Ratan Tata: ಭಾರತದ ಹೆಮ್ಮೆಯ ಉದ್ಯಮಿ ರತನ್ ಟಾಟಾ ನಿಧನ!
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ ಅಭಿಮಾನಿಗಳು ಒಪ್ಪಿರಲಿಲ್ಲ.
ರತನ್‌ಟಾಟಾ ಅವರನ್ನು ಸೋಮವಾರ ಮಹಾರಾಷ್ಟ್ರದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾರಂಭದಲ್ಲಿ ಅವರು ಸಾಮಾನ್ಯ ಆರೋಗ್ಯ ಪರೀಕ್ಷೆ ಒಳಪಟ್ಟಿದ್ದಾರೆ ಎಂದೇ ಹೇಳಲಾಗಿತ್ತು. ಅಲ್ಲದೇ ಅವರು ಸಹ ನಾನು ಆರೋಗ್ಯವಾಗಿಯೇ ಇದ್ದೇನೆ. ಚಿಂತಿಸಬೇಡಿ ಎಂದೇ ಹೇಳಿದ್ದರು. ಆದರೆ, ಅವರ ಆರೋಗ್ಯದ ಬಗ್ಗೆ ಅನುಮಾನಗಳು ಮೂಡಿದ್ದವು. ಅದರಂತೆ ಬುಧವಾರ ಸಂಜೆಯ ವೇಳೆಗೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎನ್ನುವ ವರದಿಗಳು ಬರಲು ಪ್ರಾರಂಭಿಸಿತ್ತು. ಬುಧವಾರ ತಡರಾತ್ರಿ ಅವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಅವರಿಗೆ 86 ವರ್ಷವಾಗಿತ್ತು. ಅವರು ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದರು.

ಹರ್ಷ್ ಗೋಯೆಂಕಾ ಟ್ವೀಟ್ ಮಾಡಿ ಸಂತಾಪ
ರತನ್‌ಟಾಟಾ ಅವರು ಇನ್ನಿಲ್ಲ ಎನ್ನುವ ಆಘಾತಕಾರಿ ವಿಷಯವನ್ನು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಆರ್‌ಪಿಜಿ ಎಂಟರ್‌ಪ್ರೈಸಸ್‌ನ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಹಂಚಿಕೊಂಡಿದ್ದಾರೆ. ರತನ್‌ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಎಕ್ಸ್‌ನಲ್ಲಿ ಭಾವನಾತ್ಮಕವಾಗಿ ಪೋಸ್ಟ್ ಹಂಚಿಕೊಂಡಿರುವ ಅವರು, ಗಡಿಯಾರ ತನ್ನ ಚಲನೆಯನ್ನು ನಿಲ್ಲಿಸಿದೆ. ದಿ ಟೈಟಾನ್ ಇನ್ನಿಲ್ಲ ಎಂದಿದ್ದಾರೆ. ರತನ್ ಟಾಟಾ ಅವರು ಭರವಸೆಯ ದಾರಿದೀಪವಾಗಿದ್ದರು. ವ್ಯಾಪಾರ ಹಾಗೂ ಅದರಾಚೆಗೂ ಅವರು ಅಳಿಸಲಾಗದ ಛಾಪು ಮೂಡಿಸಿದ್ದರು. ಅವರು ಸದಾ ನೆನಪಿನಲ್ಲಿ ಉಳಿಯಲಿದ್ದಾರೆ. ರತನ್ ಟಾಟಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.
The clock has stopped ticking. The Titan passes away. #RatanTata was a beacon of integrity, ethical leadership and philanthropy, who has imprinted an indelible mark on the world of business and beyond. He will forever soar high in our memories. R.I.P pic.twitter.com/foYsathgmt
— Harsh Goenka (@hvgoenka) October 9, 2024












Click it and Unblock the Notifications