Breaking: ಭಾರತದಲ್ಲಿ 24 ಗಂಟೆಗಳಲ್ಲಿ 3207 ಮಂದಿಗೆ ಕೊರೊನಾವೈರಸ್!
ನವದೆಹಲಿ, ಮೇ 9: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಸೋಂಕಿತ ಪ್ರಕಣಗಳ ಸಂಖ್ಯೆಯಲ್ಲಿ ಕ್ರಮೇಣ ಏರಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ 3207 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿನಿಂದ 29 ಮಂದಿ ಪ್ರಾಣ ಬಿಟ್ಟಿದ್ದಾರೆ. ಇನ್ನೊಂದು ದಿಕ್ಕಿನಲ್ಲಿ 3410 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಇದುವರೆಗೂ 4,25,60,905 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,093 ಮಂದಿ ಪ್ರಾಣ ಬಿಟ್ಟಿದ್ದು, ಮೃತ ಪ್ರಮಾಣ ಶೇ.1.22ರಷ್ಟಿದೆ.

ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ
ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 20,403 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.05ರಷ್ಟಿದೆ. ಇನ್ನೊಂದು ದಿಕ್ಕಿನಲ್ಲಿ ಕೋವಿಡ್-19 ಲಸಿಕೆ ವಿತರಣೆಗೆ ವೇಗ ನೀಡಲಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲೇ 13,50,622 ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದ್ದು, ಇದುವರೆಗೂ 1,90,34,90,396 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications