ಭಾರತದಲ್ಲಿ 100 ವರ್ಷಗಳಲ್ಲೇ ಅತಿ ಕೆಟ್ಟ ಆರ್ಥಿಕ ಪರಿಸ್ಥಿತಿ: ಆರ್‌ಬಿಐ ಗವರ್ನರ್
ನವದೆಹಲಿ, ಜುಲೈ 11:ಭಾರತದಲ್ಲಿ ನೂರು ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕೊವಿಡ್ 19 ನಿಂದಾಗಿ ಅತಿ ಕೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
Recommended Video
ಭಾರತೀಯ ರಿಸರ್ವ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಭಾರತೀಯ ಸ್ಟೇಟ್ ಬ್ಯಾಂಕ್‌ನ ಮುಖ್ಯಸ್ಥ ರಜನೀಶ್ ಕುಮಾರ್ ಅವರ ಜೊತೆ ವಿಡಿಯೋ ಸಂವಾದ ನಡೆಸಿದರು.
ಕೊರೊನಾ ಲಾಕ್‌ಡೌನ್‌ನಿಂದಾಗಿ ಭಾರತ ಸರ್ಕಾರವು ತೆಗೆದುಕೊಂಡ ಕೆಲವು ನಿರ್ಧಾರಗಳಿಂದ ಆರ್ಥಿಕತೆಗೆ ಭಾರಿ ಹಿನ್ನಡೆ ಉಂಟಾಗಿರುವುದರಿಂದ ಆರ್ಥಿಕತೆಯನ್ನು ಮತ್ತೆ ಬಲ ಪಡಿಸಲು ಏನು ಮಡಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಯಿತು.

ಕಳೆದ ನೂರು ವರ್ಷಗಳಲ್ಲೇ ಭಾರತದಲ್ಲಿ ಅತಿ ಕೆಟ್ಟ ಆರ್ಥಿಕ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಆರೋಗ್ಯ ಸಮಸ್ಯೆಯೂ ಕೂಡ. ಹಣಕಾಸು ವ್ಯವಸ್ಥೆಯನ್ನು ಸುಧಾರಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾಕಷ್ಟು ಯೋಜನೆಗಳಿಂದ ಸಹಾಯವಾಗಿದೆ.
ಫೆಬ್ರವರಿಯಿಂದ ಆರ್‌ಬಿಐ 250 ಬೇಸಿಸ್ ಪಾಯಿಂಟ್‌ಗಳನ್ನು ಕಡಿತಗೊಳಿಸಿದೆ. ಆರ್‌ಬಿಐ 9.57 ಲಕ್ಷ ಕೋಟಿ ದ್ರವ್ಯತೆ ಕ್ರಮಗಳನ್ನು ಪ್ರಕಟಿಸಿದೆ.
ಆರ್‌ಬಿಐಗೆ ಆರ್ಥಿಕತೆಯನ್ನು ಬಲಪಡಿಸುವುದೇ ಮೊದಲ ಆದ್ಯತೆಯಾಗಿದೆ. ಹಾಗೆಯೇ ಹಣಕಾಸಿನ ಸ್ಥಿರತೆಯನ್ನುಕೂಡ ಕಾಯ್ದುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.
ವಿಡಿಯೋ ಸಂವಾದದ ಪ್ರಮುಖಾಂಶಗಳು
-ಆರ್ಥಿಕ ಬೆಳವಣಿಗೆಗೆ ಮೊದಲ ಆದ್ಯತೆ
-ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳು ಕೊರೊನಾ ಲಾಕ್‌ಡೌನ್‌ನಿಂದಾಗಿ ಆರ್ಥಿಕ ದುಸ್ಥಿತಿಯನ್ನು ಅನುಭವಿಸುತ್ತಿವೆ
-ಭಾರತದ ಹಣಕಾಸು ವ್ಯವಸ್ಥೆಯನ್ನು ಬಲಪಡಿಸಲು ಆರ್‌ಬಿಐ ಸಾಕಷ್ಟು ಐತಿಹಾಸಿಕ ಯೋಜನೆಗಳನ್ನು ಕೈಗೊಂಡಿದೆ
-2019ರ ಫ್ರಬ್ರವರಿಯಿಂದ ಆರ್‌ಬಿಐ ರೆಪೋ ದರವನ್ನು 250 ಬೇಸಿಸ್ ಅಂಕವನ್ನು ಕಡಿತಗೊಳಿಸಿದೆ-ಮಾರುಕಟ್ಟೆ ವಿಶ್ವಾಸ ಬಲವರ್ಧನೆಗೆ ಮತ್ತು ಹಣದ ಹರಿಯುವಿಕೆ ಸುಗಮವಾಗಲು ಸಾಂಪ್ರದಾಯಿಕ ಮತ್ತು ಅಸಂಪ್ರದಾಯಿಕ ಕ್ರಮಗಳು.
-ಫೆಬ್ರವರಿಯಿಂದ 9.57 ಲಕ್ಷ ಕೋಟಿ ರೂಪಾಯಿ ಮೊತ್ರದ ಕ್ರಮಗಳು ಆರ್ ಬಿಐನಿಂದ ಪ್ರಕಟ, ಅದು ದೇಶದ ಜಿಡಿಪಿಯ ಶೇಕಡಾ 4.5ಕ್ಕೆ ಸಮ.
-ಎನ್ ಬಿಎಫ್ ಸಿ ಮತ್ತು ಮ್ಯೂಚುವಲ್ ಫಂಡ್ ಗಳ ಮೇಲಿನ ವಿಮೋಚನಾ ಒತ್ತಡಗಳನ್ನು ನಿಗಾವಹಿಸುವುದು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications