ಗುಜರಾತ್ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ: ಸಚಿವ ಸಂಪುಟ 17 ಸಚಿವರ ರಾಜೀನಾಮೆ!
ಗುಜರಾತ್ ರಾಜಕೀಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದೆ. ಗುಜರಾತ್ ರಾಜ್ಯದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಹೊರತುಪಡಿಸಿ, ಇಡೀ ಗುಜರಾತ್ ಸಚಿವ ಸಂಪುಟದ ಸಚಿವರು ಗುರುವಾರ ರಾಜೀನಾಮೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ಯಾವುದೇ ರಾಜ್ಯದಲ್ಲೂ ನಡೆಯದ ರಾಜಕೀಯ ಬೆಳವಣಿಗೆ ಇದಾಗಿದೆ. ಗುಜರಾತ್‌ನ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 17 ಜನರಿದ್ದರು. ಅದರಲ್ಲಿ ಎಂಟು ಕ್ಯಾಬಿನೆಟ್ ದರ್ಜೆಯ ಸಚಿವರು ಮತ್ತು ಒಂಬತ್ತು ರಾಜ್ಯ ಸಚಿವರು ಸೇರಿದ್ದಾರೆ.
ಗುಜರಾತ್‌ನಲ್ಲಿ ಆಡಳಿತ ವಿರೋಧಿ ಅಲೆ ಇರುವುದರಿಂದ ಹಾಗೂ ರಾಜ್ಯದಲ್ಲಿ ಹಲವು ಪ್ರಮುಖ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಈ ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಯಾವುದಾದರೂ ಸರ್ಕಾರದ ಮುಖ್ಯಮಂತ್ರಿ ಅಥವಾ ಸಚಿವರಿಂದಾಗಿ ಆಯಾ ರಾಜ್ಯದ ಚುನಾವಣೆಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದರೆ, ಮುಖ್ಯಮಂತ್ರಿ ಮತ್ತು ಸಚಿವರನ್ನು ಬದಲಾವಣೆ ಮಾಡುವ ರೂಢಿ ಬಿಜೆಪಿಯಲ್ಲಿದೆ. ಇದೇ ವರ್ಷ ಹರಿಯಾಣದ ವಿಧಾನಸಭೆ ಚುನಾವಣೆ ಸಮಯದಲ್ಲೂ ಈ ಮಾದರಿಯ ಮಹತ್ವದ ಬದಲಾವಣೆಯನ್ನು ಬಿಜೆಪಿ ಮಾಡಿಕೊಂಡಿತ್ತು.

ಹರಿಯಾಣದ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿರುವಂತೆ ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಹಲವು ಮಹತ್ವದ ಬದಲಾವಣೆಗಳು ಆಗಿದ್ದವು. ಈ ಬದಲಾವಣೆಗಳಿಂದ ಚುನಾವಣೆಯಲ್ಲಿ ಗೆಲ್ಲುವುದಕ್ಕೂ ಬಿಜೆಪಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಗುಜರಾತ್ ಜಿಲ್ಲೆಯಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ.
ಅಕ್ಟೋಬರ್ 17 ರಂದು ಬೆಳಿಗ್ಗೆ 11:30 ಕ್ಕೆ ಕನಿಷ್ಠ 10 ಹೊಸ ಸಚಿವರು ಸರ್ಕಾರಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ವರದಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ಪುರಸಭೆಗಳು, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್‌ಗಳು ಸೇರಿದಂತೆ ರಾಜ್ಯದಲ್ಲಿ ನಿರ್ಣಾಯಕ ಚುನಾವಣೆಗಳು ನಡೆಯುವ ಮೊದಲು ಈ ಕ್ರಮ ಕೈಗೊಳ್ಳಲಾಗುತ್ತದೆ.
ಮೂಲಗಳನ್ನು ನಂಬುವುದಾದರೆ, ಅಕ್ಟೋಬರ್ 17 ರಂದು ಬೆಳಿಗ್ಗೆ 11:30 ಕ್ಕೆ ಕನಿಷ್ಠ 10 ಹೊಸ ಸಚಿವರು ಸರ್ಕಾರ ಸೇರುತ್ತಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ಪುರಸಭೆಗಳು, ಜಿಲ್ಲಾ ಪಂಚಾಯತ್‌ಗಳು ಮತ್ತು ತಾಲ್ಲೂಕು ಪಂಚಾಯತ್‌ಗಳು ಸೇರಿದಂತೆ ರಾಜ್ಯದಲ್ಲಿ ನಿರ್ಣಾಯಕ ಚುನಾವಣೆಗಳು ನಡೆಯುಲಿದ್ದು, ಇದಕ್ಕೂ ಮೊದಲೇ ಈ ಬದಲಾವಣೆ ಆಗಿದೆ ಎಂದು ಹೇಳಲಾಗಿದೆ. ಆಚಾರ್ಯ ದೇವವ್ರತ್ ಅವರು ಸಮಾರಂಭದ ಸಂದರ್ಭದಲ್ಲಿ ಸಂಪುಟ ವಿಸ್ತರಣೆಯಲ್ಲಿ ಸೇರಿಸಲಾದ ನಿಯೋಜಿತ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣವಚನ ಬೋಧಿಸಲಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications