ದೇವಸ್ಥಾನ, ಮಸೀದಿಗಳಲ್ಲಿ ಮಾಸ್ಕ್ ತೊಟ್ಟ ಭಕ್ತರಿಂದ ಪ್ರಾರ್ಥನೆ ಶುರು!
ಇಂದೋರ್, ಜೂನ್.08: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದಕ್ಕೆ ಅನುಮತಿ ನೀಡಲಾಗಿದೆ. ಮಹಾಮಾರಿ ಅಂಟಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಲು ಕೇಂದ್ರ ಗೃಹ ಸಚಿವಾಲಯವು ಮಾರ್ಗಸೂಚಿಗಳನ್ನು ಹೊರಡಿಸಿದೆ.
Recommended Video
ದೇಶಾದ್ಯಂತ ಸೋಮವಾರ ಮಸೀದಿಗಳಲ್ಲಿ ಭಕ್ತರು ಪ್ರಾರ್ಥನೆ ಮಾಡಿದರೆ, ದೇವಸ್ಥಾನ ಮತ್ತು ಗುರುದ್ವಾರಗಳ ಎದುರು ಭಕ್ತರು ಸಾಲುಗಟ್ಟಿ ನಿಂತಿದ್ದರು. ಉತ್ತರ ಪ್ರದೇಶದ ಲಕ್ನೋದಲ್ಲಿ ಈದ್ಗಾ ಮಸೀದಿ ತೆರೆಯುವುದಕ್ಕೂ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರದ ಮಾರ್ಗಸೂಚಿಯಂತೆ ಮುಖಕ್ಕೆ ಮಾಸ್ಕ್ ತೊಟ್ಟು ಪ್ರಾರ್ಥನೆ ನೆರವೇರಿಸಿದರು.
ಸೋಮವಾರದಿಂದ ದೇಶಾದ್ಯಂತ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ನವದೆಹಲಿಯ ಚಾಂದಿನಿ ಚೌಕ್ ನಲ್ಲಿರುವ ಗೌರಿಶಂಕರ್ ದೇವಸ್ಥಾನದ ಎದುರು ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು.

ಕಲ್ಕಾಜಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರ
ನವದೆಹಲಿಯಲ್ಲಿ ಇರುವ ಕಲ್ಕಾ ಜೀ ದೇವಸ್ಥಾನಕ್ಕೆ ತೆರಳಿದ ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಸರ್ಕಾರದ ನಿಯಮ ಹಾಗೂ ಮಾರ್ಗಸೂಚಿಗಳನ್ನು ಗಮನದಲ್ಲಿ ಇಟ್ಟುಕೊಂಡು ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದರು.

ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಡ್ಡಾಯ
ದೇವಸ್ಥಾನ, ಮಸೀದಿ, ಚರ್ಚ್ ಹಾಗೂ ಪ್ರಾರ್ಥನಾ ಮಂದಿರಗಳು ಸೇರಿದಂತೆ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಅತಿಹೆಚ್ಚು ಸಾರ್ವಜನಿಕರು ಒಂದು ಕಡೆಗಳಲ್ಲಿ ಸೇರದಂತೆ ಎಚ್ಚರಿಕೆ ವಹಿಸುವುದು. ಪ್ರತಿಯೊಬ್ಬರ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಕಂಟೇನ್ಮೆಂಟ್ ಝೋನ್ ಗಳಲ್ಲಿ ತೆರೆಯಲ್ಲ ಧಾರ್ಮಿಕ ಕೇಂದ್ರ
ಕೊರೊನಾ ವೈರಸ್ ಸೋಂಕು ಹರಡದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಇದರ ಜೊತೆಗೆ ಕಂಟೇನ್ಮೆಂಟ್ ಝೋನ್ ಗಳಿಂದ ಹೊರಭಾಗಗಳಲ್ಲಿ ಮಾತ್ರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಕಂಟೇನ್ಮೆಂಟ್ ಝೋನ್ ಗಳಲ್ಲಿ ಮೊದಲಿನಂತೆ ಧಾರ್ಮಿಕ ಕೇಂದ್ರಗಳು ಬಂದ್ ಆಗಿರಲಿವೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಧಾರ್ಮಿಕ ಕೇಂದ್ರಗಳಲ್ಲಿ ಸಾಮಾನ್ಯ ನಿಯಮ ಪಾಲನೆ ಅತ್ಯಗತ್ಯ
- ಧಾರ್ಮಿಕ ಕೇಂದ್ರದ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ನಿಂದ ಕೈ ತೊಳೆದುಕೊಳ್ಳುವುದು ಕಡ್ಡಾಯ.
- ಕೊರೊನಾ ವೈರಸ್ ಸೋಂಕಿತ ಲಕ್ಷಣಗಳಿಲ್ಲದ ವ್ಯಕ್ತಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ.
- ಮುಖಕ್ಕೆ ಬಟ್ಟೆ ಮತ್ತು ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರವೇಶಿಸಲು ಅನುಮತಿ.
- ಧಾರ್ಮಿಕ ಕೇಂದ್ರಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡುವಿಕೆಯಿಂದ ದೂರವಿರಲು ಅನುಸರಿಸಬೇಕಾದ ಸಾಮಾನ್ಯ ನಿಯಮಗಳ ಬಗ್ಗೆ ಪೋಸ್ಟರ್, ಬ್ಯಾನರ್ ಗಳನ್ನು ಹಾಕುವುದು. ಸಾಧ್ಯವಾದಲ್ಲಿ ನಿಯಮಗಳ ಕುರಿತು ಆಡಿಯೋ ರೆಕಾರ್ಡ್ ಗಳನ್ನು ಹಾಕುವುದು.
- ಚಪ್ಪಲಿ ಮತ್ತು ಶೂಗಳನ್ನು ತಮ್ಮ ಸ್ವಂತ ವಾಹನಗಳಲ್ಲಿ ಬಿಡುವುದು. ಇಲ್ಲದಿದ್ದರೆ ಪ್ರತಿಯೊಬ್ಬರು ಧರಿಸಿದ ಪಾದರಕ್ಷೆಗಳನ್ನು ಪ್ರತ್ಯೇಕವಾಗಿ ಇರಿಸುವುದು.
- ವಾಹನ ನಿಲುಗಡೆ ಪ್ರದೇಶಗಳಲ್ಲೂ ಕೂಡಾ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸುವುದು. ಜನದಟ್ಟಣೆ ಸೇರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು.
- ಧಾರ್ಮಿಕ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಇರುವ ಅಂಗಡಿ, ಕ್ಯಾಂಟೀನ್ ಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಲಕ್ಷ್ಯ ವಹಿಸುವುದು.
- ದೇವರ ದರ್ಶನಕ್ಕೆ ಸಾಲುಗಟ್ಟಿ ನಿಲ್ಲುವ ಸಂದರ್ಭದಲ್ಲಿ ಭಕ್ತರ ನಡುವೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳುವುದು.
- ಧಾರ್ಮಿಕ ಕೇಂದ್ರಗಳಲ್ಲಿ ಪ್ರವೇಶ ದ್ವಾರ ಮತ್ತು ನಿರ್ಗಮನ ದ್ವಾರಗಳು ಪ್ರತ್ಯೇಕವಾಗಿರುವಂತೆ ವ್ಯವಸ್ಥೆ ಕಲ್ಪಿಸುವುದು.
- ಧಾರ್ಮಿಕ ಕೇಂದ್ರಗಳನ್ನು ಪ್ರವೇಶಿಸುವ ಮುನ್ನ ಭಕ್ತರು ಕೈ ಮತ್ತು ಕಾಲುಗಳನ್ನು ಸೋಪಿನಿಂದ ತೊಳೆದುಕೊಳ್ಳುವುದು.
- ಕುಳಿತುಕೊಳ್ಳುವ ಅವಕಾಶವಿದ್ದಲ್ಲಿ ಭಕ್ತರ ನಡುವೆ ಅಂತರ ಕಾಯ್ದುಕೊಳ್ಳವ ನಿಟ್ಟಿನಲ್ಲಿ ವ್ಯವಸ್ಥೆಯನ್ನು ಕಲ್ಪಿಸುವುದು.
- ದೇಗುಲಗಳಲ್ಲಿ ದೇವರ ಮೂರ್ತಿ ಹಾಗೂ ಧಾರ್ಮಿಕ ಪುಸ್ತಕಗಳನ್ನು ಕೈಗಳಿಂದ ಮುಟ್ಟುವುದಕ್ಕೆ ಅವಕಾಶವಿಲ್ಲ.
- ಧಾರ್ಮಿಕ ಭಜನೆ ಪದಗಳನ್ನು ಆಡಿಯೋವನ್ನು ಪ್ರಸಾರ ಮಾಡಲು ಅವಕಾಶ ನೀಡಲಾಗಿದೆ. ಇದರ ಬದಲು ಯಾವುದೇ ರೀತಿ ಭಜನಾ ಮಂಡಳಿಯ ಸದಸ್ಯರಿಗೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಅನುಮತಿ ಇರುವುದಿಲ್ಲ.
- ಧಾರ್ಮಿಕ ಕೇಂದ್ರಗಳಲ್ಲಿ ಯಾವುದೇ ರೀತಿಯ ತೀರ್ಥ ಮತ್ತು ಪ್ರಸಾದವನ್ನು ವಿತರಿಸುವಂತಿಲ್ಲ.
- ಕೊರೊನಾ ವೈರಸ್ ಸೋಂಕು ಹರಡದಂತೆ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು.

ಸಾರ್ವಜನಿಕ ಪ್ರದೇಶಗಳಲ್ಲಿ ನಿಯಮ ಪಾಲನೆ ಕಡ್ಡಾಯ
- ಪ್ರತಿಯೊಬ್ಬ ವ್ಯಕ್ತಿಯು ಸಾರ್ವಜನಿಕ ಪ್ರದೇಶಗಳಲ್ಲಿ ಕನಿಷ್ಠ 6 ಅಡಿ ಅಂತರವನ್ನು ಕಾಯ್ದುಕೊಂಡಿರಬೇಕು.
- ಮುಖಕ್ಕೆ ಬಟ್ಟೆ ಅಥವಾ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
- ಆಗಾಗ ಸೋಪ್ ನಿಂದ ಕನಿಷ್ಠ 40-60 ಸೆಕೆಂಡ್ ಗಳ ಕಾಲ ಕೈತೊಳೆದುಕೊಳ್ಳುವುದನ್ನು ರೂಢಿಸಿಕೊಳ್ಳಬೇಕು.
- ಸಾಧ್ಯವಾದಲ್ಲಿ ಆಲ್ಕೋಹಾಲ್ ಅಂಶವುಳ್ಳ ಸ್ಯಾನಿಟೈಸರ್ ನಿಂದ 20 ಸೆಕೆಂಡ್ ಕೈಗಳನ್ನು ತೊಳೆಯಿರಿ.
- ಕೆಮ್ಮುವಾಗ, ಸೀನುವಾಗ ಬೇರೆಯವರಿಂದ ಅಂತರ ಕಾಯ್ದುಕೊಳ್ಳಿರಿ ಹಾಗೂ ಕೈ ಹಾಗೂ ಕರ್ಚಿಫ್ ಗಳನ್ನು ಹಿಡಿದುಕೊಳ್ಳಿರಿ.
- ಆರೋಗ್ಯದಲ್ಲಿ ಕೊಂಚ ಏರುಪೇರು ಆದರೂ ಜಿಲ್ಲಾ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿರಿ.
- ಸಾರ್ವಜನಿಕ ಪ್ರದೇಶಗಳಲ್ಲಿ ಉಗುಳುವುದನ್ನು ನಿರ್ಬಂಧಿಸಲಾಗಿದೆ.
- ಎಲ್ಲರೂ ನಿಮ್ಮ ನಿಮ್ಮ ಮೊಬೈಲ್ ನಲ್ಲಿ ಆರೋಗ್ಯ ಸೇತು ಆ್ಯಪ್ ನ್ನು ಡೌನ್ ಲೋಡ್ ಮಾಡಿಕೊಳ್ಳಿ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications