ರಿಲಯನ್ಸ್ ಫೌಂಡೇಶನ್ನ ವಿದ್ಯಾರ್ಥಿವೇತನ ಫಲಿತಾಂಶ ಪ್ರಕಟ: 5100 ಯುಜಿ, ಪಿಜಿ ವಿದ್ಯಾರ್ಥಿಗಳು ಆಯ್ಕೆ
ಮುಂಬೈ: ರಿಲಯನ್ಸ್ ಫೌಂಡೇಶನ್ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ ನೀಡಿದೆ. ರಿಲಯನ್ಸ್ ಸಂಸ್ಥಾಪಕ ಹಾಗೂ ಮಾಜಿ ಅಧ್ಯಕ್ಷರಾದ ಧೀರೂಭಾಯಿ ಅಂಬಾನಿಯವರ 93ನೇ ಜಯಂತಿ ಹಿನ್ನೆಲೆ ಫೌಂಡೇಶನ್ ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ತನ್ನ ಪ್ರತಿಷ್ಠಿತ ಪದವಿ (UG) ಮತ್ತು ಸ್ನಾತಕೋತ್ತರ (PG) ವಿದ್ಯಾರ್ಥಿವೇತನಗಳ ಫಲಿತಾಂಶವನ್ನು ಶನಿವಾರ ಬಿಡುಗಡೆ ಮಾಡಿದೆ. ಎಷ್ಟು ವಿದ್ಯಾರ್ಥಿಗಳಿಗೆ ಸಿಕ್ಕ ಆರ್ಥಿಕ ನೆರವು ಎಷ್ಟು? ಇಲ್ಲಿದೆ ವಿವರ.
2025-26ನೇ ಸಾಲಿನಲ್ಲಿ ಭಾರತಾದ್ಯಂತ 5,000 ಯುಜಿ ಹಾಗೂ 100 ಪಿಜಿ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಯುಜಿ ವಿದ್ಯಾರ್ಥಿಗಳಿಗೆ ಗರಿಷ್ಠ 2,00,000 ರೂಪಾಯಿ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ ಗರಿಷ್ಠ 6,00,000 ಲಕ್ಷವರೆಗೆ ಆರ್ಥಿಕ ನೆರವವನ್ನು ಫೌಂಡೇಶನ್ ನೀಡಲಿದೆ. 2022ರಲ್ಲಿ ರಿಲಯನ್ಸ್ ಫೌಂಡೇಶನ್ನ ಮುಂದಿನ 10 ವರ್ಷಗಳಲ್ಲಿ 50,000 ವಿದ್ಯಾರ್ಥಿಗಳಿಗೆ ವೇತನಗಳನ್ನು ನೀಡುವುದಾಗಿ ಘೋಷಿಸಿತ್ತು. ಅದರ ಭಾಗವಾಗಿ ಈ ವರ್ಷದ ವಿದ್ಯಾರ್ಥಿವೇತನ ಬಿಡುಗಡೆ ಮಾಡಿದೆ. ಈವರೆಗೆ ಸಂಸ್ಥೆಯು 33,471 ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಒದಗಿಸಿ ಶಿಕ್ಷಣಕ್ಕೆ ಉತ್ತೇಜನ ನೀಡಿದೆ.

1.25 ಲಕ್ಷಕ್ಕೂ ಹೆಚ್ಚು ಅರ್ಜಿಗಳ ಸಲ್ಲಿಕೆ
ಈ ವರ್ಷ ವಿದ್ಯಾರ್ಥಿವೇತನಕ್ಕೆ ಮಾಡಲಾದ ಆಯ್ಕೆ ಪ್ರಕ್ರಿಯೆ ಒಂದು ರೀತಿಯಲ್ಲಿ ಸ್ಪರ್ಧಾತ್ಮಕವಾಗಿತ್ತು. ದೇಶಾದ್ಯಂತ 1.25 ಲಕ್ಷಕ್ಕೂ ಹೆಚ್ಚು ಅರ್ಜಿಗಳಲ್ಲಿ ಸಲ್ಲಿಕೆ ಆಗಿದ್ದವು. 28 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 5,100 ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಆಗಿವೆ. ಅವರೆಲ್ಲ ದೇಶದ 15,544 ಶೈಕ್ಷಣಿಕ ಸಂಸ್ಥೆಗಳನ್ನು ಪ್ರತಿನಿಧಿಸುತ್ತಿದ್ದಾರೆ. ಸಂಸ್ಥೆಯ ಈ ಯೋಜನೆಯು ಅಖಿಲ ಭಾರತ ಮಟ್ಟದ ಪಾಲ್ಗೊಳ್ಳುವಿಕೆಯನ್ನು ಎತ್ತಿ ತೋರಿಸಿದೆ.
ಭಾರತದ ಯುವಜನತೆಯಲ್ಲಿ ಅಪಾರ ಪ್ರತಿಭೆ ಮತ್ತು ದೃಢ ಸಂಕಲ್ಪವಿದೆ. ನಮ್ಮ ವಿದ್ಯಾರ್ಥಿ ವೇತನಗಳು ಕೇವಲ ಆರ್ಥಿಕ ನೆರವಿಗೆ ಸೀಮಿತವಲ್ಲ. ಅಗತ್ಯ ಮಾರ್ಗದರ್ಶನ (ಮೆಂಟರ್ಶಿಪ್) ನೀಡುತ್ತದೆ. ಸಹಪಾಠಿಗಳ ಬಲಿಷ್ಠ ಜಾಲ ಹಾಗೂ ನಾಯಕತ್ವ ಸೃಷ್ಟಿಗೆ ಅವಕಾಶಗಳನ್ನು ಒದಗಿಸುತ್ತದೆ. ಹೊಸ ವಿದ್ಯಾರ್ಥಿವೇತನ ಪಡೆದವರು ಹಳೆಯ ಮಿತಿಗಳನ್ನು ಮೀರಿ ದೊಡ್ಡ ಕನಸು ಕಾಣಬೇಕು ಮತ್ತು 'ವಿಕಸಿತ ಭಾರತ' ಗುರಿಯತ್ತ ಮುನ್ನಡೆಯಬೇಕು ಎಂದು ರಿಲಯನ್ಸ್ ಫೌಂಡೇಶನ್ ವಕ್ತಾರರು ತಿಳಿಸಿದರು.
ಆಯ್ಕೆಯಲ್ಲಿ ವೈವಿಧ್ಯ ಮತ್ತು ಶ್ರೇಷ್ಠತೆಗೆ ಆದ್ಯತೆ
ಆರ್ಥಿಕ ನೆರವಿಗೆ ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ ವೈವಿಧ್ಯ ಮತ್ತು ಶೈಕ್ಷಣಿಕ ಶ್ರೇಷ್ಠತೆ ಪರಿಗಣಿಸಿ ಆಯ್ಕೆ ಮಾಡಲಾಗಿದೆ. ಆಯ್ಕೆ ಆದವರಲ್ಲಿ ಶೇಕಡಾ 83ರಷ್ಟು ವಿದ್ಯಾರ್ಥಿಗಳು ವಾರ್ಷಿಕ ಆದಾಯ ₹2.5 ಲಕ್ಷಕ್ಕಿಂತ ಕಡಿಮೆ ಇರುವ ಕುಟುಂಬಗಳಿಂದ ಬಂದಿದ್ದಾರೆ. ಶೈಕ್ಷಣಿಕ ಸಾಧನೆಯ ವಿಚಾರಕ್ಕೆ ಬಂದರೆ ಶೇಕಡಾ 97ರಷ್ಟು ಯುಜಿ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ. ಯುಜಿ ವಿದ್ಯಾರ್ಥಿಗಳಲ್ಲಿ ಶೇಕಡಾ 48ರಷ್ಟು ವಿದ್ಯಾರ್ಥಿನಿಯರು ಮತ್ತು ಶೇಕಡಾ 52ರಷ್ಟು ವಿದ್ಯಾರ್ಥಿಗಳು ಇದ್ದಾರೆ. ಈ ವರ್ಷ 146 ದಿವ್ಯಾಂಗ ವಿದ್ಯಾರ್ಥಿಗಳನ್ನೂ ಆಯ್ಕೆ ಮಾಡಲಾಗಿದೆ ಎಂದರು.
ಆಯ್ಕೆಯಾದ 100 ಪಿಜಿ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ (Artificial Intelligence), ಕಂಪ್ಯೂಟರ್ ಸೈನ್ಸ್ (Computer Science), ನವೀಕರಿಸಬಹುದಾದ ಇಂಧನ (Renewable Energy) ಮತ್ತು ಲೈಫ್ ಸೈನ್ಸಸ್(Life Sciences) ಮೊದಲಾದ ಭವಿಷ್ಯವಿರುವ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಮಹತ್ವದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ
ವಿದ್ಯಾರ್ಥಿ ವೇತನ ಪಡೆಯುವ ವಿದ್ಯಾರ್ಥಿಗಳಿಗೆ ಜಗತ್ತಿನಾದ್ಯಂತ ಇರುವ ಈ ಹಿಂದೆ ಸಂಸ್ಥೆಯಿಂದ ಆರ್ಥಿಕ ಸಹಾಯ ಪಡೆದಿರುವವರ ಜಾಲದೊಂದಿಗೆ ಸಂಪರ್ಕ ಸಾಧಿಸುವ ಅವಕಾಶ ನೀಡಲಾಗುತ್ತದೆ. ತಜ್ಞರ ಜೊತೆ ನಡೆಯುವ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶ ಸಹ ದೊರೆಯಲಿದೆ. ಹಿಂದಿನ ಹಲವಾರು ವಿದ್ಯಾರ್ಥಿಗಳು ದೇಶ ಹಾಗೂ ವಿದೇಶಗಳಲ್ಲಿ ಉತ್ತಮ ಉದ್ಯೋಗಗಳನ್ನು ಪಡೆದಿದ್ದಾರೆ. ಸಂಶೋಧನಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಹೆಸರನ್ನು ಮಿಂಚುವಂತೆ ಮಾಡಿದ್ದಾರೆ.
ಫಲಿತಾಂಶ ಪರಿಶೀಲನೆ ಹೇಗೆ?
ಅರ್ಜಿದಾರರು ವಿದ್ಯಾರ್ಥಿ ವೇತನಕ್ಕೆ ತಾವು ಆಯ್ಕೆ ಆಗಿದ್ದೀರೋ ಇಲ್ಲವೋ? ಎಂದು ಇಲ್ಲಿ ನೀಡಲಾಗಿರುವ scholarships.reliancefoundation.org ವೆಬ್ಸೈಟ್ಗೆ ಭೇಟಿ ನೀಡಿ ಪರಿಶೀಲಿಸಬೇಕು. ನೀವು ನಿಮ್ಮ 17 ಅಂಕಿಯ ಅರ್ಜಿ ಸಂಖ್ಯೆ ಅಥವಾ ನೋಂದಾಯಿತ ಇ-ಮೇಲ್ ಐಡಿಯನ್ನು ನಮೂದಿಸುವ ಫಲಿತಾಂಶವನ್ನು ಪರಿಶೀಲಿಸಬಹುದೆಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
-
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications