರದೇಶದಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿತ್ತು. ಅಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ವಸತಿ ಸಮುಚ್ಚಯದಲ್ಲಿ ಬಲಿ ಕೊಡಲು ಮೇಕೆಗಳನ್ನು ತಂದಿದ್ದನು. ಇದು ಅಲ್ಲಿ ನೆಲೆಸಿರುವ ಹಿಂದೂಗಳಿಗೆ ಜನತೆಗೆ ಇಷ್ಟವಾಗದೆ ಪ್ರತಿಭಟನೆಗೆ ಮುಂದಾದರು.
ಹನುಮಾನ್ ಚಾಲೀಸಾ ಪಠಣ ಮಾಡಿ ಜೈ ಶ್ರೀರಾಮ್ ಘೋಷಣೆ ಕೂಗಿದರು. ಯಾವುದೇ ಪ್ರಾಣಿಯನ್ನು ಆವರಣದೊಳಗೆ ತರಬಾರದು ಎಂಬ ನಿಯಮವಿದೆ ಎಂದು ಜನರು ಪಟ್ಟುಹಿಡಿದರು. ಬಲಿ ಕೊಡಲು ತಂದ ಮೇಕೆಗಳನ್ನು ಹೊರಗೆ ಬಲಿ ಕೊಡಲಿ ಸಮುಚ್ಚಾಯಗಳಿಗೆ ತರುವುದು ಬೇಡ ಎಂದು ಆಗ್ರಹಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications