ಸೋನಿಯಾ ಆಪ್ತ ಕಾರ್ಯದರ್ಶಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ನವದೆಹಲಿ, ಜೂ.27: ಕಾಂಗ್ರೆಸ್‌ನ ಹಂಗಾಂಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ಪಿ. ಪಿ. ಮಾಧವನ್ ವಿರುದ್ಧ 26 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ದೆಹಲಿ ಪೊಲೀಸರು ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
ತನಗೆ ಉದ್ಯೋಗ ಕೊಡಿಸುವ ನೆಪದಲ್ಲಿ ಆಮಿಷವೊಡ್ಡಿದ್ದರು ಹಾಗೂ ಮದುವೆಯಾಗುವುದಾಗಿ ಭರವಸೆ ನೀಡಿದ್ದರು ಎಂದು ದೂರುದಾರ ಮಹಿಳೆ ಆರೋಪಿಸಿದ್ದಾರೆ. ಸಂತ್ರಸ್ತೆಯ ಮೇಲೆ ಅತ್ಯಾಚಾರವೆಸಗಲಾಗಿದೆ ಮತ್ತು ಆಕೆ ವಿಷಯವನ್ನು ತಿಳಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಜೂನ್ 25 ರಂದು ದೆಹಲಿಯ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ನಾವು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ದ್ವಾರಕಾ ಉಪ ಪೊಲೀಸ್ ಆಯುಕ್ತ ಎಂ. ಹರ್ಷವರ್ಧನ್ ಹೇಳಿದರು.

ಹಿರಿಯ ರಾಜಕೀಯ ಮುಖಂಡರೊಬ್ಬರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ 71 ವರ್ಷದ ವ್ಯಕ್ತಿಯ ವಿರುದ್ಧದ ಆರೋಪದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ಡಿಸಿಪಿ ಸೋನಿಯಾ ಅವರ ಹೆಸರನ್ನು ಹೇಳದಿದ್ದರೂ, ಮಾಧವನ್ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದೂರುದಾರ ಮಹಿಳೆ ದೆಹಲಿಯಲ್ಲಿ ವಾಸಿಸುತ್ತಿದ್ದು, ಅವರ ಪತಿ 2020ರಲ್ಲಿ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪತಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು, ಅವರು ಹೋರ್ಡಿಂಗ್‌ಗಳನ್ನು ಅಂಟಿಸುತ್ತಿದ್ದರು ಎಂದು ಅವರು ಹೇಳಿದರು.












Click it and Unblock the Notifications