ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆ ರಥಯಾತ್ರೆ : ಬಸವರಾಜ ಬೊಮ್ಮಾಯಿ
ನವದೆಹಲಿ, ಜನವರಿ 17: ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸೋಮವಾರ ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು, ಸಂಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.
ಇನ್ನೂ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ಎದುರಿಸುತ್ತಿದ್ದೇನೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರು ಅವರು ಪರಿಣಾಮ ಬಿರಿಲ್ಲ. ರಾಜ್ಯದಲ್ಲಿ ಬಿಜೆಪಿ ನಡೆಸಿದವ ಜನ ಸಂಕಲ್ಪ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ.ಹೇಗೆ ಮಾಡಬೇಕು ಎಂದು ನಿರ್ಧಾರ ಆಗಿಲ್ಲ. ಆದರೆ ನಾಲ್ಕು ದಿಕ್ಕಿನಿಂದ ರಥಯಾತ್ರೆ ಮಾಡಬೇಕು ಎಂದು ನಿರ್ಧರಿಸಿದೆ ಎಂದು ಹೇಳಿದರು.

ಕಾಂಗ್ರೆಸ್ ನವರು ಹತಾಶರಾಗಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ನಾನು ಮಹಿಳೆಯರಿಗೆ ವಿಶೇಷ ಯೋಜನೆ ಜಾರಿಗೆ ತರುತ್ತೇನೆ ಎಂದು ಘೋಷಣೆ ಮಾಡಿದ್ದೆ, ಅದೇ ರೀತಿ ಅವರು ಹತಾಶ ಭಾವನೆಯಿಂದ ಯೋಜನೆ ಘೋಷಣೆ ಮಾಡಿದ್ದಾರೆ. ರಾಜ್ಯದ ಜನರು ಅದನ್ನು ಒಪ್ಪುವುದಿಲ್ಲ ಎಂದು ಹೇಳಿದರು.
ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇವೆ . ಕಾರ್ಯಕಾರಿಣಿ ಮುಗಿದ ಬಳಿಕ ಈ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
ವಿಧಾನಸಭಾ ಚುನಾವಣೆಗೆ ಈಗಾಗಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಎಪಿ ಪಕ್ಷವೂ ಸಹ ಹಲವು ಭರವಸೆಗಳನ್ನ ಜನರ ಮುಂದೆ ಇಡುತ್ತಾ, ರಾಜ್ಯಾದ್ಯಂತ ಪ್ರಚಾರವನ್ನ ನಡೆಸುತ್ತಿದ್ದು, ಸ್ವತಃ ಬಲದ ಮೇಲೆ ಅಧಿಕಾರಕ್ಕೆ ಬರಬೇಕು ಎಂಬ ಕನಸು ಕಂಡಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ರಾಜ್ಯ ಪ್ರವಾಸವನ್ನ ಕೈಗೊಂಡಿದೆ.

ಆಡಳಿತ ಪಕ್ಷವಾದ ಬಿಜೆಪಿಯಲ್ಲಿ ಈಗಾಗಲೇ ಜನ ಸಂಕಲ್ಪಯಾತ್ರೆ ಮೂಲಕ ರಾಜ್ಯ ಪ್ರವಾಸವನ್ನ ಕೈಗೊಂಡಿದ್ದಾರೆ. ಇತ್ತ ಭಾಅರತ್ ಜೋಡೋ ಯಾತ್ರೆಯ ನಂತರ ಪ್ರಜಾಧ್ವನಿ ಬಸ್ ಯಾತ್ರೆಯ ಮೂಲಕ 200 ಯುನಿಟ್ ಉಚಿತ ವಿದ್ಯುತ್ ಹಾಗೂ ನಾ ನಾಯಕಿ ಸಮಾವೇಶದ ಮೂಲಕ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳಿಗೆ 2000 ರೂಪಾಯಿಯನ್ನು ನೀಡುವ ಭರವಸೆಯನ್ನು ಕಾಂಗ್ರೆಸ್ ಘೋಷಣೆ ಮಾಡಿದ್ದು, ಇತ್ತ ಪ್ರಾದೇಶಿಕ ಪಕ್ಷ ಜೆಡಿಎಸ್ ಪಂಚರತ್ನರಥಯಾಥ್ರೆಯ ಮೂಲಕ ರಾಜ್ಯಾದ್ಯಂತ ಪ್ರವಾಸವನ್ನ ಕೈಗೊಂಡಿದ್ದು, ಮೂರು ಪಕ್ಷಗಳುಪರಸ್ಪರ ಟೀಕೆ ಟಿಪ್ಪಣಿಗಳ ಮೂಲಕ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹಲವು ಯಾತ್ರೆಗಳ ಮೂಲಕ ಜನರ ಮನ ಸೆಳೆಯಲು ಮುಂದಾಗಿವೆ.












Click it and Unblock the Notifications