ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಮೇಲೆ ಪೊಲೀಸ್ ಅಧಿಕಾರಿ ಹಲ್ಲೆ
ಜಾಮ್ನಗರ್, ಮೇ 22: ಭಾರತ ಕ್ರಿಕೆಟ್ ತಂಡದ ಆಟಗಾರ ರವೀಂದ್ರ ಜಡೇಜಾ ಅವರ ಪತ್ನಿ ರೀವಾ ಸೋಲಂಕಿ ಅವರ ಮೇಲೆ ಸೋಮವಾರ ಗುಜರಾತ್‌ನ ಜಾಮ್ನಗರದ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದಾರೆ.
ಜಡೇಜಾ ಪತ್ನಿ ಮತ್ತು ಪೊಲೀಸ್ ಅಧಿಕಾರಿ ಇದ್ದ ವಾಹನಗಳು ಪರಸ್ಪರ ಡಿಕ್ಕಿಯಾಗಿವೆ. ಈ ಸಂದರ್ಭದಲ್ಲಿ ಅವರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ.
ಅಪಘಾತ ಸಂಭವಿಸಿದ ಬಳಿಕ ಇಬ್ಬರೂ ಮಾತಿಗೆ ಮಾತು ಬೆಳೆಸಿದ್ದಾರೆ. ಆಗ ಪೊಲೀಸ್ ಅಧಿಕಾರಿ ರೀವಾ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಯ ವಿರುದ್ಧ ಇಲಾಖೆಯು ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶೆಜುಲ್ ತಿಳಿಸಿದ್ದಾರೆ.

ಜಾಮ್ನಗರ್‌ನ ಸರು ಸೆಕ್ಷನ್ ರಸ್ತೆಯಲ್ಲಿ ರೀವಾ ಅವರಿದ್ದ ಕಾರು ಅಹಿರ್ ಚಲಾಯಿಸುತ್ತಿದ್ದ ಬೈಕ್‌ಗೆ ತಗುಲಿತ್ತು ಎನ್ನಲಾಗಿದೆ.
ಪೊಲೀಸ್ ಅಧಿಕಾರಿ ಸಂಜಯ್ ಅಹಿರ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.












Click it and Unblock the Notifications