ಮತ್ತೊಮ್ಮೆ, ಮುಸ್ಲಿಮರಿಗೆ ಮೀಸಲಾತಿ ನೀಡುವುದು ಸಂವಿಧಾನಕ್ಕೆ ವಿರುದ್ಧ ಎಂದ ಗೃಹ ಸಚಿವ ಅಮಿತ್ ಶಾ
ಮುಂಬೈ, ಜೂನ್. 12: ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವುದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಹೇಳಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಒಂಬತ್ತು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಭ್ರಮಾಚರಣೆಯ ಅಂಗವಾಗಿ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮಿತ್ ಶಾ ಈ ಮಾತನ್ನು ಪುನರುಚ್ಛರಿಸಿದ್ದಾರೆ.
"ಸಂವಿಧಾನಕ್ಕೆ ವಿರುದ್ಧವಾಗಿರುವ ಕಾರಣ ಮುಸ್ಲಿಮರಿಗೆ ಯಾವುದೇ ಮೀಸಲಾತಿ ನೀಡಬಾರದು ಎಂದು ಬಿಜೆಪಿ ನಂಬುತ್ತದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ಸಾಧ್ಯವಿಲ್ಲ" ಎಂದಿದ್ದಾರೆ. ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೋಮು ಘರ್ಷಣೆಗಳು ಮತ್ತು ಪಕ್ಕದ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸರ್ಕಾರವು ರಾಜ್ಯದಲ್ಲಿನ ಮುಸ್ಲಿಮರ ಮಿಸಲಾತಿ ಕೋಟಾವನ್ನು ರದ್ದುಗೊಳಿಸಿತ್ತು ಇದರ ನಡುವೆ ಅಮಿತ್ ಶಾ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಮಾಜಿ ಮಿತ್ರ ಮತ್ತು ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ವಿರುದ್ಧ ದಾಳಿ ಮಾಡಿದ ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ, "ಮುಸ್ಲಿಮರಿಗೆ ಮೀಸಲಾತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ಉದ್ಧವ್ ಠಾಕ್ರೆ ನಾಂದೇಡ್ ಜನರಿಗೆ ತಿಳಿಸಬೇಕು" ಎಂದು ಪರೋಕ್ಷವಾಗಿ ತಿವಿದಿದ್ದಾರೆ..
ಇದರ ಜೊತೆಗೆ ಅಯೋಧ್ಯೆಯಲ್ಲಿ ತ್ರಿವಳಿ ತಲಾಖ್ ಮತ್ತು ರಾಮಮಂದಿರದ ಬಗ್ಗೆ ಮಾಜಿ ಮುಖ್ಯಮಂತ್ರಿಗಳ ನಿಲುವನ್ನು ಅವರು ಪ್ರಶ್ನಿಸಿದ್ದಾರೆ. "ಶಿವಸೇನೆ (ಯುಬಿಟಿ) ಮೈತ್ರಿ ಪಾಲುದಾರ ಕಾಂಗ್ರೆಸ್ ವೀರ್ ಸಾವರ್ಕರ್ ಹೆಸರನ್ನು ಇತಿಹಾಸದಿಂದ ತೆಗೆದುಹಾಕಲು ಬಯಸಿದೆ. ನೀವು [ಉದ್ಧವ್ ಠಾಕ್ರೆ] ಅದನ್ನು ಒಪ್ಪುತ್ತೀರಾ..?" ಎಂದಿ ಅಮಿತ್ ಶಾ ಪ್ರಶ್ನಿಸಿದ್ದಾರೆ.
ಶಿವಸೇನೆಯಲ್ಲಿನ ಒಡಕನ್ನು ಉಲ್ಲೇಖಿಸಿದ ಗೃಹ ಸಚಿವರು, ಉದ್ಧವ್ ಠಾಕ್ರೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. "ನಿಮ್ಮ ರಾಜಕೀಯ ಮತ್ತು ಸಿದ್ಧಾಂತದಿಂದ ಬೇಸತ್ತು ಶಿವಸೈನಿಕರು ನಿಮ್ಮನ್ನು ಬಿಟ್ಟು ನಮ್ಮ ಬಳಿಗೆ ಬಂದಿದ್ದಾರೆ. ನಿಜವಾದ ಶಿವಸೇನೆ ಯಾರೆಂದು ನಮಗೆಲ್ಲರಿಗೂ ತಿಳಿದಿದೆ, ಅವರಿಗೆ ಬಿಲ್ಲು ಮತ್ತು ಬಾಣದ ಚಿಹ್ನೆ ಕೂಡ ಸಿಕ್ಕಿದೆ" ಎಂದು ಏಕನಾಥ್ ಶಿಂಧೆ ಬಣವನ್ನು ಹೊಗಳಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ತವರು ನಾಂದೇಡ್‌ಗೆ ಬಂದಿಳಿದ ನಂತರ, ಬಿಜೆಪಿಯ ಹಿರಿಯ ನಾಯಕ ತಖತ್ ಸಚ್ ಖಂಡೇಲ್ವಾಲ್ ಶ್ರೀ ಹಜೂರ್ ಅಬ್ಚಲನಗರ ಸಾಹಿಬ್ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರಿ. 2024 ರ ಲೋಕಸಭಾ ಚುನಾವಣೆಯ ಮೊದಲು ನಾಂದೇಡ್‌ನಲ್ಲಿ ನಡೆದ ಅವರ ಮೊದಲ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
"ರಾಹುಲ್ ಬಾಬಾ ಯಾವಾಗಲೂ ವಿದೇಶಕ್ಕೆ ಹೋಗಿ ಸರ್ಕಾರವನ್ನು ಟೀಕಿಸಲು ಇಷ್ಟಪಡುತ್ತಾರೆ ಬಹುಶಃ ಇಲ್ಲಿ ಯಾರೂ ಅವರ ಮಾತನ್ನು ಕೇಳುವುದಿಲ್ಲ. ಏಕೆಂದರೆ ಮೋದಿಜಿ ಅವರು ಪ್ರಪಂಚದ ಎಲ್ಲೇ ಹೋದರೂ ಎಲ್ಲರೂ ಪ್ರೀತಿಯಿಂದ ಸ್ವಾಗತಿಸುತ್ತಾರೆ. ಮೋದಿಜಿ ಭಾರತದ ಹೆಮ್ಮೆ ಮತ್ತು ನಮ್ಮ ಪ್ರಧಾನಿಯಿಂದಾಗಿ ಭಾರತವು ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ" ಎಂದು ಅಮಿತ್ ಶಾ ಹೇಳಿದ್ದಾರೆ.












Click it and Unblock the Notifications