Breaking; ಮಾ. 27ರಿಂದ ಅಂತಾರಾಷ್ಟ್ರೀಯ ವಿಮಾನ ಆರಂಭ

ನವದೆಹಲಿ, ಮಾರ್ಚ್ 08; ಭಾರತದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕೋವಿಡ್ ನಿರ್ಬಂಧಗಳನ್ನು ಭಾರತ ಸರ್ಕಾರ ತೆಗೆದುಹಾಕುತ್ತಿದೆ. ಮಾರ್ಚ್ 27ರಿಂದ ಸಾಮಾನ್ಯ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಆರಂಭಿಸಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ.

ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿತ್ತು. ವಿಶೇಷ ವಿಮಾನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು.

ಈಗ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಎರಡು ವರ್ಷಗಳ ಬಳಿಕ ಸಾಮಾನ್ಯ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ಆರಂಭಿಸುವುದಾಗಿ ಸರ್ಕಾರ ಹೇಳಿದೆ.

Regular International Flight Operations From 27th March

ಮಾರ್ಚ್‌ 27ರಿಂದ ಭಾರತದ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ, ಲ್ಯಾಂಡಿಂಗ್‌ಗೆ ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಈ ಮೂಲಕ ಸಾವಿರಾರು ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

ಮಂಗಳವಾರದ ಹೆಲ್ತ್ ಬುಲೆಟಿನ್ ಪ್ರಕಾರ ಭಾರತದಲ್ಲಿ 3,993 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 24 ಗಂಟೆಯಲ್ಲಿ 108 ಜನರು ಮೃತಪಟ್ಟಿದ್ದಾರೆ. ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 49,948 ಆಗಿದೆ.

ಕೋವಿಡ್ ಪ್ರಕರಣಗಳಲ್ಲಿನ ಗಣನೀಯ ಇಳಿಕೆ ಹಿನ್ನಲೆಯಲ್ಲಿ ಸಾಮಾನ್ಯ ಅಂತಾರಾಷ್ಟ್ರೀಯ ವಿಮಾನಗಳ ಸೇವೆಯನ್ನು ಪುನಃ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ವಿಮಾನಯಾನ ಸಚಿವಾಲಯ ಹೇಳಿದೆ.

ಕೇಂದ್ರ ಸರ್ಕಾರ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ 2020ರ ಮಾರ್ಚ್‌ 23ರಂದು ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಆದರೆ ಭಾರತ ಮತ್ತು ಇತರ 40 ದೇಶಗಳ ನಡುವೆ ವಿಶೇಷ ವಿಮಾನಗಳ ಸಂಚಾರಕ್ಕೆ ಜುಲೈ 2020ರಲ್ಲಿ ಅವಕಾಶ ನೀಡಲಾಗಿತ್ತು.

ಸಚಿವರ ಟ್ವೀಟ್; ಕೇಂದ್ರ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಟ್ವೀಟ್‌ ಮಾಡಿದ್ದು, "ನಾವು ಮಾರ್ಚ್ 27ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ತೀರ್ಮಾನಿಸಿದ್ದೇವೆ. ಬಳಿಕ ಏರ್ ಬಬಲ್ ಆದೇಶವನ್ನು ಸಹ ವಾಪಸ್ ಪಡೆಯಲಾಗುತ್ತದೆ. ಈ ತೀರ್ಮಾನದಿಂದ ವಿಮಾನಯಾನ ಕ್ಷೇತ್ರ ಹೊಸ ಎತ್ತರಕ್ಕೆ ಏರಲಿದೆ" ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+