ಗುಜರಾತ್ ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ
ಅಹಮದಾಬಾದ್, ಜುಲೈ 25: ಗುಜರಾತಿನ ಬಿಜೆಪಿ ಶಾಸಕರೊಬ್ಬರ ಮೇಲೆ ಅತ್ಯಾಚಾರ ಪ್ರಕರಣ ಕಂಡು ಬಂದಿದ್ದು, ತಲೆತಗ್ಗಿಸುವಂತಾಗಿದೆ. ಬಿಜೆಪಿ ಶಾಸಕ ಜಯಂತಿ ಭಾನುಶಾಲಿ ವಿರುದ್ಧ 21 ವರ್ಷ ವಯಸ್ಸಿನ ಮಹಿಳೆಯೊಬ್ಬರು ಅತ್ಯಾಚಾರದ ಆರೋಪ ಮಾಡಿದ್ದಾರೆ.
ಸೂರತ್ ಮೂಲದ ಮಹಿಳೆ ತನ್ನ ನೋವಿನ ಕಥೆಯನ್ನು ಸ್ಥಳೀಯ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ ಮೊದಲಾಗಿದೆ.

ವಿವಿಧೆಡೆಗಳಿಂದ ಒತ್ತಡ ಹೆಚ್ಚಾಗುತ್ತಿದ್ದಂತೆ, ಎಚ್ಚೆತ್ತುಕೊಂಡ ಬಿಜೆಪಿ ಈ ಕುರಿತಂತೆ ಹೇಳಿಕೆ ನೀಡಿ, ಭಾನುಶಾಲಿ ಅವರು ತಮ್ಮ ಶಾಸಕ ಸ್ಥಾನ ಹಾಗೂ ಗುಜರಾತ್ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದಿದೆ.
ಕಛ್ ಮೂಲದ ಪ್ರಭಾವಿ ಬಿಜೆಪಿ ನಾಯಕ ಭಾನುಶಾಲಿ ಅವರ ವಿರುದ್ಧ ದೂರು ಸ್ವೀಕರಿಸುತ್ತಿಲ್ಲ ಹಾಗೂ ಅವರನ್ನು ಬಂಧಿಸುತ್ತಿಲ್ಲ ಎಂದು ಖಾಸಗಿ ಮಾಧ್ಯಮಗಳ ಮುಂದೆ ಮಹಿಳೆ ದೂರಿದ್ದರು. ಇದಾದ ಬಳಿಕ, ಸೂರತ್ ಪೊಲೀಸರು, ಪ್ರಕರಣ ದಾಖಲಿಸಿಕೊಂಡು, ಎಫ್ಐಆರ್ ಹಾಕಿದ್ದಾರೆ. ಶಾಸಕ ಭಾನುಶಾಲಿ ಅವರಿಗೆ ಸಮನ್ಸ್ ಜಾರಿಗೊಳಿಸಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.












Click it and Unblock the Notifications