ಭಾರತ ಕ್ರಿಕೆಟ್ ತಂಡದಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಬೇಕು: ಸಚಿವ ಆಠವಲೆ

ನಾಗ್ಪುರ, ಜುಲೈ 02 : ಭಾರತ ಕ್ರಿಕೆಟ್ ತಂಡದಲ್ಲಿ ಇದೀಗ ಎಸ್ಸಿ, ಎಸ್ಟಿ ಮೀಸಲಾತಿ ಬೇಕು ಎಂಬ ಕೂಗು ಕೇಳಿ ಬಂದಿದೆ.

'ಭಾರತ ಕ್ರಿಕೆಟ್ ತಂಡ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ಎದುರು ಸೋಲು ಕಂಡಿರುವುದನ್ನು ತನಿಖೆಗೆ ಒಳಪಡಿಸಬೇಕು'ಎಂದು ಆಗ್ರಹಿಸಿದ್ದ ಕೇಂದ್ರ ಸಚಿವ ರಾಮದಾಸ ಆಠವಲೆ ಇದೀಗ ಟೀಂ ಇಂಡಿಯಾದಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಬೇಕು ಎಂದಿದ್ದಾರೆ.

Ramdas Athawale calls for reservations for SC, ST in Indian cricket team

ನಾಗ್ಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ ಆಠವಲೆ, ಬಿಸಿಸಿಐ ಭಾರತ ಕ್ರಿಕೆಟ್ ತಂಡದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕ್ರೀಡಾಪಟುಗಳಿಗೆ ಮೀಸಲಾತಿ ನೀಡುವ ಮೂಲಕ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಒಂದು ವೇಳೆ ಭಾರತದ ಕ್ರಿಕೆಟ್ ಟೀಂನಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ನೀಡುವುದಾದರೆ ತಂಡದ ಸಾಮರ್ಥ್ಯವೂ ಉತ್ತಮಗೊಳ್ಳಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+