ಅಮರನಾಥ ಯಾತ್ರೆಯ ನೋಂದಣಿ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ
ಶ್ರೀನಗರ, ಏಪ್ರಿಲ್ 22: ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಅಮರನಾಥ ಯತ್ರೆಯ ನೋಂದಣಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕೊರೊನಾ ಪರಿಸ್ಥಿತಿ ಮೇಲೆ ನಿರಂತರ ನಿಗಾ ಇಡಲಾಗುತ್ತದೆ. ಕೊರೊನಾ ಸೋಂಕಿನ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಮರನಾಥ ದೇಗುಲ ಮಂಡಳಿ ಟ್ವೀಟ್ ಮಾಡಿದೆ.

ಪರಿಸ್ಥಿತಿ ಸುಧಾರಿಸಿದ ನಂತರ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದೆ. ಅಮರನಾಥ ಯಾತ್ರೆಯ ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ಇದೇ 15ರಿಂದ ಪ್ರಾರಂಭಿಸಲಾಗಿತ್ತು. ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ 3,888ಮೀಟರ್ ಎತ್ತರದ ಅಮರನಾಥ ಗುಹೆಯ ದೇಗುಲದಲ್ಲಿರುವ ಹಿಮದ ಶಿವಲಿಂಗ ದರ್ಶನದ 56 ದಿನಗಳ ಯಾತ್ರೆಯು ಜೂನ್ 28ರಂದು ಪ್ರಾರಂಭವಾಗಿ ಆಗಸ್ಟ್ 22ರಂದು ಮುಕ್ತಾಯಗೊಳ್ಳಲಿದೆ ಎಂದು ತಿಳಿಸಲಾಗಿತ್ತು.












Click it and Unblock the Notifications