Rashmika Mandanna Reaction: ಡೀಪ್‌ಫೇಕ್ ವಿಡಿಯೋ ವೈರಲ್, ಮೌನ ಮುರಿದ ರಶ್ಮಿಕಾ ಹೇಳಿದ್ದೇನು?
ಬೆಂಗಳೂರು, ನವೆಂಬರ್ 06: ನ್ಯಾಷನಲ್ ಕ್ರಶ್ ಎಂದೇ ಗುರುತಿಸಿಕೊಂಡಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ವೈರಲ್ ಆಗಿರುವ ಡೀಪ್ ಫೇಕ್ (Deepfake video) ವಿಡಿಯೋ ವಿರುದ್ಧ ಕೊನೆಗೂ ಮೌನ ಮುರಿದು ಪ್ರತಿಕ್ರಿಯಿಸಿದ್ದಾರೆ.
ಹೌದು, ನಟಿ ರಶ್ಮಿಕಾ ಮಂದಣ್ಣ ಅವರ ಮುಖಚಹರೆ ಹೋಲುವ ವಿಡಿಯೋವೊಂದನ್ನು ಎಐ ಆಧಾರಿತ ಎಡಿಟ್ ಮಾಡಿ ಹರಿಬಿಡಲಾಗಿತ್ತು. ಇದು ವೈರಲ್ ಆಗುತ್ತಿದ್ದಂತೆ ಹಿಂದಿ ನಟ ಅಮಿತಾಬ್ ಬಚ್ಚನ್, ಕೇಂದ್ರ ಸಚಿವರು ಪ್ರತಿಕ್ರಿಯಿಸಿದ್ದರು. ಆದರೆ ಈ ಬಗ್ಗೆ ರಶ್ಮಿಕಾ ಅವರೇ ಪ್ರತಿಕ್ರಿಯಿಸಿರಲಿಲ್ಲ. ಇದು ಅವರ ಲಕ್ಷಾಂತರ ಅಭಿಮಾನಿಗಳಲ್ಲಿ ಬೇಸರ ತರಿಸಿತ್ತು.

ನಂತರ ಕೆಲವೇ ಗಂಟೆಗಳಲ್ಲಿ ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ವೈರಲ್ ವಿಡಿಯೋ ಬಗ್ಗೆ ಪೋಸ್ಟ್ ಹಾಕಿರುವ ನಟಿ ರಶ್ಮಿಕಾ ಮಂದಣ್ಣ ಅವರು, ಈ ವಿಡಿಯೋದಿಂದ ತುಂಬಾ ನೋವಾಗಿದೆ ಎಂದು ಹೇಳಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ ಪೋಸ್ಟ್‌ನಲ್ಲಿ ಏನಿದೆ?
ರಶ್ಮಿಕಾ ಅವರ ಪೋಸ್ಟ್ ನೋಡುವುದಾದರೆ, ''ಈ ವಿಚಾರವನ್ನು ಹಂಚಿಕೊಳ್ಳಲು ನನಗೆ ತುಂಬಾ ನೋವಾಗುತ್ತಿದೆ. ಆನ್‌ಲೈನ್‌ನಲ್ಲಿ ಹರಡಿರುವ ನನ್ನ ಡೀಪ್‌ಫೇಕ್ ವೀಡಿಯೊದ ಬಗ್ಗೆ ಮಾತನಾಡಬೇಕಾಗಿದೆ'' ಎಂದು ಅವರು ಮೌನ ಮುರಿದಿದ್ದಾರೆ.
''ವಿಡಿಯೋ ಸೇರಿದಂತೆ ಈ ರೀತಿಯ ವಿಷಯಗಳು ಕೇವಲ ನನಗೆ ಮಾತ್ರವಲ್ಲದೆ, ತಂತ್ರಜ್ಞಾನವನ್ನು ಹೇಗೆ ದುರುಪಯೋಗವಾಗುತ್ತಿದ್ದು, ಇದನ್ನು ಸಮುದಾಯ ಮಟ್ಟದಲ್ಲಿ ಪರಿಹರಿಸಬೇಕಾಗಿದೆ. 'ಆನ್‌ಲೈನ್‌ನಲ್ಲಿ ಹರಡಿರುವ ಈ ಡೀಪ್‌ಫೇಕ್ ವೀಡಿಯೊ ಅತ್ಯಂತ ಭಯಾನಕವಾಗಿದೆ'' ಎಂದು ಅವರು ತಿಳಿಸಿದ್ದಾರೆ.
PM @narendramodi ji's Govt is committed to ensuring Safety and Trust of all DigitalNagriks using Internet
— Rajeev Chandrasekhar 🇮🇳 (@Rajeev_GoI) November 6, 2023
Under the IT rules notified in April, 2023 - it is a legal obligation for platforms to
➡️ensure no misinformation is posted by any user AND
➡️ensure that when reported by… https://t.co/IlLlKEOjtd
''ಇಂತಹ ಸಂದರ್ಭದಲ್ಲಿ ಮಹಿಳೆಯಾಗಿ ಮತ್ತು ನಟಿಯಾಗಿ ನನ್ನ ರಕ್ಷಣೆ ಮತ್ತು ಬೆಂಬಲ ನಿಂತಿರುವ ಕುಟುಂಬ, ನನ್ನ ಸ್ನೇಹಿತರು ಮತ್ತು ಹಿತೈಷಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ. ಇದೇ ಘಟನೆ ನಾನು ಶಾಲೆ ಅಥವಾ ಕಾಲೇಜಿನಲ್ಲಿದ್ದಾಗ ಜರುಗಿದ್ದರೆ ಇಂತಹ ಪ್ರಸಂಗವನ್ನು ನಾನು ಹೇಗೆ ನಿಭಾಯಿಸುತ್ತೇನೆ ಎಂಬುದನ್ನು ನಾನು ಊಹಿಸಲು ಸಾಧ್ಯವಿಲ್ಲ'' ಎಂದು ವೈರಲ್ ವಿಡಿಯೋದ ದುಷ್ಪರಿಣಾಮ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ತನಿಖಾ ಸಂಸ್ಥೆಗಳಿಗೆ ರಶ್ಮಿಕಾ ಪೋಸ್ಟ್ ಟ್ಯಾಗ್
''ತಂತ್ರಜ್ಞಾನ ಬೆಳಯುತ್ತಿರುವ ಇಂದಿನ ದಿನಮಾನಗಳಲ್ಲಿ ಬೇರೆಯವರು ಇಂತಹ ಕೃತ್ಯಗಳಿಂದ ಪ್ರಭಾವಿತರಾಗುವ ಮೊದಲು ನಾವು ಇದನ್ನು ಸಮುದಾಯ ಹಂತದಲ್ಲಿ ತುರ್ತಾಗಿ ಪರಿಹರಿಸಬೇಕಾಗಿದೆ'' ಎಂದು ಅವರು ತಿಳಿಸಿದ್ದಾರೆ.
ನಟಿ ರಶ್ಮಿಕಾ ತಮ್ಮ ಪೋಸ್ಟ್ ಅನ್ನು 'ಸೈಬರಾಬಾದ್ ಪೋಲೀಸ್ ಮತ್ತು ಮಹಾರಾಷ್ಟ್ರದ ಸೈಬರ್ ಭದ್ರತೆ ಮತ್ತು ಸೈಬರ್ ಕ್ರೈಮ್ ತನಿಖೆಯ ನೋಡಲ್ ಏಜೆನ್ಸಿಯಾದ ಮಹಾರಾಷ್ಟ್ರ ಸೈಬರ್‌ನ ಅಧಿಕೃತ ಎಕ್ಸ್ ಖಾತೆಗಳಿಗೆ ಟ್ಯಾಗ್ ಮಾಡಿದ್ದಾರೆ. ಈ ಮೂಲಕ ಸೂಕ್ತ ಕ್ರಮಕ್ಕೆ ಅವರು ಆಗ್ರಹಿಸಿದ್ದಾರೆ.

ರಶ್ಮಿಕಾಗೆ ಅಭಿಮಾನಿ ಅಭಯ
ನಟಿಯ ಪೋಸ್ಟ್‌ಗೆ ಬೆಂಬಲವಾಗಿ ಅನೇಕ ಅನುಯಾಯಿಗಳು, ಅಭಿಮಾನಿಗಳು ಕಾಮೆಂಟ್ ಬರೆದಿದ್ದಾರೆ. ನಿಮ್ಮೊಂದಿಗೆ ನಾವು ನಿಲ್ಲುತ್ತೇವೆ. ಈ ಕುರಿತು ಜಾಗೃತಿ ಮೂಡಿಸೋಣ, ಜೊತೆಗೆ ತಂತ್ರಜ್ಞಾನ ದುರುಪಯೋಗ ಆಗದಂತೆ ಒಟ್ಟಾಗಿ ಕೆಲಸ ಮಾಡೋಣ. ನೀವು ಒಬ್ಬಂಟಿಯಗಿಲ್ಲ ಎಂದು ರಶ್ಮಿಕಾಗೆ ಅಭಯ ನೀಡಿದ್ದಾರೆ.
ಜಾಲತಾಣಗಳಲ್ಲಿ ಈ ವಿಡಿಯೋ ಇನ್ನೂ ಇದೆ. ಇಂತಹ ಕೃತ್ಯಗಳು ಮತ್ತಷ್ಟು ಆಗುವ ಮುನ್ನವೇ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರನ್ನು ಕೆಲವರು ಒತ್ತಾಯಿಸಿದ್ದಾರೆ. ಮತ್ತೊಬ್ಬರು ತಂತ್ರಜ್ಞಾನದ ದುರುಪಯೋಗದ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್‌ನಲ್ಲಿ ಪರಸ್ಪರ ರಕ್ಷಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದು ಕೋರಿದ್ದಾರೆ.
🚨 There is an urgent need for a legal and regulatory framework to deal with deepfake in India.
— Abhishek (@AbhishekSay) November 5, 2023
You might have seen this viral video of actress Rashmika Mandanna on Instagram. But wait, this is a deepfake video of Zara Patel.
This thread contains the actual video. (1/3) pic.twitter.com/SidP1Xa4sT
ವಿಡಿಯೋ ಬಗ್ಗೆ ಅಮಿತಾಬ್ ಬಚ್ಚನ್ ಬೇಸರ
ರಶ್ಮಿಕಾ ಮುಖ ಹೋಲುವ ಡೀಪ್‌ಫೇಕ್ ವೀಡಿಯೊ ವೈರಲ್ ಆಗುತ್ತಿದ್ದಂತೆ ಹಿಂದಿ ನಟ ಅಮಿತಾಬ್ ಬಚ್ಚನ್ ಅವರು ತುರ್ತಾಗಿ ಪ್ರಕ್ರಿಯಿಸಿದ್ದಾರೆ. 'ಭಾರತದಲ್ಲಿ ಡೀಪ್‌ಫೇಕ್ ಎದುರಿಸಲು ಕಾನೂನು ಮತ್ತು ನಿಯಂತ್ರಕ ಚೌಕಟ್ಟಿನ ತುರ್ತು ಕ್ರಮ ಕೈಗೊಳ್ಳುವ ಅಗತ್ಯ ವಿದೆ ಎಂದು ಅವರು ತಿಳಿಸಿದ್ದಾರೆ. ಈ ಹಿಂದೆ ನಟಿ ರಶ್ಮಿಕಾ ಹಾಗೂ ಅಮಿತಾಬ್ ಬಚ್ಚನ್ ಅವರು 'ಗುಡ್‌ಬೈ' ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು.
ಇತ್ತ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸಹ ಡಿಜಿಟಲ್, ಇಂಟರ್‌ನೆಟ್ ಬಳಕೆದಾರರಿಗೆ ರಕ್ಷಣೆ ಒದಗಿಸುವಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಐಟಿ ನಿಯಮಗಳನ್ನು ಪಾಲಿಸದವರಿಗೆ ಈ ಮೂಲಕ ಎಚ್ಚರಿಕೆ ನೀಡಿ ಟ್ವೀಟ್ ಮಾಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications