ದೇಶದಲ್ಲಿ ಒಂದೇ ದಿನ 20.61 ಲಕ್ಷ ಮಂದಿಗೆ ಕೊರೊನಾ ಪರೀಕ್ಷೆ

ನವದೆಹಲಿ, ಮೇ 21: ದೇಶದಲ್ಲಿ ಒಂದೇ ದಿನ 20.61 ಲಕ್ಷ ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಗುರುವಾರ ಒಂದೇ ದಿನ 20,61,683 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ.12.59ಕ್ಕೆ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಇನ್ನು ಸತತ ಎಂಟನೇ ದಿನವೂ ದೈನಂದಿನ ಹೊಸ ಪ್ರಕರಣಗಳನ್ನು ಚೇತರಿಕೆ ಪ್ರಮಾಣ ಮೀರಿಸುತ್ತಲೇ ಇದ್ದು, ಇಂದು 3,57,295 ರೋಗಿಗಳು ಆಸ್ಪತ್ರೆಗಳಿಂದ ಡಿಸ್ಜಾರ್ಜ್ ಆಗಿದ್ದು ಚೇತರಿಕೆ ಸಂಖ್ಯೆ 2,27,12,735ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ದೇಶದಲ್ಲಿ ನೀಡಲಾಗುತ್ತಿರುವ ಲಸಿಕೆ ಪ್ರಮಾಣ 19 ಕೋಟಿ ಮೀರಿದೆ. ತಾತ್ಕಾಲಿಕ ವರದಿಯ ಪ್ರಕಾರ ಶುಕ್ರವಾರ ಬೆಳಿಗ್ಗೆ 7 ಗಂಟೆಯವರೆಗೆ ಒಟ್ಟು 19,18,79,503 ಡೋಸ್ ನೀಡಲಾಗಿದೆ.

 ಎಷ್ಟು ಮಂದಿಗೆ ಕೊರೊನಾ ಪರೀಕ್ಷೆ

ಎಷ್ಟು ಮಂದಿಗೆ ಕೊರೊನಾ ಪರೀಕ್ಷೆ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಪ್ರಕಾರ, ಮೇ 20ರವರೆಗೆ 32,44,17,870 ಕೊರೊನಾ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇನ್ನು ನಿನ್ನೆ ಒಂದೇ ದಿನ 20,61,683 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದಲ್ಲದೆ, ಭಾರತದಲ್ಲಿ ಸತತ ಐದು ದಿನವೂ 3 ಲಕ್ಷಕ್ಕಿಂತ ಕಡಿಮೆ ಹೊಸ ಪ್ರಕರಣಗಳನ್ನು ದಾಖಲಾಗಿದೆ.

 ತಮಿಳುನಾಡಿನಲ್ಲಿ ಹೊಸ ಪ್ರಕರಣಗಳು ಪತ್ತೆ

ತಮಿಳುನಾಡಿನಲ್ಲಿ ಹೊಸ ಪ್ರಕರಣಗಳು ಪತ್ತೆ

ತಮಿಳುನಾಡಿನಲ್ಲಿ ದೈನಂದಿನ ಅತಿ ಹೆಚ್ಚು ಹೊಸ ಪ್ರಕರಣಗಳು 35,579 ಪತ್ತೆಯಾಗಿದ್ದರೆ, ಕೇರಳದಲ್ಲಿ 30,491 ಪ್ರಕರಣಗಳು ದಾಖಲಾಗಿವೆ. ಮತ್ತೊಂದೆಡೆ, ಭಾರತದ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 30,27,925ಕ್ಕೆ ಇಳಿದಿದೆ. ಕಳೆದ ಒಂದು ದಿನದಲ್ಲಿ ಒಟ್ಟು ಸಕ್ರಿಯ ಪ್ರಕರಣದಲ್ಲಿ 1,01,953 ಪ್ರಕರಣಗಳು ಕಡಿಮೆಯಾಗಿವೆ.

 8 ರಾಜ್ಯಗಳಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು?

8 ರಾಜ್ಯಗಳಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು?

ಕರ್ನಾಟಕ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ಸೇರಿ ಎಂಟು ರಾಜ್ಯಗಳಲ್ಲಿ ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ. 69.47 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

 ಕೊರೊನಾ ಪರೀಕ್ಷೆ

ಕೊರೊನಾ ಪರೀಕ್ಷೆ

ತಮಿಳುನಾಡು, ಕೇರಳ, ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಅಸ್ಸಾಂ ಟಾಪ್ 10 ರಾಜ್ಯಗಳು ಸೇರಿದಂತೆ 76 ರಾಜ್ಯಗಳಲ್ಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದ್ದು 2,59,551 ಹೊಸ ಪ್ರಕರಣಗಳಲ್ಲಿ ದಾಖಲಾಗಿವೆ ಸಚಿವಾಲಯ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+