ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾಗೆ 47 ಲಕ್ಷ ಭಾರತೀಯರ ಸಾವು: WHO ವಾದ ತಿರಸ್ಕರಿಸಿದ ಭಾರತ

|
Google Oneindia Kannada News

ನವದೆಹಲಿ, ಮೇ 5: ದೇಶದಲ್ಲಿ ಕೊರೊನಾ ವೈರಸ್ ಸಾವಿನ ಪ್ರಕರಣಗಳ ಸಂಖ್ಯೆಯನ್ನು ಲೆಕ್ಕಾಚಾರ ಮಾಡಲು ವಿಶ್ವ ಆರೋಗ್ಯ ಸಂಸ್ಥೆಯ ಗಣಿತದ ಮಾದರಿಯ ಬಳಕೆಯನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಈ ಅಂಕಿ-ಸಂಖ್ಯೆಗಳು ವಾಸ್ತವ ಚಿತ್ರಣದಿಂದ ಸಂಪೂರ್ಣ ಭಿನ್ನವಾಗಿದೆ ಎಂದು ಹೇಳಿದೆ.

ದೇಶವು ಜನನ ಮತ್ತು ಮರಣ ನೋಂದಣಿಗೆ "ಅತ್ಯಂತ ದೃಢವಾದ" ವ್ಯವಸ್ಥೆಯನ್ನು ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರತಿಪಾದಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ದತ್ತಾಂಶ ಸಂಗ್ರಹದ ವ್ಯವಸ್ಥೆಯು "ಸಂಖ್ಯಾಶಾಸ್ತ್ರೀಯವಾಗಿ ಮತ್ತು ವೈಜ್ಞಾನಿಕವಾಗಿ ಅಸ್ಪಷ್ಟ ಹಾಗೂ ಪ್ರಶ್ನಾರ್ಹವಾಗಿದೆ" ಎಂದು ದೂಷಿಸಿದೆ.

ಮಕ್ಕಳಿಗೆ ಕೋವ್ಯಾಕ್ಸಿನ್ ಬೂಸ್ಟರ್; ವೈದ್ಯಕೀಯ ಪ್ರಯೋಗಕ್ಕೆ ಅನುಮತಿ ಕೋರಿದ ಭಾರತ್ ಬಯೋಟೆಕ್ ಮಕ್ಕಳಿಗೆ ಕೋವ್ಯಾಕ್ಸಿನ್ ಬೂಸ್ಟರ್; ವೈದ್ಯಕೀಯ ಪ್ರಯೋಗಕ್ಕೆ ಅನುಮತಿ ಕೋರಿದ ಭಾರತ್ ಬಯೋಟೆಕ್

ಗುರುವಾರ ಬಿಡುಗಡೆಯಾದ ವರದಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು 2020ರ ಜನವರಿ ಮತ್ತು 2021ರ ಡಿಸೆಂಬರ್ ಅವಧಿಯಲ್ಲಿ ಭಾರತದಲ್ಲಿ ಕೋವಿಡ್-19 ಸೋಂಕಿನಿಂದ 47 ಲಕ್ಷಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಹೇಳಿತ್ತು. ಇದು ವಾಸ್ತವ ಅಂಕಿ-ಅಂಶಗಳಿಗೆ ಹೋಲಿಸಿದರೆ 10 ಪಟ್ಟು ಹೆಚ್ಚಾಗಿದ್ದು, ಜಾಗತಿಕ ಮಟ್ಟದಲ್ಲಿ ಸಾವಿನ ಪ್ರಮಾಣದ ಮೂರನೇ ಒಂದು ಭಾಗದಷ್ಟಿದೆ.

India rejects To WHO Claims Of 4.7 Million coronavirus Deaths

ಭಾರತದ ವಿರೋಧ; "ಭಾರತದ ಹದಿನೇಳು ರಾಜ್ಯಗಳಿಗೆ ಸಂಬಂಧಿಸಿದಂತೆ ಅಂಕಿ-ಅಂಶಗಳನ್ನು ಕೆಲವು ವೆಬ್‌ಸೈಟ್‌ಗಳು ಮತ್ತು ಮಾಧ್ಯಮ ವರದಿಗಳಿಂದ ಪಡೆಯಲಾಗಿದೆ. ಅವುಗಳನ್ನು ಗಣಿತದ ಮಾದರಿಯಲ್ಲಿ ಬಳಸಲಾಗಿದೆ ಎಂಬ ವಿಶ್ವ ಆರೋಗ್ಯ ಸಂಸ್ಥೆಯ ವಾದವನ್ನು ಭಾರತ ಪ್ರಶ್ನಿಸಿದೆ," ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಈ ಮಾದರಿಯು ಹೆಚ್ಚಿನ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಹೇಳುತ್ತವೆ. ಆದರೆ ಸಂಖ್ಯಾಶಾಸ್ತ್ರೀಯವಾಗಿ ಮತ್ತು ವೈಜ್ಞಾನಿಕವಾಗಿ ಅಸ್ಪಷ್ಟ ಹಾಗೂ ಪ್ರಶ್ನಾರ್ಹವಾಗಿದೆ ಎಂಬುದನ್ನು ಡೇಟಾ ಸಂಗ್ರಹಣೆಯ ವಿಧಾನ ಪ್ರತಿಬಿಂಬಿಸುತ್ತದೆ" ಎಂದು ಹೇಳಿದೆ.

India rejects To WHO Claims Of 4.7 Million coronavirus Deaths

2,992 ಮಂದಿಗೆ ಕೊವಿಡ್; ಭಾರತದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಎರಡು ಸಾವಿರದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 2,992 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 55 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 3,010 ಸೋಂಕಿತರು ಗುಣಮುಖರಾಗಿದ್ದಾರೆ.

ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,091,393ಕ್ಕೆ ಏರಿಕೆಯಾಗಿದೆ. ಈ ಪೈಕಿ 42,547,699 ಸೋಂಕಿತರು ಗುಣಮುಖರಾಗಿದ್ದರೆ, 523,975 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 19,719 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
India rejects to World Health Organisation (WHO) claims of 4.7 Million coronavirus deaths.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X