ಮೀಸಲಾತಿ ಕುರಿತ ಸುಪ್ರೀಂ ಆದೇಶ ಸ್ವಾಗತಿಸಿದ ಮಾಯಾವತಿ
ಬೆಂಗಳೂರು, ಸೆಪ್ಟೆಂಬರ್ 26 : ಎಸ್‌ಸಿ ಮತ್ತು ಎಸ್‌ಟಿಯ ಸರ್ಕಾರಿ ನೌಕರರಿಗೆ ಬಡ್ತಿ ನೀಡುವಾಗ ಮೀಸಲಾತಿ ಅಗತ್ಯವಿಲ್ಲ ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಬಿಎಸ್‌ಪಿ ನಾಯಕಿ ಮಾಯಾವತಿ ಸ್ವಾಗತಿಸಿದರು.
ಸುಪ್ರೀಂಕೋರ್ಟ್ ಆದೇಶದ ಬಳಿಕ ಮಾತನಾಡಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು, ಕೆಲವೊಂದು ವಿಚಾರಗಳಿಗೆ ಈ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.
'ಮೀಸಲಾತಿ ನೀಡಲೇಬಾರದು ಎಂದು ಸುಪ್ರೀಂಕೋರ್ಟ್ ಹೇಳಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಸಿದರೆ ಮೀಸಲಾತಿ ನೀಡಬಹುದು ಎಂದು ಹೇಳಿದೆ. ಆದ್ದರಿಂದ, ತೀರ್ಪನ್ನು ಸ್ವಾಗತಿಸುತ್ತೇನೆ' ಎಂದು ತಿಳಿಸಿದರು.

ಎಸ್‌ಸಿ/ಎಸ್‌ಟಿ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಬುಧವಾರ ತೀರ್ಪು ನೀಡಿತ್ತು. 2006ರಲ್ಲಿ ನೀಡಿದ ತೀರ್ಪಿನ ಮರುಪರಿಶೀಲನೆಯ ಅಗತ್ಯವಿಲ್ಲ ಎಂದು ಹೇಳಿತ್ತು.
ಹಲವು ವರ್ಷಗಳಿಂದ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದವರಿಗೆ ಅನ್ಯಾಯವಾಗಿದೆ. ಸಮಯದಾಯದ ನೌಕರರು ಹಿಂದುಳಿದವರು ಎಂದು ಭಾವಿಸಲಾಗಿದೆ. ಈ ಹಿನ್ನಲೆಯಲ್ಲಿ ಮುಂಬಡ್ತಿಯಲ್ಲಿ ಅವರಿಗೆ ಶೇ 22.5ರಷ್ಟು ಮೀಸಲು ನೀಡಬೇಕು ಎಂದು ಒತ್ತಾಯಿಸಲಾಗಿತ್ತು.












Click it and Unblock the Notifications