Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ
Ration: ದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಿಂದಲೇ ಅನ್ವಯ ಆಗುವಂತೆ ಮುಂದಿನ ಮೂರು ತಿಂಗಳ ಪಡಿತರವನ್ನು ಒಟ್ಟಿಗೇ ವಿತರಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಹಾಗಾದ್ರೆ, ಯಾವೆಲ್ಲಾ ರೇಷನ್ ಕಾರ್ಡ್‌ದಾರರು ಈ ಸೌಲಭ್ಯಕ್ಕೆ ಅರ್ಹರು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಪ್ರತಿ ತಿಂಗಳು ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗಳಿಗೆ ಅಲೆಯಬೇಕಿತ್ತು. ಆದರೆ, 2026ರ ಏಪ್ರಿಲ್ ತಿಂಗಳ ಪಡಿತರ ವಿತರಣೆಯ ವೇಳೆಯೇ ಮೇ ಮತ್ತು ಜೂನ್ ತಿಂಗಳ ಪಾಲನ್ನು ಸಹ ಫಲಾನುಭವಿಗಳಿಗೆ ನೀಡಲಾಗುವುದು. ಅಂದರೆ, ಏಪ್ರಿಲ್‌ನಲ್ಲಿ ನೀವು ಒಟ್ಟು ಮೂರು ತಿಂಗಳ ಆಹಾರ ಧಾನ್ಯಗಳನ್ನು ಒಟ್ಟಿಗೇ ಮನೆಗೆ ಕೊಂಡೊಯ್ಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?
* ಅಂತ್ಯೋದಯ ಅನ್ನ ಯೋಜನೆ (AAY): ಅತ್ಯಂತ ಬಡ ಕುಟುಂಬಗಳಿಗೆ ಈ ಸೌಲಭ್ಯ ಅನ್ವಯ.
* ಬಿಪಿಎಲ್/ಆದ್ಯತಾ ಪಡಿತರ ಚೀಟಿ (PHH): ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಅರ್ಹ ಕುಟುಂಬಗಳು ಇದರ ಲಾಭ ಪಡೆಯಬಹುದು.
* PMGKAY: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ಪಡೆಯುವವರಿಗೂ ಇದು ಅನ್ವಯಿಸಲಿದೆ.
ಸರ್ಕಾರದ ಈ ನಿರ್ಧಾರಕ್ಕೆ ಕಾರಣಗಳೇನು?
* ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸಾಲು ಸಾಲು ಹಬ್ಬಗಳು ಬರುವುದರಿಂದ ಬಡ ಕುಟುಂಬಗಳಿಗೆ ಧಾನ್ಯದ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
* ಏಪ್ರಿಲ್ ನಂತರ ಬಿಸಿಲಿನ ಪ್ರಮಾಣ ಹೆಚ್ಚಾಗುವುದರಿಂದ ಜನರು ಪದೇ ಪದೇ ರೇಷನ್ ಅಂಗಡಿಗಳ ಮುಂದೆ ಸಾಲು ನಿಲ್ಲುವುದನ್ನು ತಪ್ಪಿಸಲು ಈ ಕ್ರಮ.
* ಮಾರುಕಟ್ಟೆಯಲ್ಲಿ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಬಡವರು ಮುಂಚಿತವಾಗಿಯೇ ಧಾನ್ಯ ಸಂಗ್ರಹಿಸಿಟ್ಟುಕೊಳ್ಳಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದೆ.
ಫಲಾನುಭವಿಗಳು ಪಡಿತರ ಪಡೆಯಲು ಎಂದಿನಂತೆ ತಮ್ಮ ಆಧಾರ್ ಕಾರ್ಡ್ ಮತ್ತು ಬಯೋಮೆಟ್ರಿಕ್ (ಹೆಬ್ಬೆಟ್ಟಿನ ಗುರುತು) ನೀಡುವುದು ಕಡ್ಡಾಯವಾಗಿದೆ. ನಿಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೌಲಭ್ಯ ಲಭ್ಯವಿರಲಿದ್ದು, ಏಪ್ರಿಲ್ ಮೊದಲ ವಾರದಿಂದಲೇ ವಿತರಣೆ ಆರಂಭವಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪಡಿತರ ಚೀಟಿ ತಿದ್ದುಪಡಿ ಬಗ್ಗೆ ಮಾಹಿತಿ: ಪಡಿತರ ಚೀಟಿ ತಿದ್ದುಪಡಿ ಮಾಡಿಸುವವರು ತಿಳಿದುಕೊಳ್ಳಬೇಕಾದ ಪ್ರಮುಖ ವಿಚಾರಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಏನೆಲ್ಲ ತಿದ್ದುಪಡಿ ಮಾಡಿಸಬಹುದು?
* ಹೊಸ ಸದಸ್ಯರ ಹೆಸರು ಸೇರ್ಪಡೆ
* ವಿಳಾಸ ಬದಲಾವಣೆ ಹಾಗೂ ಮೊಬೈಲ್ ಸಂಖ್ಯೆ ಜೋಡಣೆ
* ಹೆಸರು ತೆಗೆದುಹಾಕುವುದು
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ಫೋಟೋ ಬದಲಾವಣೆ
* ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣಪತ್ರ 6 ವರ್ಷ ಮೆಲ್ಪಟ್ಟವರಿಗೆ
* ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳಿಗೆ)
ಪತ್ನಿ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ
ಮಗುವಿನ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು
* ಮಗುವಿನ ಜನನ ಪ್ರಮಾಣಪತ್ರ
* ಪೋಷಕರ ಆಧಾರ್ ಕಾರ್ಡ್
ತಿದ್ದುಪಡಿಗೆ ಎಲ್ಲೆಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು?
ರೇಷನ್ ಕಾರ್ಡ್ ತಿದ್ದುಪಡಿಯನ್ನು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಸೇರಿದಂತೆ ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು.
ಪಡಿತರ ಚೀಟಿ ತಿದ್ದುಪಡಿ ವಿಧಾನಗಳು
* ಅಧಿಕೃತ ವೆಬ್‌ಸೈಟ್ https://ahara.kar.nic.in/home ಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ ಅಥವಾ ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
* ಬಳಿಕ ಅಲ್ಲಿ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.
* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್ ಮಾಡಿ.
* ಅರ್ಜಿ ಸಲ್ಲಿಕೆ ವೇಳೆ ನೀವು ನೀಡಿರುವಂತಹ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ಮಾತ್ರ ನಿಮಗೆ ಅಪ್ಡೇಟ್ ಆಗಿರುವ ಹೊಸ ರೇಷನ್ ಕಾರ್ಡ್ ನಿಮ್ಮ ಮನೆಗೆ ಬರಲಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications