ಜುಲೈ 11 ರ ತನಕ ತಮಿಳುನಾಡಿಗೆ ಕಾವೇರಿ ಹರಿಸಿ, ಕರ್ನಾಟಕಕ್ಕೆ ಸೂಚನೆ

By: ವಿಕಾಸ್ ನಂಜಪ್ಪ
Subscribe to Oneindia Kannada

ಕಾವೇರಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಂಗಳವಾರ(ಮಾರ್ಚ್ 21) ಸೂಚಿಸಿದೆ.

ಮುಂದಿನ ವಿಚಾರಣೆಯನ್ನು ಜುಲೈ 11ಕ್ಕೆ ತ್ರಿಸದಸ್ಯ ಪೀಠ ಮುಂದೂಡಿದೆ. ಮುಂದಿನ ವಿಚಾರಣೆ ತನಕ ಪ್ರತಿನಿತ್ಯ ತಮಿಳುನಾಡಿಗೆ 2,000 ಕ್ಯೂಸೆಕ್ಸ್ ನೀರು ಹರಿಸುವುದು ಕರ್ನಾಟಕಕ್ಕೆ ಅನಿವಾರ್ಯವಾಗಿದೆ.[ಟೈಮ್ ಲೈನ್ : ಸಂವಿಧಾನ ಬಿಕ್ಕಟ್ಟಿನ ಹಾದಿ ಹಿಡಿದ ಕಾವೇರಿ ವಿವಾದ]

Release 2,000 cusecs of Cauvery water to TN, SC tells Karnataka

1892ರಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಆಗಿದ್ದ ಒಪ್ಪಂದ ಸಾಧುವೇ? ಅಂದು ಬಳಸಿದ ಮಾನದಂಡ ಯಾವುದು? ಇತ್ತೀಚಿನ ಅಂಕಿ ಅಂಶಗಳ ಬಳಸಿ ಸಮೀಕ್ಷೆ ನಡೆಸುತ್ತಿಲ್ಲ ಏಕೆ? ಎಂಬ ಪ್ರಶ್ನೆಗಳನ್ನು ಕರ್ನಾಟಕದ ಪರ ವಕೀಲ ಫಾಲಿ ನಾರಿಮನ್ ಕೇಳಿದರು.

ಫೆಬ್ರವರಿ 7 ರ ತನಕ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿತ್ತು. ಇದರಿಂದ ಕರ್ನಾಟಕಕ್ಕೆ ನಿರಾಳತೆ ಸಿಕ್ಕಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವ ಸಂಕಟದಿಂದ ಸದ್ಯಕ್ಕೆ ಬಚಾವಾಗಿತ್ತು. ಅಲ್ಲಿ ತನಕ ಮಧ್ಯಂತರ ಆದೇಶ ಜಾರಿಯಲ್ಲಿರಲಿದ್ದು,

ಪ್ರತಿನಿತ್ಯ ತಮಿಳುನಾಡಿಗೆ 2,000 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಸೂಚಿಸಲಾಗಿತ್ತು.
ಕಾವೇರಿ ನೀರಿನಲ್ಲಿ ಬಳಸಲು ಲಭ್ಯವಿರುವ 740 ಟಿಎಂಸಿ ನೀರಿನಲ್ಲಿ ಕರ್ನಾಟಕ 270 ಟಿಎಂಸಿ, ತಮಿಳುನಾಡು 419, ಕೇರಳ 30 ಮತ್ತು ಪಾಂಡಿಚೇರಿ 7 ಟಿಎಂಸಿ ನೀರಿಗೆ ಅರ್ಹ ಎಂದು ನ್ಯಾಯಾಧೀಕರಣ ತೀರ್ಪಲ್ಲಿ ಹೇಳಿತ್ತು.

007ರ ಫೆಬ್ರವರಿ 5ರಂದು ಕಾವೇರಿ ನೀರು ನ್ಯಾಯಾಧೀಕರಣ ನೀಡಿದ್ದ ತೀರ್ಪನ್ನು ಕರ್ನಾಟಕ ಮತ್ತು ತಮಿಳುನಾಡುಗಳೆರಡೂ ಪ್ರಶ್ನಿಸಿದ್ದವು. ಆದರೆ, ಈ ತೀರ್ಪು ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ಸಮಾನ ಎಂದು ಕೇಂದ್ರ ಸರಕಾರ ತಗಾದೆ ಎತ್ತಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Supreme Court on Tuesday ordered Karnataka to continue releasing 2,000 cusecs of Cauvery water to Tamil Nadu on a daily basis. The court also posted the matter for final hearing on July 11. Karnataka would have to continue releasing water to TN until the SC hears the matter next, a Division Bench headed by Justice Dipak Mishra said.
Please Wait while comments are loading...