ದೇಶದಲ್ಲಿ ಮಧ್ಯಮ ವರ್ಗದವರು ಸಾಲ ಮಾಡುವ ಪ್ರಮಾಣ ಹೆಚ್ಚಳ!
ದೇಶದಲ್ಲಿ ಕಳೆದ 10 ವರ್ಷಗಳಿಂದ ಮಧ್ಯಮ ವರ್ಗದವರು ಸಂಕಷ್ಟಪಡುವ ಪರಿಸ್ಥಿತಿ ಇದೆ. ಮುಂದಿನ ದಿನಗಳಲ್ಲೂ ಇದೇ ಮುಂದುವರಿಯಬಹುದು ಎನ್ನುವ ವಿಷಯ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕವು ಸೇರಿದಂತೆ ದೇಶದಲ್ಲಿ ಇದೀಗ ಬೆಲೆ ಏರಿಕೆಯ ಪರ್ವಕಾಲ ಅಂತಲೇ ಹೇಳಬಹುದು. ಅಷ್ಟು ಮಾತ್ರವಲ್ಲ ಬೆಲೆ ಏರಿಕೆಯ ಜೊತೆ ಜೊತೆಗೆ ಹಣದುಬ್ಬರವೂ ಹೆಚ್ಚಾಗುತ್ತಿದೆ ಎನ್ನುವ ವಿಷಯವು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಕಳೆದ 10 ವರ್ಷಗಳಿಂದಲೂ ದೇಶದಲ್ಲಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಬರುವ (ಆದಾಯ) ಹಣವು ಅಷ್ಟೇ ಇದೆ. ಆದರೆ, ಆದಾಯ ಇರುವಷ್ಟೇ ಇದ್ದರೂ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದ ಮಧ್ಯಮ ವರ್ಗದವರು ಇನ್ನಿಲ್ಲದಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾರ್ಸೆಲಸ್ ಕಂಪನಿಯ ಸ್ಥಾಪಕ ಹಾಗೂ ಹೂಡಿಕೆದಾರರಾದ ಸೌರಭ್ ಮುಖರ್ಜಿ ಅವರು ಹೇಳಿದ್ದಾರೆ. ಕಳೆದ 10 ವರ್ಷಗಳಿಂದ ನೈಜ ಆದಾಯದ ಬೆಳವಣಿಗೆ ಕಂಡಿಲ್ಲ. ಆದರೆ, ಹಣದುಬ್ಬರವು ಅಂದಾಜು 50 ಪ್ರತಿಶತ ಹೆಚ್ಚಾಗಿದ್ದು, ಖರೀದಿ ಮಾಡುವ ಶಕ್ತಿ ಇಲ್ಲದಂತಾಗಿದೆ ಎಂದಿದ್ದಾರೆ.

ಇತ್ತೀಚಿನ ರ್ಷದವಲ್ಲಿ ದೇಶದ ಹಣಕಾಸು ವ್ಯವಸ್ಥೆಯಲ್ಲಿ ಭಾರೀ ಏರಿಳಿತ ಕಂಡಿದೆ. ದೇಶದಲ್ಲಿ ಆರ್ಥಿಕ ಅಸಮಾನತೆ ಎನ್ನುವುದು ಇನ್ನಷ್ಟು ಹೆಚ್ಚಳವಾಗುತ್ತಿದೆ. ಕೃತಕ ಬುದ್ಧಿಮತ್ತೆ (AI) ಹಾಗೂ ಉದ್ಯೋಗದಲ್ಲಿ ಯಂತ್ರಗಳ ಬಳಕೆಯ ಕಾರಣದಿಂದಾಗಿ ಉದ್ಯೋಗ ಭದ್ರತೆಯ ಮೇಲೆ ಪರಿಣಾಮ ಬೀರುತ್ತಿದೆ. ಹಣಕಾಸಿನ ವಿಚಾರದಲ್ಲಿ ಭಾರತದಲ್ಲಿ ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇದೇ ಸಮಯದಲ್ಲಿ ಜನ ಸಾಲ ಮಾಡುವುದು ಹೆಚ್ಚಾಗುತ್ತಿದೆ ಎಂದು ಹೇಳಲಾಗಿದೆ.
ಜನರಿಗೆ ಪ್ರತಿ ತಿಂಗಳು ಬರುತ್ತಿರುವ ಆದಾಯದಲ್ಲಿ ಯಾವುದೇ ಹೆಚ್ಚಳ ಆಗಿಲ್ಲ. ಆದರೆ, ಆದಾಯ ಬರುವುದರ ಹೊರತಾಗಿಯೂ ಕಳೆದ ಐದು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ವಿಮಾನ ನಿಲ್ದಾಣ, ಶಾಪಿಂಗ್ ಮಾಲ್ ಹಾಗೂ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬೆಲೆ ಏರಿಕೆಯಾಗಿದೆ. ಈ ಕಾರಣಗಳಿಂದಾಗಿ ಜನ ಸಾಲ ಮಾಡುವುದು ಹೆಚ್ಚಾಗಿದೆ ಎಂದು ಮುಖರ್ಜಿ ಅವರು ವಿವರಿಸಿದ್ದಾರೆ.
ದೇಶದಲ್ಲಿ ಬಳಕೆ ಪ್ರಮಾಣವು ಭಾರೀ ಹೆಚ್ಚಳವಾಗಿದೆ. ಅನೇಕ ಭಾರತೀಯರು ಅವರ ಜೀವನ ಶೈಲಿಯನ್ನು ಮುಂದುವರಿಸಲು ಅಥವಾ ಹೊಸ ಜೀವನ ಶೈಲಿಗೆ ಹೊಂದಾಣಿಕೆ ಮಾಡಿಕೊಳ್ಳಲು ಹೆಚ್ಚು ಸಾಲವನ್ನು ಮಾಡುತ್ತಿದ್ದಾರೆ. ಕಂಪನಿಗಳು ನೇರವಾಗಿ ಈ ವಿಷಯವನ್ನು ಒಪ್ಪಿಕೊಳ್ಳದೆ ಇದ್ದರೂ ಎಐ ತಂತ್ರಜ್ಞಾನ ಅಳವಡಿಕೆಯಿಂದಾಗಿ ಉದ್ಯೋಗ ನಷ್ಟ ಎದುರಾಗಿದೆ ಎಂದು ಹೇಳಲಾಗಿದೆ.
ನಾನು ಮಾತನಾಡಿರುವ ಪ್ರತಿಯೊಬ್ಬ CEO ಸಹ ಎಷ್ಟು AI ಬಳಸಲು ಸಾಧ್ಯವಿದೆ ಎನ್ನುವ ಬಗ್ಗೆಯೇ ವಿಚಾರ ಮಾಡುತ್ತಾರೆ. ಎಐನಿಂದ ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಶ್ರೀಮಂತರ ಆದಾಯ ಹೆಚ್ಚಳವಾಗುತ್ತಿದೆ ಎನ್ನುವ ಅಭಿಪ್ರಾಯವೂ ಕೇಳಿ ಬಂದಿದೆ. ಭಾರತದಲ್ಲಿ ಈಗ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ. ಇದರಿಂದ ರಿಯಲ್ ಎಸ್ಟೇಟ್ ಮೇಲೂ ಪರಿಣಾಮ ಬೀರುತ್ತಿದೆ. ಈ ರೀತಿ ಇರುವಾಗಲೇ ಕಳೆದ 10 ವರ್ಷಗಳಿಂದ ಆರ್ಥಿಕ ಪರಿಸ್ಥಿತಿ ಯಾವ ರೀತಿ ಬದಲಾಗಿದೆ ಎನ್ನುವ ಬಗ್ಗೆ ಚರ್ಚೆ ನಡೆದಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications