ಜೂನ್ 1ರ ಬದಲಿಗೆ ಜೂನ್ 8ರಿಂದ ಮಂದಿರ, ಮಸೀದಿ, ಚರ್ಚ್ ಓಪನ್

ನವದೆಹಲಿ, ಮೇ 30: ಕೊರೊನಾವೈರಸ್ ಸೋಂಕು ಹರಡದಂತೆ ತಡೆಯಲು ಘೋಷಿಸಿದ ಲಾಕ್ಡೌನ್ ಮುಂದುವರೆಸಲಾಗಿದೆ. ಆದರೆ, ಲಾಕ್ಡೌನ್ 5.0ರಲ್ಲಿ ದೇಗುಲ, ಮಸೀದಿ, ಚರ್ಚ್ ಮುಂತಾದ ಧಾರ್ಮಿಕ ಕೇಂದ್ರಗಳು ಸಾರ್ವಜನಿಕರಿಗೆ ಮುಕ್ತವಾಗಲಿದೆ.

Recommended Video

      ಜಗದೀಶ್ ಶೆಟ್ಟರ್ ರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ನಡೆದಿದೆ ಮಾಸ್ಟರ್ ಪ್ಲ್ಯಾನ್ | BJP | BSY |Jagadish Shetter

      ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಎಲ್ಲಾ ರಾಜ್ಯಗಳಲ್ಲಿ ದೇವಾಲಯ, ಚರ್ಚ್, ಮಸೀದಿಗಳನ್ನು ಮುಚ್ಚಲಾಗಿತ್ತು. ಯುಗಾದಿ, ರಾಮನವಮಿ ಸೇರಿದಂತೆ ಯಾವ ಹಬ್ಬಕ್ಕೂ ದೇವಾಲಯಗಳಿಗೆ ಭಕ್ತರ ಪ್ರವೇಶ ಇರಲಿಲ್ಲ. ಅನೇಕ ಕಡೆಗಳಲ್ಲಿ ಜಾತ್ರೆಗಳನ್ನು ನಡೆಸಿ ಲಾಕ್ಡೌನ್ ಉಲ್ಲಂಘಿಸಿದ್ದು, ಸಾಮಾಹಿಕ ನಮಾಜ್, ಪ್ರಾರ್ಥನೆಗೆ ಅವಕಾಶ ಇರದಿದ್ದರೂ ನಿಯಮ ಮೀರಿದ ಘಟನೆಗಳು ದಾಖಲಾಗಿತ್ತು.

      ಆದರೆ, ಗುಡ್ ಫ್ರೈಡೇ, ರಂಜಾನ್ ಸಂದರ್ಭದಲ್ಲಿಯೂ ಚರ್ಚ್, ಮಸೀದಿಗೆ ಜನರು ಭೇಟಿ ನೀಡದಂತೆ ನಿರ್ಬಂಧ ಹೇರಲಾಗಿತ್ತು. ಈಗ ಎಲ್ಲಾ ಧಾರ್ಮಿಕ ಕೇಂದ್ರಗಳ ಬಾಗಿಲು ತೆರೆಯುವ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಶುಕ್ರವಾರ(ಮೇ 30)ದಂದು ಪ್ರಕಟಣೆ ಹೊರಡಿಸಲಾಗಿದೆ.

      ಭಾರತದಲ್ಲಿ 5ನೇ ಹಂತದ ಲಾಕ್ ಡೌನ್ ಘೋಷಿಸಲಾಗಿದ್ದು, ಜೂನ್ 30ರ ತನಕ ಜಾರಿಯಲ್ಲಿರಲಿದೆ. 4ನೇ ಹಂತದ ಲಾಕ್ ಡೌನ್ ಅವಧಿ ಮೇ 31ಕ್ಕೆ ಮುಕ್ತಾಯವಾಗಲಿದೆ.

      ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

      ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

      ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿ ಅನ್ವಯ ಜೂನ್ 8ರಿಂದ ದೇವಾಲಯ, ಚರ್ಚ್, ಮಸೀದಿ ಸೇರಿದಂತೆ ಪ್ರಾರ್ಥನಾ ಮಂದಿರಗಳನ್ನು ತೆರೆಯಲು ಎಲ್ಲಾ ರಾಜ್ಯಗಳಿಗೂ ಅನುಮತಿ ನೀಡಲಾಗಿದೆ. ಇಲ್ಲಿ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಲಿದೆ. ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಆಡಳಿತಾಧಿಕಾರಿಗಳು ಈ ಮಾರ್ಗಸೂಚಿಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರುತ್ತಾರೆ.

      ಜೂನ್ 1ರಿಂದ ಓಪನ್ ಎಂದಿದ್ದ ಕರ್ನಾಟಕ ಸರ್ಕಾರ

      ಜೂನ್ 1ರಿಂದ ಓಪನ್ ಎಂದಿದ್ದ ಕರ್ನಾಟಕ ಸರ್ಕಾರ

      ''ದೇವಸ್ಥಾನಗಳನ್ನು ತೆರೆದರೆ ಮಸೀದಿ, ಚರ್ಚ್‌ಗಳನ್ನೂ ತೆರೆಯಲಾಗುತ್ತದೆ. ಕೇಂದ್ರ ಸರ್ಕಾರಕ್ಕೆ ಮಂಗಳವಾರ ಈ ಬಗ್ಗೆ ಪತ್ರ ಬರೆಯಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್ ತೆರೆಯುವುದು ಸೇರಿ ಹಲವು ಚಟುವಟಿಕೆಗಳಿಗೆ ಅವಕಾಶ ಕೇಳಿದ್ದೇವೆ. ಕೇಂದ್ರದ ಅನುಮತಿಗಾಗಿ ಕಾಯುತ್ತಿದ್ದೇವೆ'' ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರು. ನಂತರ ಜೂನ್ 1ರಿಂದಲೇ ಎಲ್ಲಾ ಧಾರ್ಮಿಕ ಕೇಂದ್ರ ತೆರೆಯಲಾಗುವುದು ಎಂದು ಘೋಷಿಸಿದ್ದರು.

      ಭಕ್ತರಿಗಾಗಿ ಮಾರ್ಗಸೂಚಿ

      ಭಕ್ತರಿಗಾಗಿ ಮಾರ್ಗಸೂಚಿ

      ದೇವಾಲಯ, ಮಸೀದಿ, ಚರ್ಚ್ ಇನ್ನಿತರ ಧಾರ್ಮಿಕ ಕೇಂದ್ರ, ಸಾರ್ವಜನಿಕ ಪೂಜಾಸ್ಥಳಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುತ್ತದೆ. ಅದನ್ನು ಕಡ್ಡಾಯವಾಗಿ ಪಾಲಿಸಬೇಕು. ಆಯಾರಾಜ್ಯಗಳು ಈ ಮಾರ್ಗಸೂಚಿಗೆ ತಕ್ಕ ಬದಲಾವಣೆ ಮಾಡಿಕೊಳ್ಳು ಅಧಿಕಾರ ಹೊಂದಿರುತ್ತವೆ. ಕರ್ನಾಟಕದಲ್ಲಿ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಆನ್‌ಲೈನ್ ಸೇವೆಗಳ ಬುಕ್ಕಿಂಗ್ ಈಗಾಗಲೆ ಆರಂಭವಾಗಲಿದೆ.

      ಜೂನ್ 30ರ ತನಕ ಕಂಟೈನ್ಮೆಂಟ್ ಝೋನ್ ಬಂದ್

      ಜೂನ್ 30ರ ತನಕ ಕಂಟೈನ್ಮೆಂಟ್ ಝೋನ್ ಬಂದ್

      ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿರುವ ಪ್ರದೇಶಕ್ಕೆ ಯಾವುದೇ ವಿನಾಯಿತಿ ಇರುವುದಿಲ್ಲ.ಜೂನ್ 30 ರ ತನಕ ಈ ಪ್ರದೇಶದಲ್ಲಿ ಲಾಕ್ಡೌನ್ ನಿಯಮಗಳು ಮುಂದುವರೆಯಲಿದೆ. ಈ ನಡುವೆ ಇಡೀ ದೇಶದಲ್ಲಿ ರಾತ್ರಿ 9ರಿಂದ ಬೆಳಗ್ಗೆ 5 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಂತಾರಾಜ್ಯ, ರಾಜ್ಯದೊಳಗೆ ಸಾರಿಗೆ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ, ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿದರೆ ಅಲ್ಲಿನ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕಾಗುತ್ತದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+