ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು

Posted By:
Subscribe to Oneindia Kannada

ಪಾಟ್ನಾ, ಜನವರಿ 13: ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಾರ್ಟಿ ಧುರೀಣ ರಾಮ್ ವಿಲಾಸ್ ಪಾಸ್ವಾನ್ ಅವರು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ಸಂಜೆ ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಅವರ ಚಿಕಿತ್ಸೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಮಧ್ಯಾಹ್ನ ಅವರು, ನವದೆಹಲಿಯಿಂದ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿನ ತಮ್ಮ ಹುಟ್ಟೂರಾದ ಶಹರ್ ಬಾನಿ ಗ್ರಾಮಕ್ಕೆ ಆಗಮಿಸಿದ್ದರು. ಅಲ್ಲಿ ಕೆಲ ಹೊತ್ತು ಇದ್ದು, ಆನಂತರ ಪಾಟ್ನಾದ ಶ್ರೀ ಕೃಷ್ಣ ಪುರಿಯಲ್ಲಿನ ತಮ್ಮ ನಿವಾಸಕ್ಕೆ ತೆರಳಿದ್ದರು. ಅಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

Ramvilas Paswan complains of breathlessness, admitted to hospital in Patna

ಆದರೆ, ಸಂಜೆ ವೇಳೆಗೆ ಕೊಂಚ ಎದೆನೋವು ಎಂದ ಪಾಸ್ವಾನ್ ಅವರನ್ನು ಕೂಡಲೇ ರಾಜಾಬಜಾರ್ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಪರಿಸ್ಥಿತಿಯನ್ವಯ ಅವರನ್ನು ಐಸಿಯುಗೆ ಸೇರಿಸಲಾಗಿದೆ.

ವೈದ್ಯರು ಇನ್ನೂ ತಪಾಸಣೆ, ಚಿಕಿತ್ಸೆಗಳನ್ನು ನೀಡಲಾಗುತ್ತಿದ್ದು, ಪಾಸ್ವಾನ್ ಅವರ ಅನಾರೋಗ್ಯ ಹಾಗೂ ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Ramvilas Paswan was on Thursday admitted to intensive care unit (ICU) of a private hospital here after he complained of breathlessness.
Please Wait while comments are loading...