Delhi Blast: ದೆಹಲಿ ಸ್ಫೋಟ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಏನ್ ಹೇಳಿದ್ರು ಗೊತ್ತಾ?
Delhi Blast Case: ದೆಹಲಿಯ ಕೆಂಪು ಕೋಟೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳತ್ತಲಿವೆ. ಇದೀಗ ಈ ಬಗ್ಗೆ ಕೆಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೆಂಪು ಕೋಟೆಯಲ್ಲಿ ಮೆಟ್ರೋ ನಿಲ್ದಾಣದ ಬಳಿ ಸ್ಫೋಟ ಭಾರೀ ಸ್ಫೋಟ ಸಂಭವಿಸಿದ್ದು, ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಬಗ್ಗೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, "ಇದು ತುಂಬಾ ದುರದೃಷ್ಟಕರ ಘಟನೆ. ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಮತ್ತು ಇದರ ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಈ ದೇಶದಲ್ಲಿ ಭಯೋತ್ಪಾದನೆಯ ಬೆಂಬಲಿಗರಿಗೆ ಸ್ಥಳವಿಲ್ಲ. ಪ್ರಾಣ ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ," ಎಂದು ಹೇಳಿದ್ದಾರೆ.

ದೆಹಲಿಯ ಕೆಂಪು ಕೋಟೆಯಲ್ಲಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ದೇಶದ ಪ್ರಮುಖ ನಗರಗಳಲ್ಲಿ ಹೈಅಲರ್ಟ್ ಆಗಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನೂ ಕೆಂಪುಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿ ಸಾವು-ನೋವುಗಳು ಹಾಗೂ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿದ್ದು, ಈ ಸ್ಥಳದಲ್ಲಿ ಗುಂಡು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಕೆಂಪು ಕೋಟೆ ಸಂಚಾರ ಸಿಗ್ನಲ್ ಬಳಿ ನಿಧಾನವಾಗಿ ಚಲಿಸುತ್ತಿದ್ದ ವಾಹನದಲ್ಲಿ ಸ್ಫೋಟ ಸಂಭವಿಸಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ಹೇಳಿದ್ದಾರೆ. ಅಲ್ಲದೆ, ವಾಹನದೊಳಗೆ ಪ್ರಯಾಣಿಕರಿದ್ದರು ಅಂತಲೂ ಅವರು ಹೇಳಿದ್ಧಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್ಎಸ್ಜಿ) ತನಿಖಾ ಅಧಿಕಾರಿಗಳು ಸ್ಫೋಟದ ಸ್ಥಳಕ್ಕೆ ಧಾವಿಸಿದ್ದಾರೆ. ಕೆಂಪು ಕೋಟೆಯು ಪ್ರತಿದಿನ ಸಾವಿರಾರು ಪ್ರವಾಸಿಗರನ್ನು ಭೇಟಿ ನೀಡುವ ಹಳೆಯ ದೆಹಲಿ ಪ್ರದೇಶದ ಜನದಟ್ಟಣೆಯ ಭಾಗದಲ್ಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಮಿತ್ ಶಾ ಅವರು ದೆಹಲಿ ಪೊಲೀಸ್ ಆಯುಕ್ತ ಮತ್ತು ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ದೇಕಾ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಈ ಸ್ಫೋಟ ಸಂಭವಿಸುತ್ತಿದ್ದಂತೆ ದೆಹಲಿ-ಎನ್ಸಿಆರ್ ಪ್ರದೇಶ, ಉತ್ತರ ಪ್ರದೇಶ, ಮುಂಬೈ, ಜೈಪುರ ಮತ್ತು ಉತ್ತರಾಖಂಡದಲ್ಲಿ ಅಧಿಕಾರಿಗಳು ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. ಇನ್ನೂ ಈ ಘಟನಾ ದೃಶ್ಯಗಳಲ್ಲಿ ನೆಲದ ಮೇಲೆ ಶವಗಳು, ಕತ್ತರಿಸಿದ ದೇಹದ ಭಾಗಗಳು ಮತ್ತು ಜಖಂಗೊಂಡ ಕಾರುಗಳು ಕಂಡುಬಂದಿವೆ.
"ನಾವು ತಕ್ಷಣ ಏಳು ತುಕಡಿಗಳನ್ನು ಸ್ಥಳಕ್ಕೆ ಕಳುಹಿಸಿದೆವು. ಸೋಮವಾರ ಸಂಜೆ 7:29ಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು" ಎಂದು ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಎ.ಕೆ.ಮಲಿಕ್ ಹೇಳಿದರು. ಸ್ಫೋಟದ ನಂತರ, ವರ್ಷಪೂರ್ತಿ ಭಾರಿ ಪ್ರವಾಸಿ ದಟ್ಟಣೆಯನ್ನು ಹೊಂದಿರುವ ಪ್ರದೇಶವನ್ನು ಅಭೂತಪೂರ್ವ ಸಂಖ್ಯೆಯ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಆವರಿಸಿದ್ದರು.
ವಿಡಿಯೋ ರಿಲೀಸ್: ದೆಹಲಿಯಲ್ಲಿ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನೊಳಗೆ ಶಂಕಿತನಿದ್ದ ವಿಡಿಯೋ ರಿಲೀಸ್ ಆಗಿದೆ. ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ ಭಾರೀ ಸ್ಫೋಟ ಸಂಬಂಧಿಸಿದಂತೆ ಹೊಸ ಸಿಸಿಟಿವಿ ಫೋಟೋಗಳು ಮತ್ತು ವೀಡಿಯೊವೊಂದು ಹೊರಬಂದಿವೆ.
ಈ ಘಟನೆ ನವೆಂಬರ್ 10 ರಂದು ಸಂಜೆ 6.22 ಕ್ಕೆ ನಡೆದಿದ್ದು, ಹುಂಡೈ ಐ20 ಕಾರನ್ನು ಚಾಲನೆ ಮಾಡುತ್ತಿರುವ ವ್ಯಕ್ತಿಯನ್ನು ತೋರಿಸುತ್ತದೆ. ಅದೇ ವಾಹನವು ನಂತರ ಕೆಂಪು ಕೋಟೆ ಬಳಿಯ ಸುಭಾಷ್ ಮಾರ್ಗ್ ಟ್ರಾಫಿಕ್ ಸಿಗ್ನಲ್ನಲ್ಲಿ ಸ್ಫೋಟಗೊಂಡಿತ್ತು. ಮೂಲಗಳ ಪ್ರಕಾರ, ಘಟನೆ ನಡೆಯುವ ಮೊದಲು ಆ ವ್ಯಕ್ತಿ ಸಂಬಂಧಿಕರನ್ನು ಬಿಡಲು ಹಳೆ ದೆಹಲಿ ರೈಲು ನಿಲ್ದಾಣಕ್ಕೆ ಹೋಗಿದ್ದನು. ಸಿಸಿಟಿವಿ ದೃಶ್ಯಾವಳಿಗಳಲ್ಲಿಚಾಲಕನ ಮುಖವನ್ನು ಸ್ಪಷ್ಟವಾಗಿ ಸೆರೆಹಿಡಿಯಲಾಗಿದೆ. ಹೀಗೆ ಈ ಸ್ಫೋಟ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಲಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications