ಮಧ್ಯಪ್ರದೇಶ ಚುನಾವಣೆ 2023; ಬಿಜೆಪಿಗೆ ಮತ್ತೆ ಸಿಗಲಿದೆ ಅಧಿಕಾರ!
ಭೋಪಾಲ್, ನವೆಂಬರ್ 30: ಮಧ್ಯಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು Republic Tv-MATRIZ ನಡೆಸಿದ ಚುನಾವಣೋತ್ತರ ಸಮೀಕ್ಷೆ ಹೇಳಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿ ಅಧಿಕಾರ ಕಳೆದುಕೊಳ್ಳಲಿವೆ ಎಂದು ಅಂದಾಜಿಸಿತ್ತು.
ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು. ಡಿಸೆಂಬರ್ 3ರ ಭಾನುವಾರ ಮತ ಎಣಿಕೆ ನಡೆಯಲಿದೆ. ಗುರುವಾರ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿವೆ.

2024ರ ಲೋಕಸಭೆ ಚುನಾವಣೆಗೂ ಮೊದಲು ನಡೆಯುತ್ತಿರುವ 5 ರಾಜ್ಯಗಳ ಚುನಾವಣಾ ಫಲಿತಾಂಶ ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ. ವಿವಿಧ ರಾಷ್ಟ್ರೀಯ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ಗುರುವಾರ ಸಂಜೆ ಪ್ರಕಟಗೊಂಡಿವೆ. ಬಿಜೆಪಿಗೆ ಹೊಸ ಶಕ್ತಿ ತುಂಬಿವೆ.
ಮಧ್ಯಪ್ರದೇಶ ರಾಜ್ಯದ ಚುನಾವಣೆ ಕುರಿತು Republic Tv-MATRIZ ನಡೆಸಿದ ಸಮೀಕ್ಷೆ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಪಡೆಯಲಿದೆ. ರಾಜ್ಯದ ಪ್ರತಿಪಕ್ಷವಾದ ಕಾಂಗ್ರೆಸ್ ಸೋಲು ಕಾಣಲಿದೆ ಎಂದು ಅಂದಾಜಿಸಿವೆ.
2018ರ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್ ಎಸ್ಪಿ, ಬಿಎಸ್‌ಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿತ್ತು. ಆದರೆ 2020ರಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ ನೀಡಿದ್ದರು. ಆಗ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿಯಾಗಿದ್ದರು.
ಮಧ್ಯಪ್ರದೇಶ ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 230. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. Republic Tv-MATRIZ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ 118-130, ಕಾಂಗ್ರೆಸ್ 97-107 ಮತ್ತು ಇತರರು 2 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ.












Click it and Unblock the Notifications