Get Updates
Get notified of breaking news, exclusive insights, and must-see stories!

Jarkiholi CD case: ಅಮಿತ್ ಶಾ ಭೇಟಿಗೆ ತೆರಳಿದ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣ ಸಿಬಿಐಗೆ ಹಸ್ತಾತರಿಸಲು ಮನವಿ

ಸಚಿವ ಸ್ಥಾನವನ್ನು ಕಳೆದುಕೊಳ್ಳುವಂತೆ ಮಾಡಿದ ಸಿಡಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಮನವಿ ಮಾಡಲು ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಅಮಿತ್ ಶಾರನ್ನು ಭೇಟಿಯಾಗಲಿದ್ದಾರೆ.

ನವದೆಹಲಿ, ಫೆಬ್ರವರಿ. 03: ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ನವದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ವಿರುದ್ಧದ ಸೆಕ್ಸ್ ಸಿಡಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ.

ಜಾರಕಿಹೊಳಿ ಕುಟುಂಬದ ಆಪ್ತರು ಹೇಳುವಂತೆ ಮಾಜಿ ಸಚಿವರು ಕೆಲವು ಆಡಿಯೋ ಕ್ಲಿಪ್‌ಗಳನ್ನು ಹೊತ್ತೊಯ್ದಿದ್ದಾರೆ. ಈ ಆಧಾರಗಳು ಪ್ರಕರಣವನ್ನು ಹನಿ ಟ್ರ್ಯಾಪ್ ಎಂದು ಸಾಬೀತುಪಡಿಸುತ್ತದೆ ಎಂದಿದ್ದಾರೆ. ಜೊತೆಗೆ ಇದರ ಹಿಂದೆ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರ ಗ್ಯಾಂಗ್‌ನ ಕೈವಾಡವಿದೆ ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ಅಮಿತ್ ಶಾ ಅವರ ಭೇಟಿಗೆ ಸಮಯ ಕೋರಿದ್ದಾರೆ. ಇನ್ನೆರಡು ದಿನದಲ್ಲಿ ಗೃಹ ಸಚಿವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ಜಾರಕಿಹೊಳಿ ಅವರ ಜತೆ ಪ್ರವಾಸ ಕೈಗೊಂಡಿರುವ ಗೋಕಾಕದ ಬಿಜೆಪಿ ಮುಖಂಡರೊಬ್ಬರು ತಿಳಿಸಿದರು. ಆದರೆ, ಬೆಳಗಾವಿಗೆ ಮರಳಿದ ನಂತರವೇ ಈ ಬಗ್ಗೆ ಪ್ರತಿಕ್ರಿಯೆ ನೀಡುವುದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಹನಿ ಟ್ರ್ಯಾಪ್ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ!

ಹನಿ ಟ್ರ್ಯಾಪ್ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ!

ಈ ಸಿಡಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ರಮೇಶ್ ಜಾರಕಿಹೊಳಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದರು. ಹನಿ ಟ್ರ್ಯಾಪ್‌ನ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ಆರೋಪಿಸಿದ್ದರು.

ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ಹಲವಾರು ನಾಯಕರು ಮತ್ತು ಅಧಿಕಾರಿಗಳ ಇಂತಹ ಸಿಡಿಗಳನ್ನು ರಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಈ ಆರೋಪಗಳನ್ನು ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದು, ರಮೇಶ್ ಜಾರಕಿಹೊಳಿ "ತಮ್ಮ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ" ಎಂದು ಟೀಕಿಸಿದ್ದಾರೆ.

ಮಾಜಿ ಸಚಿವರ ಮೇಲೆ ಕಿಡಿಕಾರಿದ ಚನ್ನರಾಜ್ ಹಟ್ಟಿಹೊಳಿ

ಮಾಜಿ ಸಚಿವರ ಮೇಲೆ ಕಿಡಿಕಾರಿದ ಚನ್ನರಾಜ್ ಹಟ್ಟಿಹೊಳಿ

ಡಿ.ಕೆ. ಶಿವಕುಮಾರ್ ಜೊತೆಗೂಡಿ ತಮ್ಮ ಮಾನಹಾನಿ ಮಾಡಲು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಜಾರಕಿಹೊಳಿ ಆರೋಪವನ್ನು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಿರಿಯ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರು ನಿರಾಕರಿಸಿದ್ದಾರೆ.

ಇದೇ ವೇಳೆ ರಮೇಶ್ ಜಾರಕಿಹೊಳಿ ಕಿರಿಯ ಸಹೋದರ ಹಾಗೂ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಾರ್ವಜನಿಕವಾಗಿ ಗಲಾಟೆ ಮಾಡುವುದರಲ್ಲಿ ಯಾವುದೇ ಪ್ರಯೋಜನವಿಲ್ಲ ಎಂದಿದ್ದು, ಎಲ್ಲರಿಗೂ ಶಾಂತವಾಗಿರುವಂತೆ ಮನವಿ ಮಾಡಿದ್ದಾರೆ.

"ಮೂವರೂ ಹಿರಿಯ ನಾಯಕರಾದ ರಮೇಶ್ ಜಾರಕಿಹೊಳಿ, ಡಿ.ಕೆ. ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಮಾತಿನ ಚಕಮಕಿಯಲ್ಲಿ ತೊಡಗಿದ್ದಾರೆ. ಇದರಿಂದ ಏನನ್ನೂ ಸಾಧಿಸುವುದಿಲ್ಲ. ಇವರೆಲ್ಲರೂ ಜನರಿಂದ ಗೌರವಿಸಲ್ಪಟ್ಟ ಜನಪ್ರಿಯ ನಾಯಕರು. ತಮ್ಮದೆ ಆದ ಅನುಯಾಯಿ ಬಳಗ ಹೊಂದಿದ್ದಾರೆ. ಸಾರ್ವಜನಿಕವಾಗಿ ಇಂತಹ ಆರೋಪಗಳು ಮತ್ತು ಪ್ರತ್ಯಾರೋಪಗಳು ಒಳ್ಳೆಯದನ್ನು ಮಾಡುವುದಕ್ಕಿಂತ ಹಾನಿಯನ್ನುಂಟುಮಾಡುತ್ತವೆ" ಎಂದಿದ್ದಾರೆ.

ಸಿಬಿಐಗೆ ಪ್ರಕರಣ ನೀಡುವ ಬಗ್ಗೆ ಚರ್ಚೆ ಎಂದ ಗೃಹ ಸಚಿವ

ಸಿಬಿಐಗೆ ಪ್ರಕರಣ ನೀಡುವ ಬಗ್ಗೆ ಚರ್ಚೆ ಎಂದ ಗೃಹ ಸಚಿವ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಲೈಂಗಿಕ ಸಿಡಿ ಹಗರಣದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲು ಆಡಳಿತಾರೂಢ ಬಿಜೆಪಿ ಸಿದ್ಧತೆ ನಡೆಸಿದೆ.

ಜಾರಕಿಹೊಳಿ ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಅವರು ನನ್ನನ್ನು ಭೇಟಿ ಮಾಡಿ ಸಾಕಷ್ಟು ಮಾಹಿತಿ ನೀಡಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕೇ ಅಥವಾ ಬೇಡವೇ ಎಂಬುದನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸಿಡಿ ಮೂಲಕ ಮಾನಹಾನಿ ಮಾಡುವುದು ತಪ್ಪು. ಇದರಲ್ಲಿ ಯಾರೂ ತಲೆ ಕೆಡಿಸಿಕೊಳ್ಳಬಾರದು. ಹಾಗೆ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ,'' ಎಂದು ಜ್ಞಾನೇಂದ್ರ ಹೇಳಿದರು.

ಜಾರಕಿಹೊಳಿ ವಿರುದ್ಧ ಡಿಕೆಶಿ ಮಾನನಷ್ಟ ಮೊಕದ್ದಮೆ

ಜಾರಕಿಹೊಳಿ ವಿರುದ್ಧ ಡಿಕೆಶಿ ಮಾನನಷ್ಟ ಮೊಕದ್ದಮೆ

ತಮ್ಮ ವಿರುದ್ಧ ಆರೋಪಗಳ ಸುರಿಮಳೆ ಮಾಡಿರುವ ರಮೇಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಸುಳಿವನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೀಡಿದ್ದಾರೆ.

ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಕಾರ್ಯದರ್ಶಿ ಸಂಕೇತ್ ಏಣಣಿ ತಮ್ಮ ಟ್ವೀಟ್ ಮಾಡಿದ್ದು, "ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ವಿರುದ್ಧ ನಿರಂತರ ಮಿಥ್ಯಾಪವಾದ, ನಿಂದನೆ, ದೋಷಾರೋಪಣೆ ಹಾಗೂ ಅವರ ಪ್ರಸಿದ್ಧಿ ಘಾಸಿಗೊಳಿಸಲು ಸುಳ್ಳು ಹಾಗೂ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶೀಘ್ರವೇ ಮಾನನಷ್ಟ ಮೊಕದ್ದಮೆ ಸಹಿತ ಇನ್ನಿತರ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು" ಎಂದು ಹೇಳಿದ್ದಾರೆ.

ಮಾರ್ಚ್ 2021 ರಲ್ಲಿ ಬಿಡುಗಡೆಯಾದ ಆಪಾದಿತ ಸೆಕ್ಸ್ ಸಿಡಿ ರಾಜ್ಯದಲ್ಲಿ ಭಾರೀ ವಿವಾದವನ್ನು ಸೃಷ್ಟಿಸಿತು. ಮುಜುಗರದ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಟ್ಟಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+