Delhi Elections 2025: 'ಮಾಜಿ ಸಂಸದ ರಮೇಶ್ ಬಿಧುರಿ ಬಿಜೆಪಿ ಸಿಎಂ ಅಭ್ಯರ್ಥಿ': ಬಹಿರಂಗ ಚರ್ಚೆಗೆ ಕೇಜ್ರಿವಾಲ್
ನವದೆಹಲಿ, ಜನವರಿ 13: ದೆಹಲಿ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯ ಬೆನ್ನಲ್ಲೇ ರಾಜಕೀಯ ಪಕ್ಷಗಳು ಹಲವು ಗ್ಯಾರಂಟಿಗಳನ್ನ ನೀಡುವ ಮೂಲಕ ಮತದಾರರನ್ನ ಸೆಳೆಯುತ್ತಿವೆ. ಇತ್ತ ಚುನಾವಣಾ ಪ್ರಚಾರದ ವೇಳೆ ಬಿಜೆಪಿ, ಎಎಪಿ ಹಾಗೂ ಕಾಂಗ್ರೆಸ್ ವಾಕ್ಸಮರವನ್ನ ನಡೆಸುತ್ತಿದ್ದು, ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.
AAP ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಮಾತನಾಡಿ, ಬಿಜೆಪಿಯು ಮಾಜಿ ಸಂಸದ ರಮೇಶ್ ಬಿಧುರಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಶೀಘ್ರದಲ್ಲೇ ಘೋಷಣೆ ಮಾಡಲಿದೆ ಎಂದು ತಿಳಿಸಿದ್ದಾಋಎ.

ಬಿಜೆಪಿಯು ಮಾಜಿ ಸಂಸದ ರಮೇಶ್ ಬಿಧುರಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಶೀಘ್ರದಲ್ಲೇ ಘೋಷಣೆ ಮಾಡಲಿದೆ ಎಂದು AAP ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ. ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ರಮೇಶ್ ಬಿಧುರಿ ಅವರನ್ನು ಹೆಸರಿಸಲಿದೆ ಎಂದು ನಮಗೆ ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ.
ಎಎಪಿ ಮತ್ತು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಗಳ ನಡುವೆ ಬಹಿರಂಗ ಚರ್ಚೆ ನಡೆಯಬೇಕು, ಅದು ರಮೇಶ್ ಬಿಧುರಿ ಅಥವಾ ಬೇರೆ ಯಾರೇ ಆಗಿರಲಿ ಎಂದರು. ಹೌದು ಬಹಿರಂಗ ಚರ್ಚೆಗೆ ಬಿಜೆಪಿಗೆ ಸವಾಲು ಹಾಕುತ್ತಿದ್ದೇವೆ ಎಂದು ಕೇಜ್ರಿವಾಲ್ ಅವರು ತಿಳಿಸಿದರು. ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಬಿಧುರಿ ಅವರನ್ನು ಕಣಕ್ಕಿಳಿಸಿದೆ. ಎಎಪಿ ಅಭ್ಯರ್ಥಿ ಮತ್ತು ದೆಹಲಿ ಮುಖ್ಯಮಂತ್ರಿ ಅತಿಶಿ ಅವರಿಗೆ ಎದುರಾಳಿಯಾಗಿದ್ದಾರೆ.
ಇನ್ನೂ ಭಾನುವಾರ ರಮೇಶ್ ಬಿಧುರಿ ಅವರು, ಮುಖ್ಯಮಂತ್ರಿ ಅಭ್ಯರ್ಥಿಯ ಊಹಾಪೋಹಗಳನ್ನು ಸಂಪೂರ್ಣವಾಗಿ ಆಧಾರರಹಿತ ಎಂದು ತಿಳಿಸಿದ್ದಾರೆ, ಬಿಜೆಪಿ ಪಕ್ಷದ ಸಮರ್ಪಿತ ಕಾರ್ಯಕರ್ತನಾಗಿ ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತೇನೆ ಎಂದು ಹೇಳಿದರು. ಇನ್ನೂ ಈ ವದಂತಿಗಳನ್ನು ಎಎಪಿಯ ಉದ್ದೇಶಪೂರ್ವಕ ಪ್ರಚಾರ ಮಾಡುತ್ತಿದೆ. ನನಗೆ ಯಾವುದೇ ಸ್ಥಾನದ ಬಗ್ಗೆ ಆಸೆ ಇಲ್ಲ. ಮುಖ್ಯಮಂತ್ರಿ ಹುದ್ದೆಗೆ ನನ್ನ ಬಗ್ಗೆ ಮಾತನಾಡುವುದು ಸಂಪೂರ್ಣವಾಗಿ ಆಧಾರರಹಿತವಾಗಿದೆ ಎಂದು ಮಾಜಿ ಸಂಸದ ರಮೇಶ್ ಬಿಧುರಿ ತಿಳಿಸಿದ್ದಾರೆ.
ನನಗೆ ಪಕ್ಷವು ನನಗೆ ತುಂಬಾ ನೀಡಿದೆ. ನಾನು ಯಾವುದೇ ಸ್ಥಾನಕ್ಕೆ ಹಕ್ಕು ಹೊಂದಿಲ್ಲ. ಅರವಿಂದ್ ಕೇಜ್ರಿವಾಲ್ ಅವರು ನಿರಂತರವಾಗಿ ನನ್ನ ಬಗ್ಗೆ ತಪ್ಪು ಪ್ರಚಾರವನ್ನು ಮಾಡಿದ್ದಾರೆ. ನಾನು ಯಾವುದೇ ಹುದ್ದೆಗೆ ಹಕ್ಕುದಾರನಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ತಮ್ಮನ್ನು ಮುಖ್ಯಮಂತ್ರಿಯಾಗಿ ಹೆಸರಿಸುವ ಮೂಲಕ ಕೇಸರಿ ಪಕ್ಷವು ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರ ರಚಿಸುತ್ತಿದೆ ಎಂದು ಎಎಪಿ ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ನಾಯಕ ಹೇಳಿಕೆ ನೀಡಿದರು.












Click it and Unblock the Notifications