ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು 2.50 ಲಕ್ಷಕ್ಕೆ ಇಳಿಕೆ

|
Google Oneindia Kannada News

ನವದೆಹಲಿ, ಜನವರಿ 2: ದೇಶದಲ್ಲಿ 24 ಗಂಟೆಗಳಲ್ಲಿ 19,078 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿವೆ. ಇಂದು ಕೂಡ ಒಟ್ಟು ಸೋಂಕಿತರಿಗಿಂತ ಚೇತರಿಕೆ ಪ್ರಮಾಣ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆಯಾಗಿದೆ.

ಶುಕ್ರವಾರ 224 ಕೋವಿಡ್ ಸೋಂಕಿತರು ಸಾವಿಗೀಡಾಗಿದ್ದಾರೆ. 22,926 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

ರಾಜ್ಯದಲ್ಲಿ ಐದು ಜಿಲ್ಲೆಗಳಲ್ಲಿ ಲಸಿಕೆ ಡ್ರೈ ರನ್ ಇಂದು: ಎಲ್ಲೆಲ್ಲಿ, ಹೇಗೆ?ರಾಜ್ಯದಲ್ಲಿ ಐದು ಜಿಲ್ಲೆಗಳಲ್ಲಿ ಲಸಿಕೆ ಡ್ರೈ ರನ್ ಇಂದು: ಎಲ್ಲೆಲ್ಲಿ, ಹೇಗೆ?

ದೇಶದಲ್ಲಿ ಪ್ರಸ್ತುತ 1,03,05,788 ಒಟ್ಟು ಕೊರೊನಾ ವೈರಸ್ ಪ್ರಕರಣಗಳಿವೆ. ಒಟ್ಟು ಸಕ್ರಿಯ ಪ್ರಕರಣಗಳು 2,50,183ಕ್ಕೆ ಇಳಿಕೆಯಾಗಿದ್ದು, ಒಟ್ಟು ಚೇತರಿಕೆ 99,06,387ಕ್ಕೆ ಏರಿಕೆಯಾಗಿದೆ. ಇದುವರೆಗೂ 1,49,218 ಒಟ್ಟು ಕೋವಿಡ್ ಸೋಂಕಿತರು ಬಲಿಯಾಗಿದ್ದಾರೆ.

India Registers 19,078 New Covid-19 Cases, 224 Deaths In Last 24 Hours

ದೇಶದಾದ್ಯಂತ ಶನಿವಾರದಿಂದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಲಸಿಕೆಯ ಪೂರ್ವಾಭ್ಯಾಸ ಆರಂಭವಾಗಿದೆ. ಕರ್ನಾಟಕ, ದೆಹಲಿ, ಜಾರ್ಖಂಡ್, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಗುಜರಾತ್, ಕೇರಳ, ಪಂಜಾಬ್, ಹರ್ಯಾಣಗಳಲ್ಲಿ ಲಸಿಕೆಯ ಡ್ರೈ ರನ್ ನಡೆಯುತ್ತಿದೆ. ಒಟ್ಟು 116 ಜಿಲ್ಲೆಗಳ 259 ಕೇಂದ್ರಗಳಲ್ಲಿ ತಾಲೀಮು ನಡೆಯಲಿದೆ.

English summary
India has registered 19,078 new coronavirus case and 224 deaths in last 24 hours. 22,926 people were discharged in one day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X