Ramayana video viral: ನೋಯ್ಡಾ ಬಾರ್‌ನಲ್ಲಿ ರಾಮಾಯಣ ವಿಡಿಯೋ ಪ್ರಸಾರ: ರೆಸ್ಟೊ-ಬಾರ್‌ಗೆ ಬೆದರಿಕೆ
ನೋಯ್ಡಾ ಏಪ್ರಿಲ್ 11: ರೆಸ್ಟೋ ಬಾರ್‌ನಲ್ಲಿ ಡಬ್ ಮಾಡಿದ ರಾಮಾಯಣ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ನೋಯ್ಡಾದಲ್ಲಿ ಟಿವಿ ಧಾರಾವಾಹಿ ರಾಮಾಯಣವನ್ನು ಡಬ್ ಮಾಡಿ ಆ ವಿಡಿಯೊವನ್ನು ಬಾರ್‌ನಲ್ಲಿ ಪ್ರಸಾರ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕಿಡಿಕೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರೆಸ್ಟೋ ಬಾರ್‌ನ ದೊಡ್ಡ ಪರದೆಯ ಮೇಲೆ ರಾಮಾಯಣದ ದೃಶ್ಯಗಳನ್ನು ಪ್ರಸಾರ ಮಾಡಲಾಗಿದೆ. ಇದನ್ನು ಪ್ರಸಾರ ಮಾಡಿದ ನಂತರ ರೆಸ್ಟ್ರೋ-ಬಾರ್‌ನ ಸಹ-ಮಾಲೀಕ ಮತ್ತು ಅದರ ವ್ಯವಸ್ಥಾಪಕರನ್ನು ಸೋಮವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧಾರಾವಾಹಿಯ ಡಬ್ಬಿಂಗ್ ವಿಡಿಯೊದ ಕಿರು ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಹಲವಾರು ಇಂಟರ್ನೆಟ್ ಬಳಕೆದಾರರು ಅದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಪೊಲೀಸರು ತಾವಾಗಿಯೇ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ರಾಮಾಯಣದ ರಾಮ ಮತ್ತು ರಾಕ್ಷಸ ರಾಜ ರಾವಣನ ಪಾತ್ರಗಳನ್ನು ಆಧುನಿಕ ಸಂಗೀತವನ್ನು ಪ್ಲೇ ಮಾಡಲಾಗಿದೆ. ಇದು ಕೆಲವು ಸಾಮಾಜಿಕ ಮಾಧ್ಯಮ ವೈರಲ್ ಆದ ಬಳಿಕ ರೆಸ್ಟೋ ಬಾರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾತನಾಡಿದ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೋಯ್ಡಾ) ಶಕ್ತಿ ಮೋಹನ್ ಅವಸ್ತಿ ಅವರು, 'ಸೋಶಿಯಲ್ ಮೀಡಿಯಾದಲ್ಲಿ ಸೋಮವಾರ ಬೆಳಿಗ್ಗೆ ವಿಡಿಯೊ ವೈರಲ್ ಆಗಿದೆ. ಈ ವಿಡಿಯೋವನ್ನು ಗಾರ್ಡನ್ ಗ್ಯಾಲೇರಿಯಾ ಮಾಲ್‌ನಲ್ಲಿರುವ 'ಲಾರ್ಡ್ ಆಫ್ ದಿ ಡ್ರಿಂಕ್ಸ್ ರೆಸ್ಟೊ-ಬಾರ್ ನಲ್ಲಿ ಸೆರೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ ತಕ್ಷಣ ಸೆಕ್ಟರ್ 39 ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ' ಎಂದರು.

ತಲೆಮರೆಸಿಕೊಂಡ ಡಿಜೆ ಆಪರೇಟರ್
ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಾರ್ ಮಾಲೀಕ ಮೀನಕ್ ಕುಮಾರ್ ಹಾಗೂ ಮ್ಯಾನೇಜರ್ ಅಭಿಷೇಕ್ ಸೋನಿ ಅವರನ್ನು ಬಂಧಿಸಲಾಗಿದೆ. ಡಿಜೆ ಆಪರೇಟರ್ ತಲೆಮರೆಸಿಕೊಂಡಿದ್ದು, ಆತನ ಹುಡುಕಾಟ ನಡೆಯುತ್ತಿದೆ ಎಂದು ಶಕ್ತಿ ಮೋಹ ಅವರು ಹೇಳಿದರು.
ಭಾರತೀಯ ದಂಡ ಸಂಹಿತೆಯ ಎಫ್‌ಐಆರ್‌ನ ಸೆಕ್ಷನ್ 153A (ಸದ್ಭಾವನೆಗೆ ಪೂರ್ವಾಗ್ರಹ ಪೀಡಿತ ಅಥವಾ ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಕೃತ್ಯ) ಮತ್ತು 295 (ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಹಾನಿಗೊಳಿಸುವುದು ಅಥವಾ ಅಪವಿತ್ರಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ವಿಟರ್‌ನಲ್ಲಿ ವಿಡಿಯೊ ವೈರಲ್ ಆದ ಬಳಿಕ ಇಂಟರ್ನೆಟ್ ಬಳಕೆದಾರರು ರೆಸ್ಟೊ-ಬಾರ್ ಅನ್ನು ಧ್ವಂಸಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಪೊಲೀಸರು ಮುಂಜಾಗೃತ ಕ್ರಮಗಳನ್ನು ಕೈಗೊಂಡಿದ್ದಾರೆ.
ರಾಮಾಯಣದಲ್ಲಿ ರಾಮ
ರಾಮಾಯಣದ ಕಥೆಯು ಮುಖ್ಯವಾಗಿ ಅಯೋಧ್ಯೆಯ ಸೂರ್ಯವಂಶದ ರಾಜಪುತ್ರ ರಾಮ, ಆತನ ಮಡದಿ ಸೀತೆ ಹಾಗೂ ಸೀತೆಯ ಅಪಹರಣ ಮಾಡಿದ ರಾವಣನ ಸಂಹಾರ ಕುರಿತಾಗಿದೆ. ವಾಲ್ಮೀಕಿ ಮಹರ್ಷಿಗಳಿಂದ ರಚಿತವಾದ ಈ ಕಾವ್ಯ ರಾಮನ ಮಕ್ಕಳಾದ ಲವ-ಕುಶರಿಂದ ಪ್ರಚಲಿತವಾಯಿತು. ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯಕ ಕೃತಿಗಳಲ್ಲೊಂದಾದ ರಾಮಾಯಣವು ಭಾರತ ಉಪಖಂಡದ ಕಲೆ ಮತ್ತು ಸಂಸ್ಕೃತಿಯ ಮೇಲೆ ಆಳವಾದ ಪ್ರಭಾವ ಬೀರಿದೆ. ದೇಶದ ಮೂಲೆ ಮೂಲೆಯಲ್ಲಿ ಕಲಿಯುಗದ ಮಹಾಪುರುಷ ರಾಮನ ಭಕ್ತರಿದ್ದಾರೆ. ಶ್ರೀರಾಮನ ಜಯಂತಿ ಹನುಮ ಜಯಂತಿಯನ್ನು ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸಲಾಗುತ್ತದೆ.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications