Gujarat Rape: ಗೆಳತಿಯ ಮೇಲೆ ಅತ್ಯಾಚಾರ: ಖಾಸಗಿ ಭಾಗಗಳಲ್ಲಿ ಮೆಣಸಿನ ಪುಡಿ ಹಾಕಿದ ಪಾಪಿ
ಸೂರತ್‌ನಲ್ಲಿ ವ್ಯಕ್ತಿಯೊಬ್ಬ ತಾನು ಸಂಬಂಧ ಹೊಂದಿದ್ದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ದೈಹಿಕವಾಗಿ ಹಲ್ಲೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಆಕೆಯ ಖಾಸಗಿ ಅಂಗಗಳಲ್ಲಿ ಮೆಣಸಿನಕಾಯಿಯನ್ನು ತುಂಬಿ ದುಷ್ಕೃತ್ಯ ಮೆರೆದಿದ್ದಾರೆ. ಆಕೆ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಕುಂಜ್ ಕುಮಾರ್ ಅಮೃತ್ ಭಾಯ್ ಪಟೇಲ್ ಎಂಬಾತ ಈ ಕೃತ್ಯ ಎಸಗಿದ ಆರೋಪಿ. ಈತ ವಿವಾಹಿತನಾಗಿದ್ದು ಪತ್ನಿ ಬೇರೆಡೆ ವಾಸವಾಗಿದ್ದಳು. ಆದರೆ ಈತ ತನ್ನ ಪತ್ನಿ ಬೇರೆ ಗ್ರಾಮದಲ್ಲಿ ವಾಸಿಸುತ್ತಿರುವ ವಿಷಯವನ್ನು ಮುಚ್ಚಿಟ್ಟಿದ್ದಾನೆ. ಜೊತೆಗೆ ಬೇರೆ ಮಹಿಳೆಯೊಂದಿಗಿನ ಸಂಬಂಧಕ್ಕೆ ಆಮಿಷವೊಡ್ಡಿದ್ದಾನೆ. ಜೊತೆಗೆ ಆಕೆಯೊಂದಿಗೆ ಸಂಬಂಧ ಬೆಳೆಸಿದ್ದಾನೆ. ಇಬ್ಬರ ನಡುವಿನ ಸಂಬಂಧ ಅವನ ಸತ್ಯದ ಬಗ್ಗೆ ತಿಳಿಯುವವರೆಗೂ ಸ್ವಲ್ಪ ಸಮಯದವರೆಗೆ ಮುಂದುವರೆದಿದೆ.

ಆತನ ವೈವಾಹಿಕ ಸ್ಥಿತಿಯ ಬಗ್ಗೆ ಗೆಳತಿಗೆ ತಿಳಿದಾಗ, ದಂಪತಿಗಳು ಜಗಳವಾಡಿದ್ದಾರೆ. ಮಹಿಳೆ ಪಟೇಲ್‌ನಿಂದ ದೂರವಿರಲು ನಿರ್ಧರಿಸಿದ್ದಾಳೆ.
ಆಕೆಯ ನಿರ್ಧಾರದಿಂದ ಕೋಪಗೊಂಡ ಪಟೇಲ್ ತನ್ನ ಗೆಳತಿಯನ್ನು ಕೇಬಲ್ ವೈರ್‌ನಿಂದ ಹೊಡೆದು ಅತ್ಯಾಚಾರವೆಸಗಿದ್ದಾನೆ. ಆಕೆಯ ಖಾಸಗಿ ಭಾಗಗಳಲ್ಲಿ ಮೆಣಸಿನಕಾಯಿ ಕೂಡ ತುಂಬಿದ್ದಾನೆ. ನಂತರ ಆಕೆಯ ಆತ್ಮೀಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ.

ಬದುಕುಳಿದ ಆಕೆಗೆ ಗಂಭೀರ ಗಾಯಗಳಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಬೇಕಾಯಿತು. ಇದಾದ ಬಳಿಕ ಓಲಪಾಡ್ ಪೊಲೀಸ್ ಠಾಣೆಗೆ ವಿಷಯ ತಿಳಿಸಲಾಗಿದೆ. ಆರೋಪಿಯನ್ನು ಮಂಗಳವಾರ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು, ಆತನ ವಿರುದ್ಧ ಐಪಿಸಿ 376 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆ ಬಳಿಕ ಈ ಎಲ್ಲಾ ಸತ್ಯಗಳು ಆರೋಪಿ ಒಪ್ಪಿಕೊಂಡಿದ್ದಾನೆ.
ಭೂಪಾಲ್‌ನಲ್ಲಿ 16 ವರ್ಷದ ಬಾಲಕದಿಂದ ಅತ್ಯಾಚಾರ
ಕಳೆದ ಫೆಬ್ರವರಿಯಲ್ಲಿ 16 ವರ್ಷದ ಬಾಲಕನೊಬ್ಬ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ, ಆಕೆಗೆ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿತ್ತು.
ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರಂದು ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 2 ವರ್ಷಗಳ ಹಿಂದೆ ಬಾಲಕ ಮೊಬೈಲ್ ಕಳ್ಳತನ ಮಾಡಿದ್ದಾಗಿ ಆರೋಪಿಸಲಾಗಿತ್ತು. ಇದರ ದ್ವೇಷಕ್ಕೆ ಆತ ಈ ಭೀಕರ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿತ್ತು.
ವರದಿಗಳ ಪ್ರಕಾರ ಬಾಲಕ ಮಹಿಳೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಹಾಗೂ ಬಟ್ಟೆಯನ್ನು ತುರುಕಿ, ಆಕೆ ವಾಸವಿದ್ದ ನಿರ್ಮಾಣ ಹಂತದ ಕಟ್ಟಡದೆಡೆಗೆ ಎಳೆದೊಯ್ದು, ಆಕೆಯ ತಲೆ ಹಾಗೂ ದೇಹದ ಇತರ ಭಾಗಗಳಿಗೆ ದೊಣ್ಣೆಯಿಂದ ಹೊಡೆದಿದ್ದಾನೆ. ಮಾತ್ರವಲ್ಲದೇ ಆಕೆಯ ಖಾಸಗಿ ಭಾಗಗಳಿಗೆ ಗಾಯಗೊಳಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications