ಅಸಾರಾಮ್ ಬಾಪು ದೋಷಿ: ಜೋಧಪುರ ನ್ಯಾಯಾಲಯದಿಂದ ಮಹತ್ವದ ತೀರ್ಪು

ಜೋಧಪುರ, ಏಪ್ರಿಲ್ 25: ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಜೋಧಪುರ ಎಸ್ ಸಿ ಎಸ್ ಟಿ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿದೆ.

ಅಸಾರಾಂ ಸಹಿತ ಎಲ್ಲಾ ಐವರು ಆರೋಪಿಗಳೂ ತಪ್ಪಿತಸ್ಥರು ಎಂದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.ನ್ಯಾಯಾಧೀಶ ಮಧುಸೂದನ್ ಶರ್ಮಾ ಎಂಬುವವರು ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಇನ್ನೂ ಘೋಷಿಸಿಲ್ಲ.

ಅಸಾರಾಮ್ ಬಾಪು ಅವರು ಜೋಧಪುರದ ಮನೈ ಎಂಬಲ್ಲಿರುವ ತಮ್ಮ ಆಶ್ರಮದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಅಪ್ರಾಪ್ತ ಬಾಲಕಿಯೊಬ್ಬರು ಆ.13, 2013 ರಲ್ಲಿ ದೂರು ನೀಡಿದ್ದರು. ಇದೇ ಸಮಯದಲ್ಲಿ ಗುಜರಾತಿನ ಸೂರತ್ ಮೂಲದ ಇಬ್ಬರು ಸಹೋದರಿಯರು ತಮ್ಮ ಮೇಲೂ ಅತ್ಯಾಚಾರವಾಗಿದೆ ಎಂದು ದೂರು ದಾಖಲಿಸಿದ್ದರು.

Rape case: Asaram and all other accused have been convicted by Jodhpur Court

ಈ ಸಂಬಂಧ ಕಳೆದ ಐದು ವರ್ಷಗಳಿಂದ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ನೀಡಿದೆ. ಪ್ರಕರಣದಲ್ಲಿ ಜಾಮೀನು ನೀಡುವಂತೆ ಅಸಾರಾಂ ಬಾಪು ಸಲ್ಲಿಸಿದ್ದ ಸಾಕಷ್ಟು ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ಅಂದಿನಿಂದ ಅಸಾರಾಮ್ ಜೋಧಪುರ ಜೈಲಿನಲ್ಲಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+