Ramoji Rao: ಈನಾಡು ಸಂಸ್ಥಾಪಕ ರಾಮೋಜಿ ರಾವ್ (87) ನಿಧನ: ನರೇಂದ್ರ ಮೋದಿ ಸಂತಾಪ
ಹೈದರಾಬಾದ್, ಜೂನ್ 07: ವಾಣಿಜ್ಯೋದ್ಯಮಿ ರಾಮೋಜಿ ಗ್ರೂಪ್ ಸಂಸ್ಥಾಪಕ ರಾಮೋಜಿ ರಾವ್ (87) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಶನಿವಾರ ನಸುಕಿನ ಜಾವ ನಿಧನರಾದರು.
ಪ್ರಸಿದ್ಧ ವಾಣಿಜ್ಯೋದ್ಯಮಿ ರಾಮೋಜಿ ಗ್ರೂಪ್ ಮತ್ತು ಈಟಿವಿ ಭಾರತ್ ಮಾಧ್ಯಮ ಸಂಸ್ಥೆ ಸಂಸ್ಥಾಪಕ ರಾಮೋಜಿ ರಾವ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಕಾರಣದಿಂದ ಅವರು ಇದೇ ಜೂನ್ 5ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾದೇ ಶನಿವಾರ ಬೆಳಗಿನ ಜಾವ 4:50ಕ್ಕೆ ಅವರು ನಿಧನರಾದರು.

ರಮೋಜಿ ರಾವ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ತೀವ್ರವಾಗಿ ಬಳಲುತ್ತಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ ಅವರು ಸಾಕಷ್ಟು ಆರೋಗ್ಯ ಸಂಬಂಧಿತ ಸಮಸ್ಯೆಗಳ ವಿರುದ್ಧ ಹೋರಾಡುತ್ತಲೇ ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗಲಿಲ್ಲ.
ಮೃತ ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್ ನಲ್ಲಿರುವ 'ರಾಮೋಜಿ ಫಿಲ್ಮ್ ಸಿಟಿ'ಯಲ್ಲಿರುವ ಅವರ ನಿವಾಸಕ್ಕೆ ಒಯ್ಯಲು.ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.
ಅವರ ಕುಟುಂಬ ಸದಸ್ಯರು, ಆಪ್ತರು, ಸ್ನೇಹಿತರು ಮತ್ತು ಹಿತೈಷಿಗಳು ಅಗಲಿದ ಆತ್ಮಕ್ಕೆ ಅಂತಿಮ ನಮನ ಸಲ್ಲಿಸಲಿದ್ದಾರೆ.
ಉದ್ಯಮ ರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ರಾಮೋಜಿ ರಾವ್ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನರೇಂದ್ರ ಮೋದಿ ಸಂತಾಪ

ರಾಮೋಜಿ ರಾವ್ ಅವರ ಅಗಲಿಕೆ ಅತ್ಯಂತ ದುಃಖ ತಂದಿದೆ ಎಂದು ಹಂಗಾಮಿ ಪ್ರಧಾನಿ ನರೇಂದ್ರ ಮೋದಿಯವರು ಇಂಗ್ಲಿಷ್ ಮತ್ತು ತೆಲುಗಿನಲ್ಲಿ ಸಂತಾಪ ಸೂಚಿಸಿದ್ದಾರೆ. ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗೆ ಹೊಸ ಮಾನದಂಡ ತಂದವರು ಎಂದು ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.
ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗೆಗೆ ಅಪಾರವಾದ ಉತ್ಸುಕರಾಗಿದ್ದರು. ಅವರೊಂದಿಗೆ ಸಂವಹನ ನಡೆಸಿದ್ದ ನಾನು ಅವರ ಬುದ್ಧಿವಂತಿಕೆಯ ಪ್ರಯೋಜನ ಪಡೆಯಲು ಹಲವು ಅವಕಾಶಗಳನ್ನು ಪಡೆದದ್ದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ದುಖಃ ಭರಿಸುವ ಶಕ್ತಿ ಕೊಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.












Click it and Unblock the Notifications