Madhav Gadgil: ಪಶ್ಚಿಮಘಟ್ಟದ ಸಂರಕ್ಷಕ ಖ್ಯಾತಿಯ ಪರಿಸರ ತಜ್ಞ ಮಾಧವ ಗಾಡ್ಗೀಳ್ ಇನ್ನಿಲ್ಲ
ನವದೆಹಲಿ: ಪಶ್ಚಿಮಘಟ್ಟದ ಸಂರಕ್ಷಣೆ ವಿಚಾರದಲ್ಲಿ ಮಹತ್ವದ ಪಾತ್ರ ವಹಿಸಿದ್ದ, ಪರಿಸರ ವಿಜ್ಞಾನಿ ಹಾಗೂ ತಜ್ಞ ಮಾಧವ ಗಾಡ್ಗೀಳ್ (83) ಅವರು ಬುಧವಾರ ರಾತ್ರಿ ಪುಣೆಯಲ್ಲಿ ಮೃತಪಟ್ಟಿದ್ದಾರೆ. ಪಶ್ಚಿಮಘಟ್ಟ ಹಾಗೂ ಪರಿಸರ ಸಂರಕ್ಷಣೆ ಸಂಬಂಧ ಅವರು ಅಪಾರ ಹೋರಾಟ ಮಾಡಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬುಧವಾರ ಮೃತಪಟ್ಟಿದ್ದಾರೆ.
ತಂದೆ ಮಾಧವ ಗಾಡ್ಗೀಳ್ ಅವರು ಮೃತಪಟ್ಟಿರುವ ದುಃಖದ ಸುದ್ದಿಯನ್ನು ಹಂಚಿಕೊಳ್ಳುವುದಕ್ಕೆ ತೀವ್ರ ನೋವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಅವರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು. ಬುಧವಾರ ರಾತ್ರಿ ಅವರು ಪುಣೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ಸಿದ್ಧಾರ್ಥ ಗಾಡ್ಗೀಳ್ ಅವರು ತಿಳಿಸಿದ್ದಾರೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಪಶ್ಚಿಮಘಟ್ಟವು ಪರಿಸರ ಸಂರಕ್ಷಣೆ ಹಾಗೂ ಜೀವವೈವಿಧ್ಯತೆ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸಿದೆ. ಈ ಪಶ್ಚಿಮಘಟ್ಟದ ಬಗ್ಗೆ ಧ್ವನಿ ಎತ್ತಿದ ಮೊದಲಿಗರಲ್ಲಿ ಮಾಧವ ಗಾಡ್ಗೀಳ್ ಅವರ ಹೆಸರು ಮುಂಚೂಣಿಯಲ್ಲಿತ್ತು.

ಮಾಧವ ಗಾಡ್ಗೀಳ್ ನಿಧನಕ್ಕೆ ಗಣ್ಯರ ಸಂತಾಪ
ಮಾಧವ ಗಾಡ್ಗೀಳ್ ನಿಧನ ಸುದ್ದಿ ಕೇಳಿ ಹಲವರು ಕಂಬನಿ ಮಿಡಿದಿದ್ದಾರೆ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು, ಖ್ಯಾತ ಪರಿಸರ ವಿಜ್ಞಾನಿಗಳಾಗಿದ್ದ ಡಾ. ಮಾಧವ ಗಾಡ್ಗೀಳ್ ಅವರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು. ಪರಿಸರ ಸಂರಕ್ಷಣೆಗೆ ತಮ್ಮ ಬದುಕನ್ನೇ ಮೀಸಲಿಟ್ಟು ದುಡಿದ ಅವರು ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಬಹಳಷ್ಟು ಕೆಲಸ ಮಾಡಿ, ಆ ನಿಟ್ಟಿನಲ್ಲಿ ಸಂರಕ್ಷಣಾ ವರದಿಯನ್ನು ನೀಡಿದ್ದರು. ಅವರ ಅಗಲಿಕೆ ಪರಿಸರ ಕ್ಷೇತ್ರಕ್ಕೆ ಬಹುದೊಡ್ಡ ನಷ್ಟ. ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಪರಿಸರಾಸಕ್ತರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಪಶ್ಚಿಮಘಟ್ಟದ ಉಳಿವಿಗೆ ಜೀವನ ಮುಡಿಪಾಗಿಟ್ಟಿದ್ದರು
ಭಾರತದ ಹೆಸರಾಂತ ಪರಿಸರ ತಜ್ಞರು, ಪರಿಸರ ವಿಜ್ಞಾನ ಕೇಂದ್ರದ ಸಂಸ್ಥಾಪಕರು ಹಾಗೂ ಪಶ್ಚಿಮಘಟ್ಟ ಪರಿಸರ ಅಧ್ಯಯನದ ತಜ್ಞರ ಸಮಿತಿ (ಗಾಡ್ಗೀಳ್ ಆಯೋಗ)ದ ಅಧ್ಯಕ್ಷರಾಗಿದ್ದ ಮಾಧವ ಗಾಡ್ಗೀಳ್ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಯಿತು ಎಂದು ಸಚಿವ ಈಶ್ವರ ಖಂಡ್ರೆ ಅವರು ಹೇಳಿದ್ದಾರೆ.
ಪರಿಸರ ಸಂರಕ್ಷಣೆಗೆ ಹಾಗೂ ಜೀವವೈವಿಧ್ಯತೆಯ ವಿಶ್ವದ ಅದ್ಭುತ ತಾಣಗಳಲ್ಲಿ ಒಂದಾದ ಪಶ್ಚಿಮಘಟ್ಟದ ಉಳಿವು-ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದ ಗಾಡ್ಗೀಳ್ ಅವರು ತಮ್ಮ 83ನೇ ವಯಸ್ಸಿನಲ್ಲಿ ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ; ಅವರ ಕುಟುಂಬ ಸದಸ್ಯರು, ಅಭಿಮಾನಿಗಳು ಮತ್ತು ಶಿಷ್ಯವರ್ಗಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಹಲವು ನದಿಗಳ ಮೂಲಸ್ಥಾನವಾಗಿರುವ, ಆಮ್ಲಜನಕದ ಕಣಜವೆನಿಸಿರುವ ಹಾಗೂ ಮುಂಗಾರು ಮಾರುತಗಳನ್ನು ತಡೆದು ದೇಶವ್ಯಾಪಿ ಮಳೆಯಾಗಲು ಸಹಕಾರಿಯಾಗಿರುವ ಪಶ್ಚಿಮಘಟ್ಟಗಳ ಗಿರಿಪ್ರದೇಶಗಳು ಗಣಿಗಾರಿಕೆ ಹಾಗೂ ಮಾಲಿನ್ಯಕಾರಿ ಕೈಗಾರಿಕೆಗಳಿಂದ ಕ್ರಮೇಣ ನಾಶವಾಗುತ್ತಿರುವ ಕುರಿತು ಗಾಡ್ಗೀಳ್ ಅವರು ಸದಾ ತಮ್ಮ ಕಳವಳ ವ್ಯಕ್ತಪಡಿಸುತ್ತಿದ್ದರು. ಅವರು ಸಲ್ಲಿಸಿರುವ ವರದಿಯಲ್ಲಿನ ಅಂಶಗಳು ಪ್ರಕೃತಿ ಹಾಗೂ ಪರಿಸರ ಸಂರಕ್ಷಣೆಗೆ ಭಾರತಕ್ಕೆ ಮಾರ್ಗದರ್ಶಿ ಸೂತ್ರಗಳಾಗಿವೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಸಂತಾಪ
ಭಾರತದ ಖ್ಯಾತ ಹಿರಿಯ ಪರಿಸರ ವಿಜ್ಞಾನಿ, ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿಯ ಮಾಜಿ ಅಧ್ಯಕ್ಷ ಪ್ರೊ. ಮಾಧವ್ ಗಾಡ್ಗೀಳ್ ಅವರ ನಿಧನದಿಂದ ಭಾರತದ ಪರಿಸರ ಹೋರಾಟದ ಒಂದು ಮಹತ್ವದ ಅಧ್ಯಾಯ ಅಂತ್ಯಗೊಂಡಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಪರಿಸರ ಹೋರಾಟದ ಧ್ರುವತಾರೆಯಂತಿದ್ದ ಅವರು ಪಶ್ಚಿಮ ಘಟ್ಟಗಳ ಉಳಿವಿಗಾಗಿ ನೀಡಿದ ಕೊಡುಗೆ ಅನನ್ಯ. ಪ್ರಕೃತಿಯನ್ನು ಪ್ರೀತಿಸುವುದು ಎಂದರೆ ಕೇವಲ ಮರಗಿಡಗಳನ್ನು ಬೆಳೆಸುವುದಲ್ಲ, ಮಣ್ಣಿನ ಗುಣವನ್ನು ಅರಿತು ಅದರೊಂದಿಗೆ ಬದುಕುವುದು- ಇದು ಗಾಡ್ಗೀಳ್ ಅವರ ಬದುಕಿನ ಮಂತ್ರವಾಗಿತ್ತು ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಪರಿಸರ ವಿಜ್ಞಾನ ಕೇಂದ್ರವನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪದ್ಮಶ್ರೀ ಪ್ರಶಸ್ತಿ, ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ, ಚಾಂಪಿಯನ್ಸ್ ಆಫ್ ದಿ ಅರ್ಥ್ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು. ಭಗವಂತನು ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬ, ಅಭಿಮಾನಿಗಳಿಗೆ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications